ಕೂಡಲೇ ಬತ್ತಿಹೋಗಿರುವ ಬೋರ್‍ವೆಲ್‍ಗಳನ್ನು ಸರಿಪಡಿಸಿ : ತಾಪಂ ಅಧ್ಯಕ್ಷೆ

ತುಮಕೂರು:

     ಇಲ್ಲಿನ ತಾ.ಪಂ. ಸಭಾಂಗಣದಲ್ಲಿ ಅಧ್ಯಕ್ಷೆ ಕವಿತಾರಮೇಶ್ ಅಧ್ಯಕ್ಷತೆಯಲ್ಲಿ ಮಂಗಳವಾರ ತಾ.ಪಂ. ಸಾಮಾನ್ಯ ಸಭೆ ನಡೆಯಿತು. ಸಭೆಯಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಹಾಗೂ ಅಭಿವೃದ್ಧಿ ಕುರಿತು ಗಂಭೀರ ಚರ್ಚೆ ನಡೆಯಿತು.

     ಸಭೆ ಆರಂಭವಾಗುತ್ತಿದ್ದಂತೆಯೇ ತಾಪಂ ಸದಸ್ಯ ಸುರೇಶ್ ಹಿರೇಹಳ್ಳಿ ಭಾಗದಲ್ಲಿ ಕುಡಿಯುವ ನೀರಿನ ತತ್ವಾರ ಹೆಚ್ಚಾಗಿದ್ದು, ಇರುವ ಕೆಲವು ಬೋರ್‍ವೆಲ್‍ಗಳು ಬತ್ತಿಹೋಗಿದ್ದರೆ, ಇನ್ನೂ ಕೆಲವು ಬೋರ್‍ವೆಲ್‍ಗಳನ್ನು ದುರಸ್ಥಿ ಮಾಡಬೇಕಾಗಿದೆ. ಕೂಡಲೇ ಅಧಿಕಾರಿಗಳು ಕ್ರಮ ವಹಿಸಿ ಕುಡಿಯುವ ನೀರಿನ ಸಮಸ್ಯೆ ನೀಗಿಸಬೇಕೆಂದು ಸಭೆಯಲ್ಲಿ ಒತ್ತಾಯಿಸಿದರು.

     ಇದಕ್ಕೆ ತಾಪಂ ಅಧ್ಯಕ್ಷೆ ಕವಿತಾ ರಮೇಶ್ ಮಾತನಾಡಿ, ಈಗಾಗಲೇ ಬೇಸಿಗೆ ಆರಂಭವಾಗಿದೆ. ತಾಪಂ ವ್ಯಾಪ್ತಿಗೆ ಬರುವ ಎಲ್ಲಾ ಗ್ರಾಮಗಳಿಗೂ ಕುಡಿಯುವ ನೀರಿಗೆ ಮೊದಲ ಆಧ್ಯತೆ ನೀಡಬೇಕು, ಅಧಿಕಾರಿಗಳು ಜವಾಬ್ದಾರಿ ವಹಿಸಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಬೇಕು, ಎಲ್ಲಿಯೂ ನೀರಿನ ಸಮಸ್ಯೆ ಕಂಡುಬರದಂತೆ ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.
ರಾಗಿ ಖರೀದಿ ಕೇಂದ್ರಗಳು ಇನ್ನೂ ಆರಂಭವಾಗದ ಕಾರಣ ರಾಗಿ ಬೆಳೆದ ರೈತರು ರಾಗಿ ಮಾರಾಟ ಮಾಡಲು ಪರದಾಡುವಂತಾಗಿದೆ. ಫಸಲು ಕೈಗೆ ಬಂದರೂ ಮಾರಾಟ ಮಾಡಲಾಗುತ್ತಿಲ್ಲ, ಕೂಡಲೇ ಅಧಿಕಾರಿಗಳು ಗಮನ ಹರಿಸಿ ಎಪಿಎಂಸಿ ಯಾರ್ಡ್‍ನಲ್ಲಿ ರಾಗಿ ಖರೀದಿಗೆ ಮುಂದಾಗಬೇಕೆಂದು ಸದಸ್ಯರು ಒತ್ತಾಯಿಸಿದರು.

      ತಾಪಂ ಸದಸ್ಯೆ ಕವಿತಾ ರಮೇಶ್ ಮಾತನಾಡಿ, ಕೋರಾ ಹೋಬಳಿ ಬೊಮ್ಮನಹಳ್ಳಿ ಶಾಲೆಯ ಸರ್ವೆ ನಂ. 22/3ಬಿ ನಲ್ಲಿ ಸುಮಾರು 1 ಎಕರೆ ಜಾಗ ಖಾಸಗಿಯವರು ಒತ್ತುವರಿ ಮಾಡಿದ್ದರೂ ಇದುವರೆಗೂ ಶಿಕ್ಷಣ ಇಲಾಖೆ ಅಧಿಕಾರಿಗಳು ಗಮನ ಹರಿಸಿಲ್ಲ, ಆ ಶಾಲೆಯ ಜಾಗ ಎಲ್ಲಿ ಒತ್ತುವರಿಯಾಗಿದೆ ಎಂಬುದೇ ಅಧಿಕಾರಿಗಳಿಗೆ ಮಾಹಿತಿ ಇಲ್ಲ, ಈ ಬಗ್ಗೆ ಸಾಕಷ್ಟು ಸಲ ವಿಷಯ ಪ್ರಸ್ತಾಪಿಸಿದರೂ ಯಾರೂ ಕ್ರಮಕ್ಕೆ ಮುಂದಾಗಿಲ್ಲ, ಶಿಕ್ಷಣ ಇಲಾಖೆ ಅಧಿಕಾರಿಗಳು ಈ ಬಗ್ಗೆ ದಿವ್ಯ ನಿರ್ಲಕ್ಷ ವಹಿಸಿದ್ದಾರೆ. ಇನ್ನೊಂದು ವಾರದೊಳಗೆ ಒತ್ತುವರಿಯಾಗಿರುವ ಶಾಲೆ ಜಾಗ ತೆರವುಗೊಳಿಸಿ ಶಾಲೆಗೆ ಬಿಡಿಸಿಕೊಡಬೇಕೆಂದು ಆಗ್ರಹಿಸಿದರು.

     ಸಭೆಯಲ್ಲಿ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಹನುಮಾನಾಯ್ಕ್ ಮಾತನಾಡಿ, ಇಂದೇ ಬೊಮ್ಮನಹಳ್ಳಿ ಶಾಲೆಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ, ಒತ್ತುವರಿಯಾಗಿರುವ ಶಾಲೆಯ ಜಾಗವನ್ನು ತೆರವುಗೊಳಿಸಲು ಕ್ರಮ ವಹಿಸುವುದಾಗಿ ತಿಳಿಸಿದರು. ಪುಟ 2 ಕ್ಕೆ

(Visited 7 times, 1 visits today)

Related posts

Leave a Comment