ಮಧುಗಿರಿ : 

        ಕುಂಚಿಟಿಗ ಅಭಿವೃದ್ಧಿ ನಿಗಮ ಸ್ಥಾಪನೆ ಮತ್ತು ಕುಂಚಿಟಿಗ ಜನಾಂಗವನ್ನು ಓಬಿಸಿ ಪಟ್ಟಿಗೆ ಸೇರಿಸುವಂತೆ ಒತ್ತಾಯಿಸಿ ಎಲೆರಾಂಪುರ ಕುಂಚಿಟಿಗ ಮಠದ ಪೀಠಾಧ್ಯಕ್ಷ ಶ್ರೀ ಶ್ರೀ ಶ್ರೀ ಹನುಮಂತನಾಥಸ್ವಾಮಿ ನೇತೃತ್ವದಲ್ಲಿ ರಾಜ್ಯ ಕುಂಚಿಟಿಗ ಸಂಘದ ಪದಾಧಿಕಾರಿಗಳು ಹಾಗೂ ಶಿವಮೊಗ್ಗ, ಮೈಸೂರು, ತುಮಕೂರು ಸಂಘದ ಪದಾಧಿಕಾರಿಗಳು ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನವರನ್ನು ಬೇಟಿ ಮಾಡಿ ಮನವಿ ಪತ್ರ ಸಲ್ಲಿಸಿದರು.

       ರಾಜ್ಯದಲ್ಲಿ ಸುಮಾರು 25 ಲಕ್ಷ ಕುಂಚಿಟಿಗ ಜನಾಂಗವಿದ್ದು, ತುಮಕೂರು ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ರಾಮನಗರ, ಶಿವಮೊಗ್ಗ ಜಿಲ್ಲೆಗಳು ಸೇರಿದಂತೆ 18 ವಿಧಾನ ಸಭಾ ಕ್ಷೇತ್ರಗಳಲ್ಲಿ ಕುಂಚಿಟಿಗ ಜನಾಂಗ ಪ್ರಭಲ್ಯ ಹೊಂದಿದ್ದು, ಕೆಲವು ವಿಧಾನ ಸಭಾ ಕ್ಷೇತ್ರಗಳಲ್ಲಿ ಕುಂಚಿಟಿಗ ಜನಾಂಗದ ಮತಗಳು ನಿರ್ಣಾಯಕ ಮತಗಳಾಗಿವೆ ಆದರೆ ರಾಜಕೀಯ ಪಕ್ಷಗಳು ಸಮಾಜವನ್ನು ಚುನಾವಣಾ ಸಮಯದಲ್ಲಿ ಓಟ್ ಬ್ಯಾಂಕಿಗೋಸ್ಕರ ಬಳಸಿಕೊಳ್ಳುತ್ತಿದ್ದೆ ಮತ್ತು ಚುನಾವಣಾ ಸಮಯದಲ್ಲಿ ಮಾತ್ರ ನೆನಪಿಗೆ ಬರುತ್ತದೆ. ಸಮಾಜ ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಆರ್ಥಿಕವಾಗಿ ರಾಜಕೀಯವಾಗಿ ಹಿಂದುಳಿದ ಸಮುದಾಯವಾಗಿದ್ದು, 40 ವರ್ಷಗಳಿಂದ ಕುಂಚಿಟಿಗ ಸಮಾಜವನ್ನು ಒಬಿಸಿ ಪಟ್ಟಿಗೆ ಸೇರಿಸದೇ ಇರುವುದರಿಂದ ಶೈಕ್ಷಣಿಕವಾಗಿ ಹಿಂದುಳಿದಿದ್ದೇವೆ ಇಂತಹ ಸಂದರ್ಬದಲ್ಲಿ ಜನಾಂಗ ಸರ್ವಾಗೀರ್ಣ ಅಭಿವೃದ್ಧಿಗೆ ನಿಗಮ ಮಂಡಳಿ ಸ್ಥಾಪನೆ ಹಾಗೂ ಕೇಂದ್ರ ಸರ್ಕಾರ ಒಬಿಸಿ ಪಟ್ಟಿಗೆ ಸೇರಿಸಲು ಸಹಕರಿಸುವಂತೆ ಒತ್ತಾಯಿಸಿದರು.

      ಮನವಿ ಪತ್ರ ಸ್ವೀಕರಿಸಿ ಮಾತನಾಡಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೇಂದ್ರ ಸರ್ಕಾರದಕ್ಕೆ ಒಬಿಸಿ ಪಟ್ಟಿಗೆ ಸೇರಿಸಲು ಶೀಫಾರಸ್ಸು ಮಾಡಲಾಗುವುದು ಹಾಗೂ ನಿಗಮ ಮಂಡಳಿ ಸ್ಥಾಪನೆಗೆ ಚರ್ಚಿಸಿ ಶೀಘ್ರವೇ ತೀರ್ಮಾನ ಕೈಗೊಳ್ಳಲಾಗುವುದು ಎಂದರು.

      ಈ ಸಂದರ್ಭದಲ್ಲಿ ಕುಂಚಿಟಿಗರ ಸಂಘದ ಅಧ್ಯಕ್ಷ ವಿನಯ್ ಕುಮಾರ್ ಪೂಜಾರ್, ಶಿಕಾರಿಪುರದ ಕುಂಚಿಟಿಗ ಸಂಘದ ಪದಾಧಿಕಾರಿಗಳಾದ ರುದ್ರಪ್ಪ, ಜಗದೀಶ್ ಇದ್ದರು.

(Visited 11 times, 1 visits today)