ತುಮಕೂರು : 

     ಜಿಲ್ಲೆಗೆ ಈ ಬಾರಿಯ ವಿಧಾನ ಪರಿಷತ್ ಗೆಲುವು ಜಿಲ್ಲೆಯಲ್ಲಿ ಎಲ್ಲರಲ್ಲೂ ಹೊಸ ಹುರುಪನ್ನು ತಂದಿದೆ ಎಂದು ಶಾಸಕ ಜ್ಯೋತಿಗಣೇಶ್ ವಿಧಾನ ಪರಿಷತ್ ನೂತನ ಸದಸ್ಯರನ್ನು ಅಭಿನಂದಿಸಿ ತಿಳಿಸಿದರು.

      ಪದವಿ ಪೂರ್ವ ಶಿಕ್ಷಣ ಇಲಾಖೆ ,ಜಿಲ್ಲಾ ಪದವಿಪೂರ್ವ ಕಾಲೇಜುಗಳ ಪ್ರಾಚಾರ್ಯರ ಸಂಘದ ವತಿಯಿಂದ ಇಂದು ತುಮಕೂರು ನಗರದ ಜಿಲ್ಲಾ ಕನ್ನಡ ಭವನ ಸಭಾಭವನದಲ್ಲಿ ನೂತನ ವಿಧಾನಪರಿಷತ್ ಸದಸ್ಯರಾದ ಚಿದಾನಂದ ಎಂ.ಗೌಡ ರವರಿಗೆ ಅಭಿನಂದನ ಕಾರ್ಯಕ್ರಮ ಹಮ್ಮಿಕೂಳ್ಳಲಾಗಿತ್ತು.

      ಇನ್ನು ಕಾರ್ಯಕ್ರಮದಲ್ಲಿ ನಿವೃತ್ತ ಪ್ರಾಚಾರ್ಯರು ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗದವರಿಗೆ ಸನ್ಮಾನ ಸೇರಿದಂತೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಣಾ ಕಾರ್ಯಕ್ರಮ ನಡೆಯಿತು. ಇನ್ನೂ ಕಾರ್ಯಕ್ರಮದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ತುಮಕೂರು ನಗರ ಶಾಸಕರಾದ ಜ್ಯೋತಿ ಗಣೇಶ್‍ರವರು ತುಮಕೂರು ಜಿಲ್ಲೆಗೆ ಈ ಬಾರಿಯ ವಿಧಾನ ಪರಿಷತ್ ಗೆಲುವು ಜಿಲ್ಲೆಯಲ್ಲಿ ಎಲ್ಲರಲ್ಲೂ ಹೊಸ ಹುರುಪನ್ನು ತಂದಿದೆ ಎಂದರು ಚಿದಾನಂದ ಗೌಡ ರವರನ್ನ ಆಯ್ಕೆ ಮಾಡಿರುವುದಕ್ಕೆ ಎಲ್ಲರಿಗೂ ಅಭಿನಂದನೆಗಳನ್ನು ಸಲ್ಲಿಸಿದರು .ಚಿದಾನಂದ ಗೌಡರವರು ತುಮಕೂರು ಜಿಲ್ಲೆಯಲ್ಲಿ ಪ್ರತಿಷ್ಠಿತ ಸಂಸ್ಥೆಯನ್ನು ಸ್ಥಾಪಿಸಿದ್ದು ಸುಮಾರು 8ಸಾವಿರ ವಿದ್ಯಾರ್ಥಿಗಳು ಅಧ್ಯಯನ ನಡೆಸುತ್ತಿರುವುದು ನಮ್ಮ ಜಿಲ್ಲೆಯ ಹೆಮ್ಮೆಯ ವಿಷಯ ಇನ್ನೂ ಬಡ ವಿದ್ಯಾರ್ಥಿಗಳನ್ನು ಗುರುತಿಸಿ ಪೆÇ್ರೀತ್ಸಾಹಿಸುವುದು ಐಎಎಸ್ ಜೆಇಇ. ನೀಟ್ ಪರೀಕ್ಷೆಗೆ ಉತ್ತಮ ಶಿಕ್ಷಣವನ್ನು ನೀಡುತ್ತಿರುವ ಚಿದಾನಂದ ಗೌಡ ರವರನ್ನ ಆಯ್ಕೆ ಮಾಡಿರುವ ಎಲ್ಲರಿಗೂ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

