BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಸಂವಿಧಾನದ ಆಶಯದಡಿ ಬಲಿಷ್ಠ ಭಾರತ ನಿರ್ಮಾಣಕ್ಕೆ ಕೈ ಜೋಡಿಸಿ
  • ಸಿ.ಕೆ. ಪುರದಲ್ಲಿ ಪ್ರಜಾ ಸೇವಾ ಅಭಿಯಾನ ಸಭೆ
  • ಪ್ರಜಾ ಸೇವಾ ಆಂದೋಲನ: ಬಾಗಿಲಿಗೆ ಬಂದ ಆಡಳಿತ ವ್ಯವಸ್ಥೆ
  • ಜಾಗತಿಕ ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತ ಮುಂಚೂಣಿಯಲ್ಲಿದೆ
  • ಇಂದಿರಾ ಕ್ಯಾಂಟೀನ್‌ಗೆ ಆಯುಕ್ತೆ ಬಿ. ಶುಭಾ ದಿಢೀರ್ ಭೇಟಿ
  • ಕನಕದಾಸರು ಭಕ್ತಿ, ಮಾನವೀಯತೆಯ ಪ್ರತೀಕ
  • ಮಾದಕ ವಸ್ತುಗಳ ವಿರುದ್ಧ ವಿದ್ಯಾರ್ಥಿಗಳ ಬೃಹತ್ ಜಾಗೃತಿ ಜಾಥಾ
  • ಆಶಾ ಹೋರಾಟಕ್ಕೆ ಎಐಡಿಎಸ್‌ಓ ಬೆಂಬಲ: ರಾಜ್ಯವ್ಯಾಪಿ ಆಗ್ರಹ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಎಡೆಯೂರು ಜಾತ್ರಾ ಮಹೋತ್ಸವ ಯಶಸ್ವಿಗೊಳಿಸಲು ಡಿಸಿ ಸೂಚನೆ
Trending

ಎಡೆಯೂರು ಜಾತ್ರಾ ಮಹೋತ್ಸವ ಯಶಸ್ವಿಗೊಳಿಸಲು ಡಿಸಿ ಸೂಚನೆ

By News Desk BenkiyabaleUpdated:March 10, 2021 5:59 pm

ತುಮಕೂರು : 

     ಕುಣಿಗಲ್ ತಾಲೂಕು ಎಡೆಯೂರು ಶ್ರೀ ಸಿದ್ಧಲಿಂಗೇಶ್ವರ ಕ್ಷೇತ್ರದಲ್ಲಿ ಏಪ್ರಿಲ್ 12 ರಿಂದ 27 ರವರೆಗೆ ನಡೆಯಲಿರುವ ಶ್ರೀ ಸಿದ್ಧಲಿಂಗೇಶ್ವರಸ್ವಾಮಿ ಜಾತ್ರಾ ಮಹೋತ್ಸವವನ್ನು ಎಲ್ಲಾ ಇಲಾಖೆಗಳು ಸಮನ್ವಯದಿಂದ ತಮ್ಮ ಕಾರ್ಯಗಳನ್ನು ಜವಾಬ್ದಾರಿಯಿಂದ ನಿರ್ವಹಿಸುವ ಮೂಲಕ ಜಾತ್ರೆಯನ್ನು ಯಶಸ್ವಿಗೊಳಿಸುವಂತೆ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು ಅಧಿಕಾರಿಗಳಿಗೆ ಸೂಚಿಸಿದರು.

      ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ನಡೆದ ಎಡೆಯೂರು ಶ್ರೀ ಸಿದ್ಧಲಿಂಗೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ ಕಾರ್ಯಕ್ರಮಗಳ ಸಿದ್ಧತೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಅವರು ಮಾತನಾಡಿ, ಸುಸೂತ್ರವಾಗಿ ಜಾತ್ರೆ ನೆರವೇರಿಸಲು ಸಕಲ ಸಿದ್ಧತೆ ಕೈಗೊಳ್ಳಬೇಕು ಎಂದು ತಿಳಿಸಿದರು.

      ಪ್ರಸಿದ್ಧ ಎಡೆಯೂರು ಶ್ರೀ ಸಿದ್ಧಲಿಂಗೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ಭಕ್ತರು ಪಾಲ್ಗೊಳ್ಳುವುದರಿಂದ ಕೋವಿಡ್-19 ನಿಯಮಾವಳಿಗಳು ಕಡ್ಡಾಯವಾಗಿ ಪಾಲನೆಯಾಗಬೇಕು. ಜಾತ್ರೆಗೆ ಬರುವ ಭಕ್ತಾಧಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಹಾಗೂ ಸ್ಯಾನಿಟೈಸರ್ ವ್ಯವಸ್ಥೆ ಮಾಡಬೇಕು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದರು.

