ತುಮಕೂರು : ಚಿಕಿತ್ಸೆ ಫಲಕಾರಿಯಾಗದೆ ಅಪರಿಚಿತನ ಸಾವು

ತುಮಕೂರು :

     ನಗರ ಪೊಲೀಸ್ ಠಾಣೆ ವ್ಯಾಪ್ತಿ ಬಾರ್ಲೈನ್ ರಸ್ತೆಯ ಶಿಲ್ಪಬಾರ್ ಬಳಿ ಫೆಬ್ರುವರಿ 1ರಂದು ಅಸ್ವಸ್ಥನಾಗಿ ಬಿದ್ದಿದ್ದ ಸುಮಾರು 40 ವರ್ಷದ ಅಪರಿಚಿತ ವ್ಯಕ್ತಿಯನ್ನು ಜಿಲ್ಲಾ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ವ್ಯಕ್ತಿಯು ಫೆ.3ರಂದು ಮೃತಪಟ್ಟಿದ್ದಾನೆ.

ಮೃತ ವ್ಯಕ್ತಿಯು 172 ಸೆ.ಮೀ. ಎತ್ತರ, ಎಣ್ಣೆಗೆಂಪು ಮೈಬಣ್ಣ, ಕೋಲು ಮುಖ, ಸಾಧಾರಣ ಮೈಕಟ್ಟು ಹೊಂದಿದ್ದು, ಮೈಮೇಲೆ ಬಿಳಿ ಬಣ್ಣದ ಟಿ ಷರ್ಟ್ ಹಾಗೂ ನೀಲಿ ಬಣ್ಣದ ಪ್ಯಾಂಟ್ ಹಾಗೂ ಎದೆಯ ಮೇಲೆ ರಾಗಿ ಕಾಳು ಗಾತ್ರದ ಮಚ್ಚೆ ಇರುತ್ತದೆ. ಮೃತನ ಹೆಸರು, ವಿಳಾಸ ಪತ್ತೆಯಾಗಿರುವುದಿಲ್ಲ,

      ಪ್ರಕರಣವು ತುಮಕೂರು ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಮೃತರ ವಾರಸುದಾರರು ಯಾರಾದರೂ ಇದ್ದಲ್ಲಿ ಕೂಡಲೇ ಸಮೀಪದ ಪೊಲೀಸ್ ಠಾಣೆಯನ್ನು ಸಂರ್ಪಕಿಸಬಹುದಾಗಿದೆ ಎಂದು ಸಬ್ ಇನ್ಸ್‍ಪೆಕ್ಟರ್ ಮನವಿ ಮಾಡಿದ್ದಾರೆ.

(Visited 4 times, 1 visits today)

Related posts

Leave a Comment