ತುಮಕೂರು : 35 ಮಂದಿಗೆ ಕೋವಿಡ್-19 ಸೋಂಕು!!

ತುಮಕೂರು :

     ಜಿಲ್ಲೆಯಲ್ಲಿಂದು 35 ಹೊಸ ಕೋವಿಡ್-19 ಪ್ರಕರಣ ದೃಢಪಟ್ಟಿದ್ದು, ಒಟ್ಟು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 513ಕ್ಕೆ ಏರಿಕೆಯಾಗಿದೆ ಎಂದು ಡಿ.ಹೆಚ್.ಓ ಡಾ|| ನಾಗೇಂದ್ರಪ್ಪ ತಿಳಿಸಿದ್ದಾರೆ.

ಇಂದು ಜಿಲ್ಲೆಯ ತುಮಕೂರು ತಾಲ್ಲೂಕಿನಲ್ಲಿ 31, ಗುಬ್ಬಿ-2, ಕುಣಿಗಲ್-1, ಶಿರಾ-1 ಸೇರಿ ಒಟ್ಟು 35 ಜನರಲ್ಲಿ ಕೋವಿಡ್-19 ಸೋಂಕಿರುವುದು ದೃಢಪಟ್ಟಿದೆ.

      ಇಂದು ಆಸ್ಪತ್ರೆಯಿಂದ 3 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ 137 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 361 ಸಕ್ರಿಯ ಪ್ರಕರಣಗಳಿದ್ದು, ಇಂದು ಒಬ್ಬರು ಮೃತಪಟ್ಟಿದ್ದಾರೆ. ಈವರೆಗೆ 15 ಕೋವಿಡ್-19 ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

(Visited 379 times, 1 visits today)

Related posts

Leave a Comment