ಮೆಟ್ರೋದಿಂದ ಟ್ರಾಫಿಕ್ ಸಮಸ್ಯೆ ಬಗೆಹರಿಸಲು ನಟರಾಜು ಮನವಿ

ತುಮಕೂರು:

      ನಗರದ ಮಂಡಿಪೇಟೆಯಲ್ಲಿ ನೂತನವಾಗಿ ಆರಂಭವಾಗಿರುವ ಮೆಟ್ರೋದಿಂದ ಮಂಡಿಪೇಟೆ ರಸ್ತೆಯಲ್ಲಿ ಪ್ರತಿನಿತ್ಯ ಟ್ರಾಫಿಕ್ ಸಮಸ್ಯೆ ಉಂಟಾಗುತ್ತಿದ್ದು, ಈ ಸಮಸ್ಯೆಯನ್ನು ಬಗೆಹರಿಸುವಂತೆ ಮೆಟ್ರೋ ವ್ಯವಸ್ಥಾಪಕ ನಿರ್ದೇಶಕರಾದ ಮಂಜುನಾಥ್ ಮತ್ತು ಟ್ರಾಫಿಕ್ ಇನ್ಸ್‍ಪೆಕ್ಟರ್ ಶಿವಕುಮಾರ್ ಅವರಿಗೆ ಸಮಾಜ ಸೇವಕರು ಹಾಗೂ ಆರ್ಯವೈಶ್ಯ ಮುಖಂಡರಾದ ನಟರಾಜು ಒತ್ತಾಯಿಸಿದರು.

      ಮಂಡಿಪೇಟೆಯ ವರ್ತಕರು ಮತ್ತು ಸಾರ್ವಜನಿಕರೊಂದಿಗೆ ನಟರಾಜು ಅವರು, ತೆರಳಿ ಮೆಟ್ರೋ ವ್ಯವಸ್ಥಾಪಕ ನಿರ್ದೇಶಕ ಮಂಜುನಾಥ್ ಅವರೊಂದಿಗೆ ಟ್ರಾಫಿಕ್ ಸಮಸ್ಯೆ ಬಗ್ಗೆ ಚರ್ಚಿಸಿ, ನೀವು ಮೆಟ್ರೋ ಆರಂಭಿಸಿರುವುದರಿಂದ ಈ ಭಾಗದಲ್ಲಿ ಟ್ರಾಫಿಕ್ ಸಮಸ್ಯೆ ಹೆಚ್ಚಾಗಿದೆ. ಈ ಭಾಗದ ವರ್ತಕರು ಮತ್ತು ಸಾರ್ವಜನಿಕರು ಪ್ರತಿನಿತ್ಯ ತೊಂದರೆ ಅನುಭವಿಸುತ್ತಿದ್ದಾರೆ. ಕೂಡಲೇ ಸಮಸ್ಯೆ ನಿವಾರಣೆಗೆ ಕ್ರಮ ವಹಿಸಬೇಕೆಂದು ಮನವಿ ಮಾಡಿದರು.

      ಸ್ಥಳಕ್ಕೆ ಆಗಮಿಸಿದ ಟ್ರಾಫಿಕ್ ಪೊಲೀಸ್ ಠಾಣೆಯ ಇನ್ಸ್‍ಪೆಕ್ಟರ್ ಶಿವಕುಮಾರ್ ಅವರು, ಸಮಾಜ ಸೇವಕರಾದ ನಟರಾಜು ಸೇರಿದಂತೆ ವರ್ತಕರು ಹಾಗೂ ಸಾರ್ವಜನಿಕರೊಂದಿಗೆ ಕೆಲಹೊತ್ತು ಚರ್ಚೆ ನಡೆಸಿದರು. ಇವರ ಮನವಿಗೆ ಸ್ಪಂದಿಸಿದ ಅವರು ಇನ್ನು ಮುಂದೆ ತೊಂದರೆ ಆಗದಂತೆ ನೋಡಿಕೊಳ್ಳುತ್ತೇವೆ ಎಂದು ಭರವಸೆ ನೀಡಿದರು.

(Visited 4 times, 1 visits today)

Related posts

Leave a Comment