BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಯುಪಿಎಸ್‌ಸಿ ಆಕಾಂಕ್ಷಿಗಳಿಗೆ ಕಠಿಣ ಪರಿಶ್ರಮ-ಶಿಸ್ತು ಅಗತ್ಯ
  • ಪಾವಗಡ ಕ್ಷೇತ್ರದಲ್ಲಿ ೧೧ ಹೊಸ ಮತಗಟ್ಟೆ
  • ಪರಿಸರ ಸಂರಕ್ಷಣೆ ನಮ್ಮೆಲ್ಲರ ಜೀವನ ಶೈಲಿಯಾಗಲಿ
  • ಸಾಲು ಸಾಲು ಸಮಸ್ಯೆಗಳನ್ನು ಎದುರಿಸುತ್ತಿರುವ ಶಿರಾ ಜನತೆ
  • ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಡಿಸಿ ಕಚೇರಿಗೆ ಮುತ್ತಿಗೆ ಯತ್ನ
  • ಲಂಚ ಸ್ವೀಕಾರ ಪ್ರಕರಣ: ಗ್ರಾಮ ಸಹಾಯಕ ವಜಾ
  • ಗೊರವನಹಳ್ಳಿ ಮಹಾಲಕ್ಷಿ ಸನ್ನಿಧಾನದಲ್ಲಿ ಭಕ್ತಸಾಗರ
  • ಕೆರೆ ಪಕ್ಕದಲ್ಲೇ ಹೇಮಾವತಿ ಹರಿದರೂ ಸೋಮಲಾಪುರ ಕೆರೆಗೆ ನೀರಿಲ್ಲ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ಪಾಲಿಕೆ – ಸ್ಮಾರ್ಟ್‍ಸಿಟಿ ಕಾಮಗಾರಿಗಳು ಸಂಪೂರ್ಣ ಕಳಪೆ
Trending

ಪಾಲಿಕೆ – ಸ್ಮಾರ್ಟ್‍ಸಿಟಿ ಕಾಮಗಾರಿಗಳು ಸಂಪೂರ್ಣ ಕಳಪೆ

By News Desk BenkiyabaleUpdated:March 13, 2021 6:08 pm

ತುಮಕೂರು: 

      ತುಮಕೂರು ಮಹಾನಗರಪಾಲಿಕೆ ಹಾಗೂ ಸ್ಮಾರ್ಟ್‍ಸಿಟಿ ವತಿಯಿಂದ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳು ಸಂಪೂರ್ಣ ಕಳಪೆ ಗುಣಮಟ್ಟದ್ದಾಗಿದ್ದು, ಸಾಕಷ್ಟು ಅವ್ಯವಹಾರ ನಡೆದಿರುವ ಸಾಧ್ಯತೆ ಇದೆ.ಈ ಹಿನ್ನೆಲೆಯಲ್ಲಿ ಜನರಲ್ಲಿ ಜಾಗೃತಿ ಮೂಡಿಸಿ,ಜನಾಂದೋಲನ ರೂಪಿಸುವ ಮೂಲಕ ಭ್ರಷ್ಟಾಚಾರದಲ್ಲಿ ತೊಡಗಿರುವ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ವಿರುದ್ದ ಹೋರಾಟ ರೂಪಿಸುವುದಾಗಿ ಮಾಜಿ ಮಂತ್ರಿ ಸೊಗಡು ಶಿವಣ್ಣ ತಿಳಿಸಿದ್ದಾರೆ.

      ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಪಾಲಿಕೆಯಲ್ಲಿ ನಾಗರಿಕರಿಗೆ ಯಾವ ಕೆಲಸಗಳು ಆಗುತ್ತಿಲ್ಲ. ಬದಲಾಗಿ ಮದ್ಯವರ್ತಿಗಳ ಹಾವಳಿ ಹೆಚ್ಚಾಗಿದ್ದು, ಹಣವಿಲ್ಲದೆ ಯಾವುದೇ ಕೆಲಸಗಳು ಆಗುವುದೇ ಇಲ್ಲ ಎಂಬ ಸ್ಥಿತಿಗೆ ನಗರಪಾಲಿಕೆ ಆಡಳಿತ ತಲುಪಿದೆ ಎಂದು ಶಿವಣ್ಣ ಆರೋಪಿಸಿದರು.

