BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಮದ್ಯಪ್ರಿಯರ ಅಡ್ಡೆಯಾದ ಸಾರ್ವಜನಿಕ ಆಸ್ತಿ
  • ಗಾಂಧೀಜಿಯವರ ಸತ್ಯ, ಅಹಿಂಸೆ ಮಾರ್ಗ : ಇಡೀ ವಿಶ್ವಕ್ಕೇ ಮಾದರಿ -ಶುಭ ಕಲ್ಯಾಣ್
  • ಸೀರತ್ ಅಭಿಯಾನದ ಭಾಗವಾಗಿ ನವೆಂಬರ್‌ನಲ್ಲಿ ಪ್ರಭಂಧ ಸ್ಪರ್ಧೆ
  • ಕನ್ನಡ ಸಾಹಿತ್ಯ ಪರಿಷತ್ ಕನ್ನಡಿಗರ ಅಸ್ಮಿತೆ
  • ಸರ್ಕಾರಿ ಆಸ್ಪತ್ರೆಯಲ್ಲಿ ಮಕ್ಕಳ ಲಸಿಕೆ, ಮಿಟಮಿನ್ ಹನಿ ಇಲ್ಲದೆ ಪರದಾಟ
  • ಹರಗುರು ಚರಮೂರ್ತಿಗಳು, ಗಣ್ಯರು ಭಾಗಿ: ಆಕರ್ಷಕ ಕಲಾ ಪ್ರದರ್ಶನ
  • ಕನಿಷ್ಠ ವೇತನ ಹೆಚ್ಚಳ ಮುಂದುವರೆಸಿ: ಆಗ್ರಹ
  • ಬೇಸ್ಮೆಂಟ್ ಸಮೇತ ಕುಸಿದು ಬಿದ್ದ ಕಾಲೇಜಿನ ಕಾಂಪೌ0ಡ್
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಪಶು ವೈದ್ಯರ ಕೆಲಸ ದನ ಕರುಗಳಿಗೆ ಚಿಕಿತ್ಸೆ ನೀಡಲಷ್ಟೇ ಸೀಮಿತವಾಗಿಲ್ಲ
ಇತರೆ ಸುದ್ಧಿಗಳು

ಪಶು ವೈದ್ಯರ ಕೆಲಸ ದನ ಕರುಗಳಿಗೆ ಚಿಕಿತ್ಸೆ ನೀಡಲಷ್ಟೇ ಸೀಮಿತವಾಗಿಲ್ಲ

By News Desk BenkiyabaleUpdated:January 20, 2021 6:54 pm

ತುಮಕೂರು : 

     ಪಶುವೈದ್ಯರ ಕೆಲಸ ಇಂದು ದನ ಕರುಗಳಿಗೆ ಚಿಕಿತ್ಸೆ ನೀಡುವುದಕಷ್ಟೇ ಸಿಮೀತವಾಗಿಲ್ಲ.ಪ್ರಾಣಿಯಿಂದ ಮನುಷ್ಯನಿಗೆ ಬರಬಹುದಾದ ರೋಗಗಳನ್ನು ತಡೆಗಟ್ಟಿ, ಜನರ ಆರೋಗ್ಯದ ಕಡೆಗೂ ಹೆಚ್ಚಿನ ಗಮನಹರಿಸುತ್ತಿದ್ದಾರೆ ಎಂದು ಜಿಲ್ಲಾ ಪಂಚಾಯಿತಿ ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷೆ ಶ್ರೀಮತಿ ಮಂಜುಳ ಅಭಿಪ್ರಾಯಪಟ್ಟಿದ್ದಾರೆ.