     ಇನ್ನು ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ವಿಧಾನ ಪರಿಷತ್ ಸದಸ್ಯರಾದ ಚಿದಾನಂದ ಗೌಡರವರು ಚುನಾವಣೆಯಲ್ಲಿ ಸಹಕರಿಸಿದ ಪ್ರತಿಯೊಬ್ಬ ಮತದಾರರಿಗೂ ಕೃತಜ್ಞತೆ ಸಲ್ಲಿಸಿದರು ಈಗ ಜಾರಿಯಲ್ಲಿರುವ ರಾಷ್ಟ್ರೀಯ ಶಿಕ್ಷಣ ನೀತಿ ಕೇವಲ ಪಾಲಿಸಿ ಯಾಗಿ ಉಳಿಯುವ ಬದಲು ಪ್ರಮಾಣಸಹಿತವಾಗಿ ಉಳಿಯಬೇಕು ಎಂದು ತಿಳಿಸಿದರು .ಇನ್ನು ಶಿಕ್ಷಣ ವ್ಯವಸ್ಥೆಯಲ್ಲಿ ಬದಲಾವಣೆ ಮಾಡುವ ಮೂಲಕ ಶಿಕ್ಷಣ ಕ್ರಾಂತಿ ಮಾಡಬೇಕಾಗಿದೆ . ಇದರಿಂದ ಎಲ್ಲಾ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗದಂತೆ ಕಾಪಾಡುವುದು ಎಲ್ಲರ ಕರ್ತವ್ಯ .ಖಾಸಗಿ ಸಹಭಾಗಿತ್ವದಲ್ಲಿ ಶಾಲೆಗಳನ್ನು ದತ್ತು ತೆಗೆದುಕೊಂಡು ಸರ್ಕಾರಿ ಶಾಲೆಗಳನ್ನು ಮಾದರಿ ಶಾಲೆಯನ್ನಾಗಿ ಪರಿವರ್ತಿಸಬೇಕಾಗಿದೆ ಇದರಲ್ಲಿ ಎಲ್ಲರ ಸಹಕಾರ ಮುಖ್ಯವಾಗಿದೆ ಆದ್ದರಿಂದ ಪ್ರತಿಯೊಬ್ಬರು ಸಹಕರಿಸಿದರೆ ಶಿಕ್ಷಣ ಕ್ಷೇತ್ರದಲ್ಲಿ ಬದಲಾವಣೆಗಳನ್ನು ತರುವ ಮೂಲಕ ರಾಷ್ಟ್ರೀಯ ಶಿಕ್ಷಣ ನೀತಿ ಬಲಪಡಿಸಬೇಕಾಗಿದೆ. ಎಂದು ಚಿದಾನಂದ ಗೌಡರವರು ತಿಳಿಸಿದರು.

      ಕಾರ್ಯಕ್ರಮದಲ್ಲಿ ಪ್ರಾಚಾರ್ಯ ಸಂಘದ ಅಧ್ಯಕ್ಷರಾದ ಲಿಂಗದೇವರು ಪ್ರಧಾನ ಕಾರ್ಯದರ್ಶಿ ಕೆ ಎಸ್ ಸಿದ್ದಲಿಂಗಪ್ಪ, ಸಂಘದ ಖಜಾಂಚಿ ರಾಜಯ್ಯ ,ರಾಜ್ಯ ಪ್ರತಿನಿಧಿ ಜೈರಾಮಯ್ಯ ,ನಾಗರಾಜು ,ಜಯರಾಮ್, ರವಿಕುಮಾರ್ ಸೇರಿದಂತೆ ಇತರರು ಭಾಗವಹಿಸಿದ್ದರು.

(Visited 7 times, 1 visits today)