ಜಾತ್ರೆ ಸಂದರ್ಭದಲ್ಲಿ ಭಕ್ತರಿಗೆ ವಿತರಣೆ ಮಾಡುವ ಪ್ರಸಾದವನ್ನು ಆಹಾರ ಸುರಕ್ಷತಾ ಅಧಿಕಾರಿಗಳು ಕಡ್ಡಾಯವಾಗಿ ಪರೀಕ್ಷಿಸಿ, ನಂತರವೇ ವಿತರಣೆಗೆ ಅನುಮತಿ ನೀಡಬೇಕು. ನೀರಿನ ಗುಣಮಟ್ಟ ಖಾತ್ರಿಪಡಿಸಿಕೊಂಡು ಕುಡಿಯುವ ನೀರು ಸರಬರಾಜು ಮಾಡುಬೇಕು. ಪಾರ್ಕಿಂಗ್ ಸಮಸ್ಯೆ ಹಾಗೂ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆ ಬಿಗಿ ಬಂದೋಬಸ್ತ್ ಒದಗಿಸಬೇಕು. ಏ.19ರಂದು ನಡೆಯಲಿರುವ ಮಹಾರಥೋತ್ಸವದ ದಿನ ಹೆಚ್ಚಿನ ಪೊಲೀಸ್ ವ್ಯವಸ್ಥೆ ನಿಯೋಜಿಸಬೇಕು. ಧ್ವನಿವರ್ಧಕಗಳ ಮೂಲಕ ಜನರಿಗೆ ಮಾಹಿತಿ ಒದಗಿಸಬೇಕು ಎಂದು ಸೂಚಿಸಿದರು.

     ಜಾತ್ರೆಗೆ ಬರುವ ಭಕ್ತಾಧಿಗಳಿಗೆ ಯಾವುದೇ ತೊಂದರೆಯಾಗದಂತೆ ಮೂಲಭೂತ ಸೌಕರ್ಯ ಕಲ್ಪಿಸಬೇಕು. ತಾತ್ಕಾಲಿಕ ಶೌಚಾಲಯ ವ್ಯವಸ್ಥೆ ಮಾಡಬೇಕು. ಶೌಚಾಲಯದ ಶುಚಿತ್ವಕ್ಕಾಗಿ ಪೂರಕ ನೀರಿನ ಸೌಲಭ್ಯವೂ ಸಮರ್ಪಕವಾಗಿರಬೇಕು. ಭಕ್ತಾಧಿಗಳು ಓಡಾಡುವ ರಸ್ತೆಗಳೂ ಅಚ್ಚುಕಟ್ಟಾಗಿರುವಂತೆ ಕ್ರಮಕೈಗೊಳ್ಳಬೇಕು. ಭಕ್ತಾಧಿಗಳಿಗೆ ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶಿಸಿದರು.

       ಜಾತ್ರಾ ಮೈದಾನದಲ್ಲಿ ಮದ್ಯ, ಮಾಂಸ ಮಾರಾಟ ಅಂಗಡಿಗಳನ್ನು ತೆರೆಯದಂತೆ ನಿರ್ಬಂಧಿಸಬೇಕು. ಜಾನುವಾರುಗಳಿಗೆ ಸೋಂಕು, ರೋಗಗಳು ತಗುಲದಂತೆ ಪಶುವೈದ್ಯ ಇಲಾಖೆ ಎಚ್ಚರಿಕೆ ವಹಿಸುವುದರೊಂದಿಗೆ ರಾಸುಗಳಿಗೆ ಸಮರ್ಪಕವಾಗಿ ನೀರಿನ ವ್ಯವಸ್ಥೆ ಕಲ್ಪಿಸಬೇಕು. ಏಪ್ರಿಲ್ 21ರ ಬೆಳ್ಳಿ ಪಲ್ಲಕ್ಕಿ ಉತ್ಸವದ ದಿನದಂದು ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಏರ್ಪಡಿಸುವಂತೆ ಕನ್ನಡ ಮತ್ತು ಸಂಸ್ಕøತಿ ಇಲಾಖೆಗೆ ಸೂಚಿಸಿದ ಜಿಲ್ಲಾಧಿಕಾರಿಗಳು ಪೌರಾಣಿಕ ನಾಟಕ ಪ್ರದರ್ಶನಕ್ಕೂ ವ್ಯವಸ್ಥೆ ಮಾಡಿಕೊಡುವಂತೆ ತಿಳಿಸಿದ ಅವರು, ಜಾತ್ರಾ ದಿನಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗದಂತೆ ನಿರಂತರವಾಗಿ ವಿದ್ಯುತ್ ಸರಬರಾಜು ಆಗುವಂತೆ ಕ್ರಮವಹಿಸಬೇಕು ಎಂದು ಬೆಸ್ಕಾಂ ಅಧಿಕಾರಿಗೆ ಸೂಚಿಸಿದರು.

