ತುಮಕೂರು : ಕಾಳಸಂತೆಯಲ್ಲಿ ರೆಮಿಡಿಸಿವಿರ್ ಮಾರಾಟ : ಮೂವರ ಬಂಧನ

ತುಮಕೂರು : 

      ಕಾಳಸಂತೆಯಲ್ಲಿ ದುಬಾರಿ ಬೆಲೆಗೆ ರೆಮಿಡಿಸಿವಿರ್ ಮಾರಾಟ ಮಾರುತ್ತಿದ್ದ ಸಿದ್ದಗಂಗಾ ಆಸ್ಪತ್ರೆಯ ಇಬ್ಬರು ಸಿಬ್ಬಂದಿ ಸೇರಿ ಮೂವರನ್ನು ಪೆÇಲೀಸರು ಬಂಧಿಸಿದ್ದಾರೆ.

       ಸಿದ್ದಗಂಗಾ ಆಸ್ಪತ್ರೆಯಲ್ಲಿ ಮಾರ್ಕೆಟಿಂಗ್ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಸೈಯದ್ ಹರ್ಷದ್, ಸಿದ್ದಗಂಗಾ ಆಸ್ಪತ್ರೆಯಲ್ಲಿ ಸಿಟಿ ಎಕ್ಸ್‍ರೇ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ರಖೀಬ್, ಸೂರ್ಯ ಆಸ್ಪತ್ರೆಯಲ್ಲಿ ಒಟಿ ಟೆಕ್ನಿಷಿಯನ್ ಆಗಿ ಕೆಲಸ ಮಾಡುತ್ತಿದ್ದ ರಂಗನಾಥ ಬಂಧಿತರು.

ಸೋಂಕಿತರಿಗೆ ಅಗತ್ಯವಿರುವ ರೆಮಿಡಿಸಿವಿರ್ ಇಂಜೆಕ್ಷನ್ ಅನ್ನು ಕಾಳಸಂತೆಯಲ್ಲಿ ದುಬಾರಿ ಬೆಲೆಗೆ ಮಾರಾಟ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ತುಮಕೂರು ಪೆÇಲೀಸರು ದಾಳಿ ನಡೆಸಿದ್ದರು. ನಗರದ ಗುಂಚಿ ವೃತ್ತದಲ್ಲಿ ಆರೋಪಿಗಳನ್ನು ಬಂಧಿಸಿ 3 ರೆಮಿಡಿಸಿವರ್ ಇಂಜೆಕ್ಷನ್‍ಗಳನ್ನು ವಶಪಡಿಸಿಕೊಳ್ಳಲಾಗಿದೆ. ಇವರು 4700 ರೂ. ಬೆಲೆ ಬಾಳುವ ಇಂಜೆಕ್ಷನ್‍ಗಳನ್ನು 17 ಸಾವಿರ ರೂ. ಗೆ ಮಾರಾಟ ಮಾಡುತ್ತಿದ್ದರು. ಈ ಸಂಬಂಧ ನಗರ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

(Visited 154 times, 1 visits today)

Related posts

Leave a Comment