      ನಗರಪಾಲಿಕೆ ಆಡಳಿತದಲ್ಲಿ ಅಧಿಕಾರಿಗಳು ನರಭಕ್ಷಕರಂತೆ ವರ್ತಿಸುತ್ತಿದ್ದು, ಖಾತೆ ಬದಲಾವಣೆ,ಆಸ್ತಿ ತೆರಿಗೆ ಪಾವತಿ, ಮನೆ ನಿರ್ಮಾಣಕ್ಕೆ ಲೇಸನ್ಸ್ ನೀಡುವುದು ಸೇರಿದಂತೆ ಯಾವುದೇ ಕೆಲಸ ಆಗಬೇಕೆಂದು ಅರ್ಜಿ ಸಲ್ಲಿಸಿದರೂ, ಅಧಿಕಾರಿಗಳೇ ನಾಗರಿಕರು ನೀಡಿದ ಅರ್ಜಿಗಳಲ್ಲಿನ ಕೆಲ ದಾಖಲೆ ಕಿತ್ತು,ದಾಖಲೆಗಳನ್ನು ತಂದು ಕೊಡಿ ಎಂದು ಸತಾಯಿಸಿ, ಹಣ ನೀಡಿದ ಮೇಲೆ ಕೆಲಸ ಮಾಡಿಕೊಡುತ್ತಿದ್ದಾರೆ. ಇದರಿಂದ ಜನರು ಬೇಸತ್ತು ಹೋಗಿದ್ದಾರೆ. ಪ್ರಸ್ತುತ ಬಿಜೆಪಿ ಪಕ್ಷದವರೇ ಮೇಯರ್ ಆಗಿ ಕೆಲಸ ಮಾಡುತಿದ್ದಾರೆ.ಹಾಗೆಂದ ಮಾತ್ರಕ್ಕೆ ಬಿಜೆಪಿ ಪಕ್ಷದಲ್ಲಿ ಇರುವವರೆಲ್ಲ ಸತ್ಯಹರಿಶ್ಚಂದ್ರರಲ್ಲ ಎಂದು ಪ್ರಶ್ನೆಯೊಂದಕ್ಕೆ ಮಾಜಿ ಸಚಿವರು ಉತ್ತರಿಸಿದರು.

      ಈ ಹಿಂದೆ ನಗರದ ಬಿ.ಹೆಚ್.ರಸ್ತೆ ಒತ್ತುವರಿ ತೆರವಿಗೆ ಸಂಬಂಧಿಸಿದಂತೆ ನ್ಯಾಯಾಲಯದ ಮೆಟ್ಟಿಲು ಹತ್ತಿದ್ದ ಆಸ್ತಿಯ ಮಾಲಿಕರನ್ನು ಕರೆದು,ಅವರಿಗೆ ಮನವರಿಕೆ ಮಾಡಿಕೊಟ್ಟು,ಕಾಮಗಾರಿಗಳು ನಡೆಯಲು ಸಹಕರಿಸುವಂತೆ ಮನವಿ ಮಾಡಲಾ ಗಿತ್ತು.ಆದರೆ ಈಗ ಸದರಿ ಕಾಮಗಾರಿಯನ್ನು ಯಾರು ಮಾಡುತ್ತಿದ್ದಾರೆ.ನಗರಪಾಲಿಕೆಯೋ,ಸ್ಮಾರ್ಟಸಿಟಿಯೋ ಅಥವಾ ಲೋಕೋಪಯೋಗಿ ಇಲಾಖೆ ಎಂಬ ಗೊಂದಲ ಕಾಡುತ್ತಿದೆ.ಕೇವಲ ಎರಡು ಬದಿಯಲ್ಲಿದ್ದ ಚರಂಡಿಯ ಸ್ಲಾಬ್‍ಗಳನ್ನು ಮಾತ್ರ ಬದಲಾಯಿಸಿ,ಇಡೀ ಕಾಮಗಾರಿ ನಡೆಸಿರುವಂತೆ ಬಿಲ್ ಮಾಡಲಾಗುತ್ತಿದೆ.ಇದರ ವಿರುದ್ದ ಹೋರಾಟ ನಡೆಸಲು ಮುಂದಾಗಿರುವುದಾಗಿ ಸೊಗಡು ಶಿವಣ್ಣ ತಿಳಿಸಿದರು.