      ಅಪರ ಜಿಲ್ಲಾಧಿಕಾರಿ ಕೆ.ಚೆನ್ನಬಸಪ್ಪ ಮಾತನಾಡಿ, ಡ್ಯಾಮೇಜ್ ಇಲ್ಲದ ವೈರ್‍ಗಳನ್ನು ಬಳಸಿ ದೀಪಾಲಂಕಾರ ಮಾಡಬೇಕು. ಎಲೆಕ್ಟ್ರಿಕಲ್ ಇನ್ಸ್‍ಪೆಕ್ಟರ್ ಅನುಮೋದನೆ ಪಡೆಯಬೇಕು. ಯಾವುದೇ ಅಹಿತಕರ ಘಟನೆ ನಡೆದರೆ ಅದಕ್ಕೆ ಸಂಬಂಧಪಟ್ಟ ಅಧಿಕಾರಿಗಳೇ ಹೊಣೆಗಾರರಾಗುತ್ತಾರೆ ಎಂದು ಎಚ್ಚರಿಕೆ ನೀಡಿದರು.

     ಏ.13ರಿಂದ ದನಗಳ ಜಾತ್ರೆ ನಡೆಯಲಿದ್ದು, ಅತ್ಯುತ್ತಮ ರಾಸುಗಳಿಗೆ ಬಹುಮಾನ ವಿತರಣೆಯನ್ನು ದೇವಾಲಯದ ವತಿಯಿಂದ ಮಾಡಬೇಕು. ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ನಿರ್ದೇಶಿಸಿದರು

ಸಭೆಯಲ್ಲಿ ಕುಣಿಗಲ್ ತಹಶೀಲ್ದಾರ್ ವಿಶ್ವನಾಥ್, ಎಡೆಯೂರು ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಲಕ್ಷ್ಮಿ, ರಾಜ್ಯ ಧಾರ್ಮಿಕ ಪರಿಷತ್ ಸದಸ್ಯ ವೈ.ಎಸ್.ಸಿದ್ದಲಿಂಗ ಪ್ರಭು, ಮುಜರಾಯಿ ತಹಶೀಲ್ದಾರ್ ಅನಂತರಾಯ, ಪೊಲೀಸ್ ಸಬ್‍ಇನ್ಸ್‍ಪೆಕ್ಟರ್ ಮಂಜು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

(Visited 9 times, 1 visits today)
Previous Articleಅಧಿಕೃತ ಶಾಲೆಯಲ್ಲಿ SSLC ಪರೀಕ್ಷೆಗೆ ನೋಂದಾಯಿಸುವಂತೆ ಡಿಡಿಪಿಐ ಸೂಚನೆ
Next Article ತುಮಕೂರು : ದಲಿತರ ಹಣಕ್ಕೆ ಕತ್ತರಿ ಹಾಕಿರುವುದು ದುರದೃಷ್ಟಕರ
News Desk Benkiyabale

