ತುಮಕೂರು:

     ತುಮಕೂರು ಮಹಾನಗರ ಪಾಲಿಕೆಯ ನಾಲ್ಕು ಸ್ಥಾಯಿ ಸಮಿತಿಗಳ ಅಧ್ಯಕ್ಷರ ಸ್ಥಾನಕ್ಕೆ ಗುರುವಾರ ನಡೆದ ಚುನಾವಣೆಯಲ್ಲಿ ಎಲ್ಲಾ ಅಧ್ಯಕ್ಷರು ಅವಿರೋಧವಾಗಿ ಆಯ್ಕೆಯಾದರು.

     ಲೆಕ್ಕಪತ್ರಗಳ ಸ್ಥಾಯಿ ಸಮಿತಿ ಹಾಗೂ ಸಾರ್ವಜನಿಕ ಆರೋಗ್ಯ ಶಿಕ್ಷಣ ಮತ್ತು ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಸ್ಥಾನ ಕಾಂಗ್ರೆಸ್ ಪಾಲಾದರೆ, ತೆರಿಗೆ ನಿರ್ಧರಣೆ, ಹಣಕಾಸು ಮತ್ತು ಅಫೀಲುಗಳ ಸ್ಥಾಯಿ ಸಮಿತಿಯು ಬಿಜೆಪಿ ಮತ್ತು ಪಟ್ಟಣ ಯೋಜನೆ ಮತ್ತು ಸುಧಾರಣೆಗಾಗಿ ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನ ಜೆಡಿಎಸ್ ಪಾಲಾಯಿತು.

     ತೆರಿಗೆ ನಿರ್ಧರಣೆ, ಹಣಕಾಸು ಮತ್ತು ಅಫೀಲುಗಳ ಸ್ಥಾಯಿ ಸಮಿತಿಯ ಅಧ್ಯಕ್ಷ ಸ್ಥಾನಕ್ಕೆ-1ನೇ ವಾರ್ಡ್ ನಳಿನಾ ಇಂದ್ರಕುಮಾರ್, ಸಾರ್ವಜನಿಕ ಆರೋಗ್ಯ ಶಿಕ್ಷಣ ಮತ್ತು ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಸ್ಥಾನಕ್ಕೆ 8ನೇ ವಾರ್ಡ್‍ನ ಸೈಯದ್ ನಯಾಜ್, ಪಟ್ಟಣ ಯೋಜನೆ ಮತ್ತು ಸುಧಾರಣೆಗಾಗಿ ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನಕ್ಕೆ 28 ನೇ ವಾರ್ಡ್‍ನ ಧರಣೇಂದ್ರ ಕುಮಾರ್(ರಾಜು), ಲೆಕ್ಕಪತ್ರಗಳ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ 18ನೇ ಮುಜಿದಾ ಖಾನಂ ಆಯ್ಕೆಯಾದರು.

ಮೇಯರ್ ಬಿ.ಜಿ. ಕೃಷ್ಣಪ್ಪ ಅಧ್ಯಕ್ಷತೆ ಹಾಗೂ ಉಪಮೇಯರ್ ನಾಝೀಮಾ ಬಿ, ಮಹಾನಗರ ಪಾಲಿಕೆ ಆಯುಕ್ತೆ ರೇಣುಕಾ ಉಪಸ್ಥಿತಿಯಲ್ಲಿ ಚುನಾವಣೆ ನಡೆಯಿತು. ಎಲ್ಲಾ ಸಮಿತಿಗಳಿಗೂ ಒಂದೊಂದೇ ನಾಮಪತ್ರ ಸಲ್ಲಿಕೆಯಾಗಿದ್ದ ಹಿನ್ನೆಲೆಯಲ್ಲಿ ಎಲ್ಲ ಸ್ಥಾಯಿ ಸಮಿತಿಗಳ ಅಧ್ಯಕ್ಷರು ಅವಿರೋಧವಾಗಿ ಆಯ್ಕೆಯಾದರು.

ಆಯ್ಕೆಯಾದ ಅಧ್ಯಕ್ಷರನ್ನು ಮೇಯರ್ ಬಿ.ಜಿ. ಕೃಷ್ಣಪ್ಪ ಅಧ್ಯಕ್ಷತೆ ಹಾಗೂ ಉಪಮೇಯರ್ ನಾಝೀಮಾ ಬಿ, ಮಹಾನಗರ ಪಾಲಿಕೆ ಆಯುಕ್ತೆ ರೇಣುಕಾ ಹೂಗುಚ್ಚ ನೀಡಿ ಅಭಿನಂದಿಸಿದರು.

 

(Visited 51 times, 1 visits today)