      ತುಮಕೂರು ನಗರದ ಚಿಕ್ಕಪೇಟೆಯ ರಸ್ತೆ,ಮಂಡಿಪೇಟೆ ರಸ್ತೆ ಹಾಗು ಜೆ.ಸಿ. ರಸ್ತೆ ಕಾಮಗಾರಿಗಳು ಆರಂಭವಾಗಿ ಒಂದು ವರ್ಷವೇ ಕಳೆದಿದ್ದರೂ ಕಾಮಗಾರಿ ಮುಗಿದಿಲ್ಲ.ಜನರು ದೂಳು,ಮಣ್ಣಿನಿಂದ ಸಾಕಷ್ಟು ಸಮಸ್ಯೆ ಅನುಭವಿಸುತ್ತಿದ್ದಾರೆ.ಇದರ ಜೊತೆಗೆ ನಗರಪಾಲಿಕೆಯಲ್ಲಿ ಸ್ವತಹಃ ಪಾಲಿಕೆಯ ಆಯುಕ್ತರೇ ಅಕ್ರಮ ಖಾತೆಗಳಲ್ಲಿ ಭಾಗಿಯಾಗಿದ್ದಾರೆ ಎಂಬು ಅನುಮಾನ ಗಳನ್ನು ಸಾರ್ವಜನಿಕರು ವ್ಯಕ್ತಪಡಿಸುತಿದ್ದು,ನಗರಪಾಲಿಕೆಯ ಯಾವುದೆ ಕೆಲಸಗಳು ಪ್ರಾಪರ್ ಚಾನಲ್‍ನಲ್ಲಿ ಆಗುತ್ತಿಲ್ಲ. ಸಂಪೂರ್ಣ ಗಣಕೀಕೃತಗೊಂಡಿದ್ದರೂ ಸಹ,ನೇರವಾಗಿ ದಾಖಲೆಗಳಿಗೆ ಸಹಿ ಮಾಡಲಾಗುತ್ತಿದೆ ಎಂಬ ದೂರುಗಳು ಬಂದಿವೆ ಎಂದು ಮಾಜಿ ಮಂತ್ರಿ ಸೊಗಡು ಶಿವಣ್ಣ ನುಡಿದರು.

    ತುಮಕೂರು ಮಹಾನಗರಪಾಲಿಕೆ ಮತ್ತು ಸ್ಮಾರ್ಟ್‍ಸಿಟಿಯಿಂದ ನಡೆದಿರುವ ಕಾಮಗಾರಿಗಳ ಬಗ್ಗೆ ಆರ್.ಟಿ.ಐ ಮೂಲಕ ಮಾಹಿತಿ ಪಡೆದು, ಆಗಿರುವ ಅನ್ಯಾಯಗಳ ಬಗ್ಗೆ ಕರಪತ್ರ ಮುದ್ರಿಸಿ, ಜನರಿಗೆ ಹಂಚುವ ಮೂಲಕ ಅವರಲ್ಲಿ ಜಾಗೃತಿ ಮೂಡಿಸಿ, ಜನಾಂದೋಲನ ರೂಪಿಸುವುದಾಗಿ ಸೊಗಡು ಶಿವಣ್ಣ ಸ್ಪಷ್ಟಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಜಯಸಿಂಹರಾವ್, ಮದನ್‍ಸಿಂಗ್ ಮತ್ತಿತರರಿದ್ದರು.

(Visited 49 times, 1 visits today)
Previous Articleಜನಮನ್ನಣೆ ಪಡೆಯುವಲ್ಲಿ ಪತ್ರಿಕೆ ಕಾರ್ಯ ಶ್ಲಾಘನೀಯ : ಮಸಾಲೆ ಜಯರಾಮ್
Next Article ಬಜೆಟ್ ಕುರಿತು ಚರ್ಚಿಸಲು ಸಾರ್ವಜನಿಕರಿಂದ ಸಲಹೆಗೆ ಚಿದಾನಂದ ಗೌಡ ಮನವಿ
News Desk Benkiyabale