Related Posts

ಸಂವಿಧಾನದ ಆಶಯದಡಿ ಬಲಿಷ್ಠ ಭಾರತ ನಿರ್ಮಾಣಕ್ಕೆ ಕೈ ಜೋಡಿಸಿ

November 28, 2026 5:40 pm news

ಸಿ.ಕೆ. ಪುರದಲ್ಲಿ ಪ್ರಜಾ ಸೇವಾ ಅಭಿಯಾನ ಸಭೆ

November 28, 2026 5:39 pm news

ಪ್ರಜಾ ಸೇವಾ ಆಂದೋಲನ: ಬಾಗಿಲಿಗೆ ಬಂದ ಆಡಳಿತ ವ್ಯವಸ್ಥೆ

November 28, 2026 5:37 pm news
ತಾಜಾ ಸುದ್ಧಿಗಳು
news

ಸಂವಿಧಾನದ ಆಶಯದಡಿ ಬಲಿಷ್ಠ ಭಾರತ ನಿರ್ಮಾಣಕ್ಕೆ ಕೈ ಜೋಡಿಸಿ

November 28, 2026 5:40 pm
news

ಸಿ.ಕೆ. ಪುರದಲ್ಲಿ ಪ್ರಜಾ ಸೇವಾ ಅಭಿಯಾನ ಸಭೆ

November 28, 2026 5:39 pm
news

ಪ್ರಜಾ ಸೇವಾ ಆಂದೋಲನ: ಬಾಗಿಲಿಗೆ ಬಂದ ಆಡಳಿತ ವ್ಯವಸ್ಥೆ

November 28, 2026 5:37 pm
news

ಜಾಗತಿಕ ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತ ಮುಂಚೂಣಿಯಲ್ಲಿದೆ

November 28, 2026 5:36 pm
news

ಇಂದಿರಾ ಕ್ಯಾಂಟೀನ್‌ಗೆ ಆಯುಕ್ತೆ ಬಿ. ಶುಭಾ ದಿಢೀರ್ ಭೇಟಿ

November 27, 2026 6:07 pm
news

ಕನಕದಾಸರು ಭಕ್ತಿ, ಮಾನವೀಯತೆಯ ಪ್ರತೀಕ

November 27, 2026 6:05 pm
Our Youtube Channel
Our Picks

ಸಂವಿಧಾನದ ಆಶಯದಡಿ ಬಲಿಷ್ಠ ಭಾರತ ನಿರ್ಮಾಣಕ್ಕೆ ಕೈ ಜೋಡಿಸಿ

November 28, 2026 5:40 pm

ಸಿ.ಕೆ. ಪುರದಲ್ಲಿ ಪ್ರಜಾ ಸೇವಾ ಅಭಿಯಾನ ಸಭೆ

November 28, 2026 5:39 pm

ಪ್ರಜಾ ಸೇವಾ ಆಂದೋಲನ: ಬಾಗಿಲಿಗೆ ಬಂದ ಆಡಳಿತ ವ್ಯವಸ್ಥೆ

November 28, 2026 5:37 pm

ಜಾಗತಿಕ ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತ ಮುಂಚೂಣಿಯಲ್ಲಿದೆ

November 28, 2026 5:36 pm

ಇಂದಿರಾ ಕ್ಯಾಂಟೀನ್‌ಗೆ ಆಯುಕ್ತೆ ಬಿ. ಶುಭಾ ದಿಢೀರ್ ಭೇಟಿ

November 27, 2026 6:07 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ZP CEO ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಸಂವಿಧಾನದ ಆಶಯದಡಿ ಬಲಿಷ್ಠ ಭಾರತ ನಿರ್ಮಾಣಕ್ಕೆ ಕೈ ಜೋಡಿಸಿ

By News Desk BenkiyabaleNovember 28, 2026 5:40 pm

ತುಮಕೂರು: ವಿಶ್ವದಲ್ಲೇ ಶ್ರೇಷ್ಠವಾದ ಭಾರತ ಸಂವಿಧಾನದ ಮೂಲಕ ಬಲಿಷ್ಠ ರಾಷ್ಟç ನಿರ್ಮಾಣ ಮಾಡಬೇಕಾಗಿದೆ. ಡಾ. ಅಂಬೇಡ್ಕರ್ ಅವರು ಕೊಟ್ಟ ಸಂವಿಧಾನದ…

ಸಿ.ಕೆ. ಪುರದಲ್ಲಿ ಪ್ರಜಾ ಸೇವಾ ಅಭಿಯಾನ ಸಭೆ

November 28, 2026 5:39 pm

ಪ್ರಜಾ ಸೇವಾ ಆಂದೋಲನ: ಬಾಗಿಲಿಗೆ ಬಂದ ಆಡಳಿತ ವ್ಯವಸ್ಥೆ

November 28, 2026 5:37 pm

ಜಾಗತಿಕ ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತ ಮುಂಚೂಣಿಯಲ್ಲಿದೆ

November 28, 2026 5:36 pm
News by Date
November 2026
M T W T F S S
 1
2345678
9101112131415
16171819202122
23242526272829
30  
« Oct    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.