ವಿಶೇಷ ಚೇತನರ ಬೆಳವಣಿಗೆಗೆ ಪ್ರೋತ್ಸಾಹ ಅಗತ್ಯ

 ತುಮಕೂರು:

       ವಿಶೇಷ ಚೇತನರು ಸಹ ಇತರರಂತೆ ಸರ್ವತೋಮುಖ ಬೆಳವಣಿಗೆ ಹೊಂದಲು ಪ್ರೋತ್ಸಾಹಿಸುವುದು ಪೋಷಕರ ಕರ್ತವ್ಯವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎಸ್.ನಟರಾಜ್ ತಿಳಿಸಿದರು.

      ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ನಗರದ ಬಾಲಭವನದಲ್ಲಿಂದು ವಿಕಲಚೇತನ ಮಕ್ಕಳಿಗಾಗಿ ಏರ್ಪಡಿಸಿದ್ದ “ಮಕ್ಕಳೋತ್ಸವ” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ವಿಶೇಷ ಚೇತನರಿಗಾಗಿ ಸರ್ಕಾರ ಹಲವು ಸೌಲಭ್ಯಗಳನ್ನು ಜಾರಿಗೆ ತಂದಿದ್ದು, ಅದರ ಸದುಪಯೋಗಪಡೆದುಕೊಳ್ಳಬೇಕು. ಪ್ರಸ್ತುತ ದಿನಗಳಲ್ಲಿ ವಿಶೇಷ ಚೇತನರು ಸಾಂಸ್ಕøತಿಕ, ಕ್ರೀಡೆ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ಉತ್ತಮ ಸಾಧನೆ ಮಾಡುತ್ತಿದ್ದು, ಅವರ ಕೀರ್ತಿ ಮತ್ತಷ್ಟು ಹೆಚ್ಚಿಸಲು ನಾವೆಲ್ಲರೂ ಕೈಜೋಡಿಸಬೇಕು ಎಂದು ತಿಳಿಸಿದರು.

      ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ವಿಕಲಚೇತನರ ಕೌಶಲ್ಯಾಭಿವೃದ್ಧಿ, ಪುನರ್ವಸತಿ ಮತ್ತು ಸಬಲೀಕರಣದ ಎಡಿಐಪಿ ಯೋಜನೆಯಡಿಯಡಿ ಬುದ್ದಿಮಾಂದ್ಯ ವಿಕಲಚೇತನ ಮಕ್ಕಳಿಗೆ ಸಾಧನ ಸಲಕರಣೆಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ 6 ಶಾಲೆಯ 120 ವಿಕಲಚೇತನ ಮಕ್ಕಳು ಭಾಗವಹಿಸಿದ್ದರು. ವೇಷಭೂಷಣ ಸ್ಪರ್ಧೆಯಲ್ಲಿ ವಿವಿಧ ವೇಷ ತೊಟ್ಟಿದ್ದ ವಿಶೇಷ ಚೇತನ ಮಕ್ಕಳು ಎಲ್ಲರ ಗಮನ ಸೆಳೆದರು.

      ಈ ಸಂದರ್ಭದಲ್ಲಿ ಜಿಲ್ಲಾ ಬಾಲಭವನ ಸಂಘದ ಸದಸ್ಯ ಎಂ.ರಾಮು, ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಕಲ್ಯಾಣಾಧಿಕಾರಿ ಎಂ.ರಮೇಶ್, ಶಿಕ್ಷಕ ಬಿ.ಎಲ್ ಚಂದ್ರಶೇಖರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

(Visited 25 times, 1 visits today)

Related posts

Leave a Comment