Related Posts

ಯುಪಿಎಸ್‌ಸಿ ಆಕಾಂಕ್ಷಿಗಳಿಗೆ ಕಠಿಣ ಪರಿಶ್ರಮ-ಶಿಸ್ತು ಅಗತ್ಯ

August 24, 2026 5:49 pm news

ಪಾವಗಡ ಕ್ಷೇತ್ರದಲ್ಲಿ ೧೧ ಹೊಸ ಮತಗಟ್ಟೆ

August 24, 2026 5:47 pm news

ಪರಿಸರ ಸಂರಕ್ಷಣೆ ನಮ್ಮೆಲ್ಲರ ಜೀವನ ಶೈಲಿಯಾಗಲಿ

August 24, 2026 5:46 pm news
ತಾಜಾ ಸುದ್ಧಿಗಳು
news

ಯುಪಿಎಸ್‌ಸಿ ಆಕಾಂಕ್ಷಿಗಳಿಗೆ ಕಠಿಣ ಪರಿಶ್ರಮ-ಶಿಸ್ತು ಅಗತ್ಯ

August 24, 2026 5:49 pm
news

ಪಾವಗಡ ಕ್ಷೇತ್ರದಲ್ಲಿ ೧೧ ಹೊಸ ಮತಗಟ್ಟೆ

August 24, 2026 5:47 pm
news

ಪರಿಸರ ಸಂರಕ್ಷಣೆ ನಮ್ಮೆಲ್ಲರ ಜೀವನ ಶೈಲಿಯಾಗಲಿ

August 24, 2026 5:46 pm
news

ಸಾಲು ಸಾಲು ಸಮಸ್ಯೆಗಳನ್ನು ಎದುರಿಸುತ್ತಿರುವ ಶಿರಾ ಜನತೆ

August 24, 2026 5:45 pm
news

ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಡಿಸಿ ಕಚೇರಿಗೆ ಮುತ್ತಿಗೆ ಯತ್ನ

August 24, 2026 5:43 pm
news

ಲಂಚ ಸ್ವೀಕಾರ ಪ್ರಕರಣ: ಗ್ರಾಮ ಸಹಾಯಕ ವಜಾ

August 21, 2026 7:05 pm
Our Youtube Channel
Our Picks

ಯುಪಿಎಸ್‌ಸಿ ಆಕಾಂಕ್ಷಿಗಳಿಗೆ ಕಠಿಣ ಪರಿಶ್ರಮ-ಶಿಸ್ತು ಅಗತ್ಯ

August 24, 2026 5:49 pm

ಪಾವಗಡ ಕ್ಷೇತ್ರದಲ್ಲಿ ೧೧ ಹೊಸ ಮತಗಟ್ಟೆ

August 24, 2026 5:47 pm

ಪರಿಸರ ಸಂರಕ್ಷಣೆ ನಮ್ಮೆಲ್ಲರ ಜೀವನ ಶೈಲಿಯಾಗಲಿ

August 24, 2026 5:46 pm

ಸಾಲು ಸಾಲು ಸಮಸ್ಯೆಗಳನ್ನು ಎದುರಿಸುತ್ತಿರುವ ಶಿರಾ ಜನತೆ

August 24, 2026 5:45 pm

ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಡಿಸಿ ಕಚೇರಿಗೆ ಮುತ್ತಿಗೆ ಯತ್ನ

August 24, 2026 5:43 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಯುಪಿಎಸ್‌ಸಿ ಆಕಾಂಕ್ಷಿಗಳಿಗೆ ಕಠಿಣ ಪರಿಶ್ರಮ-ಶಿಸ್ತು ಅಗತ್ಯ

By News Desk BenkiyabaleAugust 24, 2026 5:49 pm

ಯುಪಿಎಸ್ ಸಿ ಆಕಾಂಕ್ಷಿಗಳಿಗೆ ಕಠಿಣ ಪರಿಶ್ರಮ – ಶಿಸ್ತು ಅಗತ್ಯ. ಕೆಲಸ ಮಾಡುವಾಗ ಸಣ್ಣಪುಟ್ಟ ತಪುö್ಪಗಳು ಆಗುವುದು ಸಹಜ. ಆದರೆ,…

ಪಾವಗಡ ಕ್ಷೇತ್ರದಲ್ಲಿ ೧೧ ಹೊಸ ಮತಗಟ್ಟೆ

August 24, 2026 5:47 pm

ಪರಿಸರ ಸಂರಕ್ಷಣೆ ನಮ್ಮೆಲ್ಲರ ಜೀವನ ಶೈಲಿಯಾಗಲಿ

August 24, 2026 5:46 pm

ಸಾಲು ಸಾಲು ಸಮಸ್ಯೆಗಳನ್ನು ಎದುರಿಸುತ್ತಿರುವ ಶಿರಾ ಜನತೆ

August 24, 2026 5:45 pm
News by Date
August 2026
M T W T F S S
 12
3456789
10111213141516
17181920212223
24252627282930
31  
« Jul    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.