ತುಮಕೂರು :  ಡಿಸಿ, ಎಸ್ಪಿಯಿಂದ ಕಫ್ರ್ಯೂ ಪರಿಶೀಲನೆ

ತುಮಕೂರು : 

       ಕೋವಿಡ್ ಎರಡನೇ ಅಲೆ ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರ ಜಾರಿಗೊಳಿಸಿರುವ ಮಾರ್ಗಸೂಚಿಗಳನ್ವಯ ಜಿಲ್ಲೆಯಲ್ಲಿ ಅನುಷ್ಠಾನಗೊಳಿಸಿರುವ ಕಫ್ರ್ಯೂ ಕುರಿತು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಹಾಗೂ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಡಾ. ಕೆ.ವಂಶಿಕೃಷ್ಣ ಅವರು ತುಮಕೂರು ನಗರದಲ್ಲಿ ಪರಿಶೀಲನೆ ನಡೆಸಿದರು.

      ನಗರದ ಶ್ರೀ ಶಿವಕುಮಾರ ಸ್ವಾಮೀಜಿ ವೃತ್ತ ಸೇರಿದಂತೆ ನಗರದ ವಿವಿಧೆಡೆ ಸಂಚರಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿಗಳು ಪರಿಶೀಲನೆ ನಡೆಸಿ, ವಾಹನಗಳ ತಪಾಸಣೆ ಮಾಡಿದರು.
ಇದಕ್ಕೂ ಮುನ್ನ ಕಫ್ರ್ಯೂ ಸಮಯದಲ್ಲಿ ಜನರು ಹಾಗೂ ವಾಹನಗಳ ಸಂಚಾರದ ಮೇಲೆ ನಿಗಾವಹಿಸಲು ಡ್ರೋನ್ ಕ್ಯಾಮರಾಕ್ಕೆ ಚಾಲನೆ ನೀಡಿದರು.

(Visited 2 times, 1 visits today)

Related posts

Leave a Comment