      ನಗರದ ಶ್ರೀಸಿದ್ದಾರ್ಥ ಎಂಬಿಎ ಸಭಾಂಗಣದಲ್ಲಿ ಕರ್ನಾಟಕ ಪಶು ವೈದ್ಯಕೀಯ ಸಂಘ, ತುಮಕೂರು ಜಿಲ್ಲಾ ಶಾಖೆ ಹಾಗೂ ಪಶುಪಾಲನೆ ಮತ್ತು ಪಶು ವೈದ್ಯಕೀಯ ಇಲಾಖೆಯ ಸಹಯೋಗದಲ್ಲಿ ಏರ್ಪಡಿಸಿದ್ದ ಜಾನುವಾರುಗಳು ಉದರ ಸಂಬಂಧಿ ರೋಗಗಳ ಪತ್ತೆ ಮತ್ತುಚಿಕಿತ್ಸೆ ಎಂಬ ವಿಷಯ ಕುರಿತ ತಾಂತ್ರಿಕ ವಿಚಾರ ಸಂಕಿರಣಕ್ಕೆ ಚಾಲನೆ ನೀಡಿ ಮಾತನಾಡುತಿದ್ದ ಅವರು,ಪ್ರಾಣಿಗಳಿಂದ ಮನುಷ್ಯನಿಗೆ ಹರಡಬಹುದಾದ ರೇಬಿಸಿ ಇನ್ನಿತರ ರೋಗಗಳು ಮಾನವ ಸಂಪನ್ಮೂಲವನ್ನು ಕಡಿಮೆ ಮಾಡದ ರೀತಿಯಲ್ಲಿ ಆಗಿಂದಾಗ್ಗೆ ಇಂತಹ ಕಾರ್ಯಕ್ರಮಗಳ ಮೂಲಕ ಜಾಗೃತಿ ಪಡೆದು, ಹೊಸ ರೋಗಗಳಿಗೆ ಸವಾಲಾಗಿ ಕೆಲಸ ಮಾಡುತ್ತಿದ್ದಾರೆ ಎಂದರು.

       ಕೃಷಿ ಸಂಕಷ್ಟದ ದಿನಗಳಲ್ಲಿ ಇರುವ ಇಂದು, ಹೈನುಗಾರಿಕೆ, ಪಶು ಸಂಗೋಪನಾ ಪ್ರಮುಖ ಸ್ಥಾನ ಪಡೆದುಕೊಳ್ಳುತ್ತಿದೆ. ಪಶುಸಂಗೋಪನೆಗೆ ಅಗತ್ಯವಿರುವ ಸವಲತ್ತು, ತಾಂತ್ರಿಕ ಮಾಹಿತಿ ಮತ್ತು ಸವಲತ್ತುಗಳನ್ನು ಸರಕಾರ ಪಶುವೈದ್ಯರ ಮೂಲಕ ಫಲಾನುಭವಿಗಳಿಗೆ ತಲುಪಿಸುವ ಕೆಲಸವನ್ನು ಮಾಡುತ್ತಿದೆ. ತಮ್ಮ ವೃತ್ತಿಯ ಜೊತೆಗೆ, ಹಲವು ಕೆಲಸಗಳನ್ನು ಪಶುವೈದ್ಯರು ನಡೆಸುತಿದ್ದಾರೆ ಎಂದು ಶ್ರೀಮತಿ ಮಂಜುಳ ನುಡಿದರು.

      ಜಾನುವಾರುಗಳ ಉದರ ಸಂಬಂಧಿ ರೋಗಗಳ ಪತ್ತೆ ಮತ್ತು ಚಿಕಿತ್ಸೆ ಕುರಿತು ವಿಶೇಷ ಉಪನ್ಯಾಸ ನೀಡಿದ ಡಾ.ಮಂಜು ನಾಥ್,ನಾವು ವಿದ್ಯಾರ್ಥಿಗಳಿದ್ದಾಗ ಪಠ್ಯದಿಂದ ಕಲಿತಿದ್ದನ್ನು,ಪಶುವೈದ್ಯರಾಗಿ ಕೆಲಸ ಮಾಡುವ ಸಂದರ್ಭದಲ್ಲಿ ಅಳವಡಿಸಿ ಕೊಂಡು ಉತ್ತಮ ವೈದ್ಯರಾಗಿ ರೂಪುಗೊಳ್ಳಲು ಅವಕಾಶವಿದೆ.ಇಲಾಖೆಯಿಂದ ನಡೆಯುವ ತಾಂತ್ರಿಕ ಕಾರ್ಯಾಗಾರ, ವಿಶೇಷ ಉಪನ್ಯಾಸಗಳ ಮೂಲಕ ಜ್ಞಾನವನ್ನು ಪಡೆದು,ಅದನ್ನು ವೃತ್ತಿ ಜೀವನದಲ್ಲಿ ಅಳವಡಿಸಿಕೊಂಡರೆ, ನಮಗಿರುವ ಇತಿಮತಿಯಲ್ಲಿಯೇ ಜಾನುವಾರುಗಳಿಗೆ ಬರುವ ವಿವಿಧ ಉದರ ಸಂಬಂಧಿರೋಗಗಳನ್ನು ನಿಖರವಾಗಿ ಪತ್ತೆ ಹೆಚ್ಚಿ ಯಶಸ್ವಿ ಚಕಿತ್ಸೆ ನೀಡಲು ಸಾಧ್ಯ ಎಂದರು.

      ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪಶುಸಂಗೋಪನೆ ಮತ್ತು ಪಶುಪಾಲನಾ ಇಲಾಖೆಯ ಉಪನಿರ್ದೇಶಕ ಡಾ.ಜಿ.ಎಂ.ಕೋಟೇಶಪ್ಪ ಮಾತನಾಡಿ,ಜಾನುವಾರುಗಳ ಆರೋಗ್ಯ ಸೇವೆಯಲ್ಲಿ ತೊಡಗಿರುವ ಪಶುವೈದ್ಯರು ಹಲವಾರು ಸಮಸ್ಯೆಗಳನ್ನು ಎದುರಿಸುತಿದ್ದಾರೆ.ನಾವು ವಿದ್ಯಾರ್ಥಿಗಳಿದ್ದಾಗ ಪಠ್ಯದಲ್ಲಿ ಓದಿದ್ದ ಅಫ್ರಿಕಾದಲ್ಲಿ ಪ್ರಾಣಿಗಳಿಗೆ ಕಂಡು ಬರುತ್ತಿದ್ದ ಅನೇಕ ರೋಗಗಳು ಇಂದು ಭಾರತದ ಪ್ರಾಣಿಗಳಲ್ಲಿಯೂ ಕಂಡು ಬರುತ್ತಿವೆ.ಅಲ್ಲದೆ ಪ್ರಾಣಿಗಳಿಂದ ಮನುಷ್ಯನಿಗೆ ಹಲವಾರು ರೋಗಗಳು ಪ್ರಸರಣಗೊಳ್ಳುತ್ತಿವೆ.ಹಾಗಾಗಿ ಇಂದು ಪಶುವೈದ್ಯರು ಕೇವಲ ಪ್ರಾಣಿಗಳಿಗೆ ಬರುವ ರೋಗಗಳ ಬಗ್ಗೆ ಜ್ಞಾನ ಹೊಂದಿದ್ದರೆ ಸಾಲದು, ಎಲ್ಲಾ ರೀತಿಯ ಖಾಯಲೆಗಳ ಬಗ್ಗೆಯೂ ಪ್ರಾಥಮಿಕ ಜ್ಞಾನವನ್ನು ಹೊಂದಿರುವ ಅಗತ್ಯವಿದೆ ಎಂದರು.

      ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಕರ್ನಾಟಕ ಪಶುವೈದ್ಯಕೀಯ ಸಂಘದ ಜಿಲ್ಲಾಧ್ಯಕ್ಷ ಡಾ.ವಿ.ಸಿ. ರುದ್ರಪ್ರಸಾದ್,ಕೋವಿಡ್‍ನಿಂದಾಗಿ ಕಳೆದ ಒಂದು ವರ್ಷದಿಂದ ನಾವು ತಾಂತ್ರಿಕ ಕಾರ್ಯಾಗಾರ ನಡೆಸಲು ಸಾಧ್ಯವಾಗಿ ರಲಿಲ್ಲ.ಇಂದು ಈ ಅವಕಾಶ ದೊರೆತಿದೆ. ಪಶುವೈದ್ಯರು ಪ್ರಾಣಿಗಳ ಉದರ ಸಂಬಂಧಿತ ಹಲವಾರು ಸಮಸ್ಯೆಗಳನ್ನು ಕ್ಷೇತ್ರದಲ್ಲಿ ದಿನನಿತ್ಯ ಎದುರಿಸುತ್ತಿದ್ದೇವೆ.ಹಾಗಾಗಿ ಪಶುವೈದ್ಯರ ಪಾತ್ರ ಇತ್ತೀಚಿನ ದಿನಗಳಲ್ಲಿ ಬಹಳವಾಗಿದೆ.ಅಲ್ಲದೆ ಇತ್ತೀಚಿಗೆ ಸರಕಾರ ಜಾರಿಗೆ ತಂದಿರುವ ಗೋ ಹತ್ಯೆ ನಿಷೇಧ ಕಾಯ್ದೆಯಿಂದ ಪಶುವೈದ್ಯರ ಮೇಲೆ ಅಪಾರ ಹೊರೆ ಬೀಳಲಿದೆ.ಸರಕಾರ ಪ್ರತಿ ತಾಲೂಕಿಗೆ ಎರಡು ಗೋ ಶಾಲೆಗಳನ್ನು ತೆರೆಯಲು ಹೊರಟಿದೆ.ಈ ಹಿಂದೆ ಬರ ಸಂದರ್ಭದಲ್ಲಿ ತೆರೆದ ಗೋಶಾಲೆ ಗಳಲ್ಲಿ ಕೆಲಸ ಮಾಡಿದ ಸುಮಾರು 32 ವೈದ್ಯರ ಮೇಲೆ ಹಾಕಿರುವ ಕೇಸ್‍ಗಳು ಇಂದಿಗೂ ಬಗೆಹರಿದಿಲ್ಲ. ಹೀಗಿರುವಾಗ ಹೊಸ ಗೋಶಾಲೆಗಳಿಂದ ಉದ್ಬವಿಸಬಹುದಾಗ ಸಮಸ್ಯೆ ಹಾಗೂ ಮಾನಸಿಕ ಒತ್ತಡ ಕುರಿತು ನಾವೆಲ್ಲರೂ ಆಲೋಚಿಸ ಬೇಕಾಗಿದೆ.ಹೊಸ ಸಮಸ್ಯೆ ಎದುರಿಸಲು ಸಿದ್ದರಾಗಬೇಕಾಗಿದೆ ಎಂದರು.

     ವೇದಿಕೆಯಲ್ಲಿ ಪಶುವೈದ್ಯಕೀಯ ಸಂಘದ ಪ್ರಧಾನ ಕಾರ್ಯದರ್ಶಿ ಡಾ.ಆರ್.ಎಂ.ನಾಗಭೂಷಣ್,ಉಪಾಧ್ಯಕ್ಷ ಡಾ.ದಿವಾಕರ್, ಡಾ.ಶಶಿಕಲ ಮತ್ತಿತರರು ಉಪಸ್ಥಿತರಿದ್ದರು.

(Visited 13 times, 1 visits today)
Previous Articleದೇಶದ ಸಂಪನ್ಮೂಲವನ್ನು ಕಾರ್ಪೋರೇಟ್ ಸಂಸ್ಥೆಗಳಿಗೆ ಹರಾಜು ಹಾಕಲಾಗುತ್ತಿದೆ
Next Article  ತುಮಕೂರು : ನಾಳೆ ನಗರಕ್ಕೆ ಸಿಎಂ ಭೇಟಿ
News Desk Benkiyabale

