ತುಮಕೂರು: ಗ್ರಾಮ ಪಂಚಾಯಿತಿ ಚುನಾವಣೆ : ಶಾಂತಿಯುತ ಮತ ಎಣಿಕೆ

ತುಮಕೂರು

      ತುಮಕೂರು ಜಿಲ್ಲೆಯ 327 ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆಯ ಮತ ಎಣಿಕೆಯು ಆಯಾ ತಾಲೂಕು ಕೇಂದ್ರಗಳಲ್ಲಿ ಯಾವುದೇ ಗೊಂದಲವಿಲ್ಲದೇ ಶಾಂತಿಯುತವಾಗಿ ನಡೆಯಿತು.

      ತುಮಕೂರು ತಾಲೂಕಿನ 41 ಗ್ರಾಮ ಪಂಚಾಯಿತಿಗಳು, ಗುಬ್ಬಿ-34, ಕುಣಿಗಲ್-36, ತಿಪಟೂರು-25, ತುರುವೇಕೆರೆ-27, ಚಿಕ್ಕನಾಯಕನಹಳ್ಳಿ-27, ಮಧುಗಿರಿ-39, ಶಿರಾ-41, ಕೊರಟಗೆರೆ-24 ಹಾಗೂ ಪಾವಗಡ ತಾಲೂಕಿನ 33 ಗ್ರಾಮ ಪಂಚಾಯಿತಿಗಳಲ್ಲಿ ಸೇರಿದಂತೆ ಒಟ್ಟು ಜಿಲ್ಲೆಯ 327 ಗ್ರಾಮ ಪಂಚಾಯಿತಿಗಳ ಮತ ಎಣಿಕೆ ಶಾಂತಿಯುತವಾಗಿ ನಡೆಯಿತು.
ಜಿಲ್ಲೆಯಲ್ಲಿ ಗ್ರಾಮಪಂಚಾಯಿತಿಗಳ 2661 ಕ್ಷೇತ್ರಗಳ ಮತ ಎಣಿಕೆಯು 167 ಕೊಠಡಿಗಳಲ್ಲಿ 762 ಟೇಬಲ್‍ಗಳಲ್ಲಿ ನಡೆದಿದ್ದು, ಮತ ಎಣಿಕೆಗಾಗಿ 817 ಮಂದಿ ಎಣಿಕೆ ಮೇಲ್ವಿಚಾರಕರು, 1624 ಮಂದಿ ಸಹಾಯಕರನ್ನು ನೇಮಿಸಲಾಗಿತ್ತು.

     ತುಮಕೂರು ತಾಲ್ಲೂಕು-ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ತುಮಕೂರು, ಗುಬ್ಬಿ-ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಗುಬ್ಬಿ, ತಿಪಟೂರು-ಪಲ್ಲಗಟ್ಟಿ ಅಡವಪ್ಪ ಕಾಲೇಜು, ತುರುವೇಕೆರೆ-ಸರ್ಕಾರಿ ಪದವಿ ಪೂರ್ವ ಕಾಲೇಜು, ಚಿಕ್ಕನಾಯಕನಹಳ್ಳಿ-ಸರ್ಕಾರಿ ಪದವಿ ಪೂರ್ವ ಕಾಲೇಜು, ಮಧುಗಿರಿ-ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಕುಣಿಗಲ್-ಮಹಾತ್ಮಾಗಾಂಧಿ ಕಾಲೇಜು, ಶಿರಾ-ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಕೊರಟಗೆರೆ-ಸರ್ಕಾರಿ ಪದವಿ ಪೂರ್ವ ಕಾಲೇಜು, ಪಾವಗಡ-ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಮತ ಎಣಿಕೆ ಕೇಂದ್ರಗಳಲ್ಲಿ ಅಭ್ಯರ್ಥಿಗಳು, ಏಜೆಂಟರ್‍ಗಳು ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಂಡು ಭಾಗವಹಿಸಿದ್ದರು. ಯಾವುದೇ ಅಹಿತಕರ ಘಟನೆ ನಡೆಯದಂತೆ ಜಿಲ್ಲಾಡಳಿತ, ಪೊಲೀಸ್ ಇಲಾಖೆ ಮುಂಜಾಗ್ರತೆ ವಹಿಸಿದ್ದು, ಮತ ಎಣಿಕೆಯು ಶಾಂತಿಯುತವಾಗಿ ನಡೆಯಿತು. 

      ಗ್ರಾಮ ಪಂಚಾಯಿತಿ ಚುನಾವಣೆಯ ಮತ ಎಣಿಕೆ ನಡೆಯತ್ತಿದ್ದ ತುಮಕೂರು ನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು, ಕೊರಟಗೆರೆ ಸರ್ಕಾರಿ ಪದವಿ ಪೂರ್ವ ಕಾಲೇಜು ಸೇರಿದಂತೆ ಜಿಲ್ಲೆಯಲ್ಲಿ ಮತ ಎಣಿಕೆ ನಡೆಯುತ್ತಿದ್ದ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ|| ಕೆ.ರಾಕೇಶ್‍ಕುಮಾರ್, ಅಪರ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ ಹಾಗೂ ಸಂಬಂಧಿಸಿದ ಉಪವಿಭಾಗಾಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.

(Visited 6 times, 1 visits today)

Related posts

Leave a Comment