ಗ್ರಾಪಂ ಕಟ್ಟಡ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ ನಡೆಸಿದ ಆಡಳಿತಾಧಿಕಾರಿ

ತುಮಕೂರು : 

     ರಾಷ್ಟ್ರೀಯ ಹೆದ್ಧಾರಿ 2006 ರಸ್ತೆಗೆ ಹೊಂದಿಕೊಂಡಿರುವ ಮಲ್ಲಸಂದ್ರ ಗ್ರಾಮ ಪಂಚಾಯಿತಿ ನೂತನ ಕಟ್ಟಡ ನಿರ್ಮಾಣ ಮಾಡಲು ಆಡಳಿತಾಧಿಕಾರಿ ಸ್ಥಳ ಪರಿಶೀಲನೆ ನೆಡೆಸಿದರು.

      ತಾಲೂಕಿನ ಮಲ್ಲಸಂದ್ರ ಗ್ರಾಮದಲ್ಲಿ ರಾಷ್ಟ್ರೀಯ ಹೆದ್ಧಾರಿ ಅಗಲೀಕರಣದಿಂದ ಗ್ರಾಮ ಪಂಚಾಯಿತಿತೆರವಾಗುತ್ತಿರುವ ಹಿನ್ನೇಲೆಯಲ್ಲಿ ಗ್ರಾಮ ಪಂಚಾಯಿತಿ ಕಟ್ಟಡವನ್ನು ಸ್ಥಳಾಂತರಿಸಲಾಗುತ್ತಿದ್ದು,ನೂತನ ಕಟ್ಟಡವನ್ನು ನಿರ್ಮಾಣ ಮಾಡಲು ಗ್ರಾಮ ಪಂಚಾಯಿತಿಯ ಆಡಳಿತಾಧಿಕಾರಿ ಡಾ.ಕೆ ನಾಗಣ್ಣ ಪಂಚಾಯಿತಿ ಅಭಿವೃದ್ಧಿ ಅಕಾರಿಗಳೊಂದಿಗೆ ಸ್ಥಳ ಪರಿಶೀಲನೆ ಮಾಡಿದರು.

      ಈ ಸಂದರ್ಭದಲ್ಲಿ ಆಡಳಿತಾಧಿಕಾರಿ ಡಾ.ಕೆ ನಾಗಣ್ಣ ಮಾತನಾಡಿ,ಗ್ರಾಮ ಪಂಚಾಯಿತಿಯನ್ನು ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಮಾಡುವ ಹಿನ್ನೇಲೆಯಲ್ಲಿ ಪಂಚಾಯಿತಿಯನ್ನು ಸ್ಥಳಾಂತರ ಮಾಡಬೇಕಿದೆ.

      ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಹಿಂಭಾಗ ಸರ್ವೆ ನಂಬರ್ 34 ರಲ್ಲಿ 1.5 ಎಕರೆ ಜಾಗವಿದ್ದು,ಈ ಜಾಗದಲ್ಲಿ ಸುಸರ್ಜಿತವಾಗಿ ಗ್ರಾಮ ಪಂಚಾಯಿತಿಯ ಹೊಸ ಕಟ್ಟಡವನ್ನು ಸುಮಾರು 60-70 ಲಕ್ಷಗಳಲ್ಲಿ ನಿರ್ಮಾಣ ಮಾಡಲಾಗುವುದು.ಶೀಘ್ರವೇ ಕಾಮಗಾರಿ ಆರಂಭ ಮಾಡುವುದಾಗಿ ಹೇಳಿದರು.
ಈ ಸಂದರ್ಭದಲ್ಲಿ ತಾಲೂಕು ಪಂಚಾಯಿ ತಿಯ ಅಕಾರಿ ಶಿವಪ್ರಸಾದ್,ಪಿಡಿಒ ಮಂಜಣ್ಣ ಮುಂತಾದವರು ಇದ್ದರು.

(Visited 5 times, 1 visits today)

Related posts

Leave a Comment