ತುಮಕೂರು:

ಕೋವಿಡ್ 2ನೇ ಅಲೆ ವ್ಯಾಪಕವಾಗಿ ಹರಡುತ್ತಿರುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಹೊರಡಿಸಿರುವ ಹೊಸ ಮಾರ್ಗಸೂಚಿಗಳನ್ನು ಅಧಿಕಾರಿಗಳು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕು ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು ಸೂಚಿಸಿದರು.
ರಾಜ್ಯಾದ್ಯಂತ ಏಪ್ರಿಲ್ 21ರ ರಾತ್ರಿ 9ರಿಂದ ಮೇ.4ರ ಬೆಳಗ್ಗೆ 6ರವರೆಗೆ ರಾತ್ರಿ ಕಫ್ರ್ರ್ಯೂ ವಿಧಿಸಿ ಸರಕಾರ ಮಾರ್ಗಸೂಚಿ ಹೊರಡಿಸಿದೆ. ಅಲ್ಲದೇ ಈ ಅವಧಿಯಲ್ಲಿ ಶುಕ್ರವಾರ ರಾತ್ರಿ 9ರಿಂದ ಸೋಮವಾರ ಬೆಳಿಗ್ಗೆ 6 ಗಂಟೆಯವರೆಗೆ ವಿಕೇಂಡ್ ಕಫ್ರ್ರ್ಯೂ ವಿಧಿಸಿದೆ. ಈ ಸಂದರ್ಭದಲ್ಲಿ ಯಾವ್ಯಾವ ಚಟುವಟಿಕೆಗಳನ್ನು ನಡೆಸಲು ಅವಕಾಶ ನೀಡಲಾಗಿದೆ ಹಾಗೂ ನಿಬರ್ಂಧವಿಸಿದಿದೆ. ಎಂಬುದನ್ನು ಮಾರ್ಗಸೂಚಿಯಲ್ಲಿ ವಿವರಿಸಲಾಗಿದೆ. ಅದರಂತೆ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ಅವರು ಹೇಳಿದರು.
ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಡಾ.ಕೆ.ವಂಶಿಕೃಷ್ಣ ಮಾತನಾಡಿ, ಕಫ್ರ್ಯೂ ಸಂದರ್ಭದಲ್ಲಿ ಮಾರ್ಗಸೂಚಿಯನ್ವಯ ರಾತ್ರಿ ಎಲ್ಲ ಅಂಗಡಿ ಮುಗ್ಗಟ್ಟುಗಳನ್ನು ಬಂದ್ ಮಾಡುವ ನಿಟ್ಟಿನಲ್ಲಿ ಕ್ರಮವಹಿಸಬೇಕು ಮತ್ತು ಅಗತ್ಯ ಸೇವೆಗಳು ಹೊರತುಪಡಿಸಿ ಉಳಿದೆಲ್ಲ ಅನಗತ್ಯ ಸಂಚಾರಕ್ಕೆ ಕಡಿವಾಣ ಹಾಕಬೇಕೆಂದು ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಬಹಳಷ್ಟು ಕೈಗಾರಿಕೆಗಳು ಮತ್ತು ಕಾರ್ಖಾನೆಗಳಿದ್ದು, ಇವುಗಳಲ್ಲಿ ರಾತ್ರಿ ಪಾಳಿಯಲ್ಲಿ ಕೆಲಸ ಮಾಡುವ ಕಾರ್ಮಿಕರು ಕಡ್ಡಾಯವಾಗಿ ರಾತ್ರಿಪಾಳಿಗಾಗಿ ಕಾರ್ಖಾನೆ ನೀಡಿರುವ ಗುರುತಿನ ಚೀಟಿ ಕಡ್ಡಾಯವಾಗಿಟ್ಟುಕೊಂಡು ತೆರಳಬೇಕು. ಅವುಗಳನ್ನು ನೋಡಿಕೊಂಡು ಅವರನ್ನು ಕಾರ್ಖಾನೆಗೆ ತೆರಳಲು ಅವಕಾಶ ಮಾಡಿಕೊಡಬೇಕು ಎಂದು ಸೂಚಿಸಿದರು.
