ತುಮಕೂರು : 

     ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯ ಅಧಿಕಾರಿಗಳು ಮತ್ತು ನೌಕರರ ಕೇಂದ್ರ ಸಂಘ(ರಿ)ದವತಿಯಿಂದ ಸರಕಾರಕ್ಕೆ ಇಲಾಖೆಯ ನೌಕರರ ಪ್ರಮುಖ ನಾಲ್ಕು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ, ಮನವಿ ಸಲ್ಲಿಸಿದ್ದು, ಸರಕಾರ ಸರಕಾರತ್ಮಕವಾಗಿ ಸ್ಪಂದಿಸಿದೆ ಎಂದು ಆರೋಗ್ಯ ಇಲಾಖೆಯ ನೌಕರರ ಸಂಘದ ರಾಜ್ಯಾಧ್ಯಕ್ಷ ಪುಟ್ಟಸ್ವಾಮಿ ತಿಳಿಸಿದ್ದಾರೆ.

      ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,sಸುಮಾರು 150ಕ್ಕೂ ಹೆಚ್ಚು ವೃಂದಗಳನ್ನು ಹೊಂದಿರುವ ಅತಿ ದೊಡ್ಡ ಇಲಾಖೆ ಇದಾಗಿದ್ದು,ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಸರಕಾರದ ಆರೋಗ್ಯ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ಮಂತ್ರಿಗಳಿಗೆ ಸಲ್ಲಿಸಿದ ಮನವಿಗೆ ಸ್ಪಂದಿಸಿರುವ ಸಚಿವರು, ಪ್ರಧಾನ ಕಾರ್ಯದರ್ಶಿಗಳಿಗೆ ಮುಂದಿನ ಕ್ರಮಕ್ಕಾಗಿ ರವಾನಿಸಿದ್ದಾರೆ ಎಂದರು.

     ಇಲಾಖೆಯ ನೌಕರರು ಪ್ರಮುಖವಾಗಿ ಕೋವಿಡ್ ಸಂದರ್ಭದಲ್ಲಿ ಜೀವದ ಹಂಗು ತೊರೆದು ಕೆಲಸ ಮಾಡಿದ್ದಾರೆ.ಆದರೆ ವೈದ್ಯ ವೃಂದಕ್ಕೆ ಮಾತ್ರ 25 ಸಾವಿರದಿಂದ 1.25 ಲಕ್ಷದ ವರೆಗೆ ವಿಶೇಷ ಭತ್ಯೆ ನೀಡಲಾಗಿದೆ.ಉಳಿದ ಅರೆ ವೈದ್ಯಕೀಯ, ಪ್ಯಾರಾಮೆಡಿಕಲ್,ವಾಹನಗಳ ಚಾಲಕರು ವಿಶೇಷ ಭತ್ಯೆ ನೀಡಿಲ್ಲ.ಈ ರೀತಿಯ ತಾರತಮ್ಯ ಸರಿಯಲ್ಲ.ಕಷ್ಟಪಟ್ಟು ಕಾರ್ಯನಿರ್ವ ಹಿಸಿದ ಎಲ್ಲರಿಗೂ ಸವಲತ್ತು ನೀಡಲು ವಿಶೇಷ ಭತ್ಯೆಯನ್ನು ಮಂಜೂರು ಮಾಡಬೇಕೆಂದು ಒತ್ತಾಯಿಸಿದರು.

      ಆರೋಗ್ಯ ಇಲಾಖೆಯಲ್ಲಿ ಕಳೆದ 30 ವರ್ಷಗಳಿಂದ ವೃಂದ ಮತ್ತು ನಿಯಮಗಳನ್ನು ಪರಿಷ್ಕರಣೆ ಮಾಡಿಲ್ಲ, ದೀರ್ಘಾವಧಿಯಲ್ಲಿ ಬಾಕಿ ಇರುವ ನಿಯಮಗಳನ್ನು ಪರಿಷ್ಕರಣೆ ಮಾಡಬೇಕು ಹಾಗೂ ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ಎಲ್ಲ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಬೇಕು, 20 ಸಾವಿರಕ್ಕೂ ಅಧಿಕ ಹುದ್ದೆಗಳು ಖಾಲಿ ಇರುವುದರಿಂದ ಗ್ರಾಮಾಂತರದಲ್ಲಿ ಕಾರ್ಯನಿರ್ವಹಿಸುತ್ತಿರುವವರ ಮೇಲೆ ಅಧಿಕ ಒತ್ತಡವಾಗಿದ್ದು, ಹೊಸ ಕಾಯಿಲೆಯಿಂದ ರಜೆಗಳು ಸಿಗದೇ ಮಾನಸಿಕ ಒತ್ತಡದಲ್ಲಿರುವ ಸಿಬ್ಬಂದಿಗೆ ರಜೆ ಸಿಗುವುದಿಲ್ಲ ಆಗಾಗಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಬೇಕೆಂದು ಆಗ್ರಹಿಸಿದರು.

      ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು, ವೈದ್ಯಕೀಯ ಶಿಕ್ಷಣ ಇಲಾಖಾ ಅಧಿಕಾರಿಗಳು ಮತ್ತು ನೌಕರರ ಕೇಂದ್ರದವನ್ನು ಬಲಪಡಿಸುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಪ್ರವಾಸ ನಡೆಸುತ್ತಿದ್ದು, ಮುಂದಿನ ತಿಂಗಳಲ್ಲಿ ಆರೋಗ್ಯ ಇಲಾಖೆ ನೌಕರರ ರಾಜ್ಯ ಸಮ್ಮೇಳನವನ್ನು ಗಟ್ಟಿಗೊಳಿಸುವ ನಿಟ್ಟಿನಲ್ಲಿ ರಾಜ್ಯ ಪುಟ 2 ಕ್ಕೆ

(Visited 5 times, 1 visits today)