Related Posts

ಮದ್ಯಪ್ರಿಯರ ಅಡ್ಡೆಯಾದ ಸಾರ್ವಜನಿಕ ಆಸ್ತಿ

October 02, 2026 6:41 pm news

ಗಾಂಧೀಜಿಯವರ ಸತ್ಯ, ಅಹಿಂಸೆ ಮಾರ್ಗ : ಇಡೀ ವಿಶ್ವಕ್ಕೇ ಮಾದರಿ -ಶುಭ ಕಲ್ಯಾಣ್

October 02, 2026 6:39 pm news

ಸೀರತ್ ಅಭಿಯಾನದ ಭಾಗವಾಗಿ ನವೆಂಬರ್‌ನಲ್ಲಿ ಪ್ರಭಂಧ ಸ್ಪರ್ಧೆ

October 01, 2026 5:34 pm news
ತಾಜಾ ಸುದ್ಧಿಗಳು
news

ಮದ್ಯಪ್ರಿಯರ ಅಡ್ಡೆಯಾದ ಸಾರ್ವಜನಿಕ ಆಸ್ತಿ

October 02, 2026 6:41 pm
news

ಗಾಂಧೀಜಿಯವರ ಸತ್ಯ, ಅಹಿಂಸೆ ಮಾರ್ಗ : ಇಡೀ ವಿಶ್ವಕ್ಕೇ ಮಾದರಿ -ಶುಭ ಕಲ್ಯಾಣ್

October 02, 2026 6:39 pm
news

ಸೀರತ್ ಅಭಿಯಾನದ ಭಾಗವಾಗಿ ನವೆಂಬರ್‌ನಲ್ಲಿ ಪ್ರಭಂಧ ಸ್ಪರ್ಧೆ

October 01, 2026 5:34 pm
news

ಕನ್ನಡ ಸಾಹಿತ್ಯ ಪರಿಷತ್ ಕನ್ನಡಿಗರ ಅಸ್ಮಿತೆ

October 01, 2026 5:32 pm
news

ಸರ್ಕಾರಿ ಆಸ್ಪತ್ರೆಯಲ್ಲಿ ಮಕ್ಕಳ ಲಸಿಕೆ, ಮಿಟಮಿನ್ ಹನಿ ಇಲ್ಲದೆ ಪರದಾಟ

October 01, 2026 5:29 pm
news

ಹರಗುರು ಚರಮೂರ್ತಿಗಳು, ಗಣ್ಯರು ಭಾಗಿ: ಆಕರ್ಷಕ ಕಲಾ ಪ್ರದರ್ಶನ

October 01, 2026 5:27 pm
Our Youtube Channel
Our Picks

ಮದ್ಯಪ್ರಿಯರ ಅಡ್ಡೆಯಾದ ಸಾರ್ವಜನಿಕ ಆಸ್ತಿ

October 02, 2026 6:41 pm

ಗಾಂಧೀಜಿಯವರ ಸತ್ಯ, ಅಹಿಂಸೆ ಮಾರ್ಗ : ಇಡೀ ವಿಶ್ವಕ್ಕೇ ಮಾದರಿ -ಶುಭ ಕಲ್ಯಾಣ್

October 02, 2026 6:39 pm

ಸೀರತ್ ಅಭಿಯಾನದ ಭಾಗವಾಗಿ ನವೆಂಬರ್‌ನಲ್ಲಿ ಪ್ರಭಂಧ ಸ್ಪರ್ಧೆ

October 01, 2026 5:34 pm

ಕನ್ನಡ ಸಾಹಿತ್ಯ ಪರಿಷತ್ ಕನ್ನಡಿಗರ ಅಸ್ಮಿತೆ

October 01, 2026 5:32 pm

ಸರ್ಕಾರಿ ಆಸ್ಪತ್ರೆಯಲ್ಲಿ ಮಕ್ಕಳ ಲಸಿಕೆ, ಮಿಟಮಿನ್ ಹನಿ ಇಲ್ಲದೆ ಪರದಾಟ

October 01, 2026 5:29 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಮದ್ಯಪ್ರಿಯರ ಅಡ್ಡೆಯಾದ ಸಾರ್ವಜನಿಕ ಆಸ್ತಿ

By News Desk BenkiyabaleOctober 02, 2026 6:41 pm

ಹುಳಿಯಾರು: ಜನಸಾಮಾನ್ಯರ ಹಾಗೂ ಬಡವರ ಹಸಿವು ನೀಗಿಸಬೇಕಿದ್ದ ಇಲ್ಲಿನ ಇಂದಿರಾ ಕ್ಯಾಂಟೀನ್ ಸೂಕ್ತ ನಿರ್ವಹಣೆ ಮತ್ತು ನಿರ್ಲಕ್ಷ÷್ಯದಿಂದಾಗಿ ಕಳೆದ ಒಂದು…

ಗಾಂಧೀಜಿಯವರ ಸತ್ಯ, ಅಹಿಂಸೆ ಮಾರ್ಗ : ಇಡೀ ವಿಶ್ವಕ್ಕೇ ಮಾದರಿ -ಶುಭ ಕಲ್ಯಾಣ್

October 02, 2026 6:39 pm

ಸೀರತ್ ಅಭಿಯಾನದ ಭಾಗವಾಗಿ ನವೆಂಬರ್‌ನಲ್ಲಿ ಪ್ರಭಂಧ ಸ್ಪರ್ಧೆ

October 01, 2026 5:34 pm

ಕನ್ನಡ ಸಾಹಿತ್ಯ ಪರಿಷತ್ ಕನ್ನಡಿಗರ ಅಸ್ಮಿತೆ

October 01, 2026 5:32 pm
News by Date
October 2026
M T W T F S S
 1234
567891011
12131415161718
19202122232425
262728293031  
« Sep    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.