ತುಮಕೂರು:

      ಜಿಲ್ಲೆಯಲ್ಲಿರುವ ಎಲ್ಲಾ ಶಾಲೆ ಹಾಗೂ ಅಂಗನವಾಡಿ ಕಟ್ಟಡಗಳಿಗೆ ಜಲಜೀವನ್ ಮಿಷನ್ ಅಡಿ ಕಡ್ಡಾಯವಾಗಿ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕೆಂದು ಜಿಲ್ಲಾ ಪಂಚಾಯತಿ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಕೆಂಪಚೌಡಪ್ಪ ಅವರು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಅಭಿಯಂತರರಿಗೆ ಸೂಚನೆ ನೀಡಿದರು.

      ಜಿಲ್ಲಾ ಪಂಚಾಯತಿಯಲ್ಲಿ ಗುರುವಾರ ಜರುಗಿದ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಎರಡನೇ ಹಂತದ ಕೋವಿಡ್-19 ಹರಡುವಿಕೆಯನ್ನು ತಡೆಗಟ್ಟಲು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಅನುಸರಿಸಬೇಕೆಂದು ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಸೂಚಿಸಿದಾಗ, ಉತ್ತರಿಸಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ: ನಾಗೇಂದ್ರಪ್ಪ ಸಭೆಗೆ ಮಾಹಿತಿ ನೀಡುತ್ತಾ, ನಗರ ಪ್ರದೇಶಗಳಲ್ಲಿ ಕೋವಿಡ್-19 ಸೋಂಕಿತರು ಹೆಚ್ಚಿನ ಸಂಖ್ಯೆಯಲ್ಲಿರುವುದರಿಂದ ಆಶಾ ಕಾರ್ಯಕರ್ತೆಯರು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿಗಳ ಸಹಕಾರದಿಂದ ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದು ತಿಳಿಸಿದರಲ್ಲದೆ, ಈಗಾಗಲೇ ಈಡಿoಟಿಣ ಐiಟಿe Woಡಿಞeಡಿsಗೆ ಕೋವಿಡ್-19 ವ್ಯಾಕ್ಸಿನೇಷನ್ ನೀಡಲಾಗಿದ್ದು, ಶೀಘ್ರದಲ್ಲಿಯೇ ಸಾರ್ವಜನಿಕರಿಗೂ ವ್ಯಾಕ್ಸಿನೇಷನ್ ನೀಡುವ ಕಾರ್ಯಕ್ರಮವನ್ನು ಪ್ರಾರಂಭಿಸಲಾಗುವುದೆಂದು ತಿಳಿಸಿದರು.

      ನಂತರ ಮಾತನಾಡಿದ ಕೆಂಪಚೌಡಪ್ಪ ಅವರು, ಜಿಲ್ಲೆಯಲ್ಲಿ ಎಸ್‍ಎಸ್‍ಎಲ್‍ಸಿ ಫಲಿತಾಂಶವನ್ನು ಕಳೆದ ವರ್ಷಕ್ಕಿಂತ ಉತ್ತಮಗೊಳಿಸಲು ಕ್ರಮವಹಿಸುವಂತೆ ತುಮಕೂರು ಹಾಗೂ ಮಧುಗಿರಿ ಸಾರ್ವಜನಿಕ ಶಿಕ್ಷಣ ಇಲಾಖೆ, ಉಪನಿರ್ದೇಶಕರುಗಳಿಗೆ ನಿರ್ದೇಶನ ನೀಡಿದರಲ್ಲದೆ, ಪಂಚಾಯತ್ ರಾಜ್ ಇಲಾಖೆಯು ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳನ್ನು ಶೀಘ್ರದಲ್ಲಿ ಪೂರ್ಣಗೊಳಿಸಿ ಅನಿರ್ಬಂಧಿತ ಅನುದಾನವನ್ನು ಮಾರ್ಚ್ 10ರೊಳಗೆ ಹಣ ಬಟವಾಡೆ ಮಾಡಲು ಅಭಿಯಂತರರಿಗೆ ಸೂಚಿಸಿದರು.

     ಸಮಿತಿಯ ಸದಸ್ಯ ಕಾರ್ಯದರ್ಶಿ ಹಾಗೂ ಉಪಕಾರ್ಯದರ್ಶಿ(ಅಭಿವೃದ್ಧಿ) ಟಿ.ಕೆ. ರಮೇಶ್ ಮಾತನಾಡಿ, ಜಿಲ್ಲೆಯಲ್ಲಿ ಕಳೆದ 2019ರಲ್ಲಿ 108 ನಕಲಿ ವೈದ್ಯರನ್ನು ಪತ್ತೆ ಹಚ್ಚಲಾಗಿತ್ತು. ಈ ಪೈಕಿ ಈಗಾಗಲೇ 50 ನಕಲಿ ವೈದ್ಯರಿಗೆ ನೋಟಿಸ್ ನೀಡಿ ಕ್ಲಿನಿಕ್‍ಗಳನ್ನು ಮುಚ್ಚಿಸಲಾಗಿದೆ. ಉಳಿದ ನಕಲಿ ವೈದ್ಯರ ಕ್ಲಿನಿಕ್‍ಗಳನ್ನು ಮುಚ್ಚಿಸುವ ಕಾರ್ಯ ಪ್ರಗತಿಯಲ್ಲಿದೆ ಎಂದು ತಿಳಿಸಿದರು.
ಸಭೆಯಲ್ಲಿ ಸಮಿತಿ ಸದಸ್ಯರಾದ ಗಾಯಿತ್ರಿಬಾಯಿ, ತಿಮ್ಮಯ್ಯ ಕೊಂಡವಾಡಿ, ಹೆಚ್.ಕೆಂಚಮಾರಯ್ಯ, ಕೆ.ಹೆಚ್. ಜಗನ್ನಾಥ್, ಪಿ.ಮಂಜುಳಾ, ಮತ್ತಿತರ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.

(Visited 15 times, 1 visits today)