ಹೋಟೆಲ್, ಬಾರ್ ಮತ್ತು ರೆಸ್ಟೋರೆಂಟ್‍ಗಳಲ್ಲಿ ಕೇವಲ ಪಾರ್ಸ್‍ಲ್‍ಗೆ ಮಾತ್ರ ಅವಕಾಶವಿದ್ದು, ಕುಳಿತುಕೊಂಡು ಸೇವಿಸಲು ಅವಕಾಶವಿರುವುದಿಲ್ಲ. ಕಟ್ಟಡ ಕಾರ್ಮಿಕ ಚಟುವಟಿಕೆಗಳಿಗೆ ವಿಕೆಂಡ್ ಕಫ್ರ್ಯೂ ಅವಧಿಯಲ್ಲಿ ಹೊರತುಪಡಿಸಿ ಉಳಿದ ಸಮಯದಲ್ಲಿ ಕೆಲಸ ನಿರ್ವಹಿಸಲು ಸಮಸ್ಯೆ ಇರುವುದಿಲ್ಲ ಎಂದರು.
ನೈಟ್ ಕಫ್ರ್ಯೂ ಮತ್ತು ವೀಕೆಂಡ್ ಅವಧಿಯಲ್ಲಿಯೂ ಮದುವೆಗೆ ಅವಕಾಶ ವಿದ್ದು, ಮಾರ್ಗಸೂಚಿ ಅನ್ವಯವೇ ಮದುವೆ ನಡೆಯಬೇಕು. ಈ ನಿಟ್ಟಿನಲ್ಲಿ ತಹಸೀಲ್ದಾರ್ ಮತ್ತು ಇನ್ಸ್‍ಪೆಕ್ಟರ್ ನಿಗಾವಹಿಸಬೇಕು. ಹೆಚ್ಚಿನ ಜನರು ಸೇರುವ ಮೂಲಕ ಕೋವಿಡ್ ಮಾರ್ಗಸೂಚಿ ಉಲ್ಲಂಘಿಸಿದಲ್ಲಿ ಕ್ರಮಕೈಗೊಳ್ಳಬೇಕು ಎಂದು ತಿಳಿಸಿದರು. ಅಪರ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ ಮಾತನಾಡಿ, ಸರ್ಕಾರದ ಹೊಸ ಮಾರ್ಗಸೂಚಿಗಳನ್ನು ಶ್ರದ್ಧೆಯಿಂದ ಕಟ್ಟುನಿಟ್ಟಾಗಿ ಅನುಷ್ಠಾನಕ್ಕೆ ತರುವ ಮೂಲಕ ಸೋಂಕಿನ ಪಾಸಿಟಿವ್ ಪ್ರಕರಣಗಳನ್ನು ಕಡಿಮೆ ಮಾಡಬೇಕು. ತಹಸೀಲ್ದಾರ್‍ಗಳು ಕೇಂದ್ರ ಸ್ಥಾನದಲ್ಲಿಯೇ ಉಳಿದು ಮಾರ್ಗಸೂಚಿಗಳಿಂದ ಯಾರಿಗೂ ಸಮಸ್ಯೆ ಉಂಟಾಗದಂತೆ ನಿರ್ವಹಣೆ ಮಾಡಬೇಕು. ಕಫ್ರ್ಯೂ ಸಂದರ್ಭದಲ್ಲಿಯೂ ಕೋವಿಡ್ ಕಾರ್ಯಗಳನ್ನ ಎಂದಿನಂತೆ ನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು. ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಅಜಯ್, ಪಾಲಿಕೆ ಆಯುಕ್ತೆ ರೇಣುಕಾ, ಡಿಹೆಚ್‍ಓ ಡಾ|| ನಾಗೇಂದ್ರಪ್ಪ, ಕಂದಾಯ ಹಾಗೂ ಪೊಲೀಸ್ ಇಲಾಖೆ ಅಧಿಕಾರಿಗಳು ಹಾಜರಿದ್ದರು.

(Visited 7 times, 1 visits today)