18-44 ವರ್ಷ ವಯೋಮಾನದವರ ಕೋವಿಡ್ ಲಸಿಕಾಕರಣ ಸ್ಥಗಿತ

ತುಮಕೂರು:

      ಸರ್ಕಾರದ ಆದೇಶದಂತೆ ಜಿಲ್ಲೆಯಲ್ಲಿ ಈಗಾಗಲೇ 18 ರಿಂದ 44 ವರ್ಷ ವಯೋಮಾನದವರಿಗೆ ನೀಡಲಾಗುತ್ತಿರುವ ಕೋವಿಶೀಲ್ಡ್ ಲಸಿಕಾಕರಣವನ್ನು ಮೇ14 ರಿಂದ ಮುಂದಿನ ಆದೇಶದವರೆಗೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಆದರೆ ಮೊದಲನೇ ಡೋಸ್ ಪಡೆದ 18 ರಿಂದ 44 ವರ್ಷದ ವಯೋಮಾನದ ಆರೋಗ್ಯ ಕಾರ್ಯಕರ್ತರು ಮತ್ತು ಮುಂಚೂಣಿ ಕಾರ್ಯಕರ್ತರು 2ನೇ ಡೋಸ್ ಲಸಿಕೆ ಪಡೆಯಲು ಅರ್ಹರಿದ್ದರೆ ಅಂತಹ ಫಲಾನುಭವಿಗಳು 2ನೇ ಡೋಸ್ ಲಸಿಕೆ ಪಡೆಯಬಹುದು ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ತಿಳಿಸಿದ್ದಾರೆ.

      ಎರಡನೇ ಡೋಸ್ ಲಸಿಕೆ ನೀಡುವ ಸಮಯದಲ್ಲಿ ಕೋವಿಶೀಲ್ಡ್ ಮೊದಲನೇ ಡೋಸ್ ಪಡೆದು 8 ವಾರಗಳನ್ನು ಪೂರ್ಣಗೊಳಿಸಿರುವ ಮತ್ತು ಕೋವ್ಯಾಕ್ಸಿನ್ ಮೊದಲನೇ ಡೋಸ್ ಪಡೆದು 6 ವಾರಗಳನ್ನು ಪೂರ್ಣಗೊಳಿಸಿರುವ ಫಲಾನುಭವಿಗಳಿಗೆ ಮೊದಲು ಲಸಿಕೆ ನೀಡಲಾಗುವುದೆಂದು ತಿಳಿಸಿದ್ದಾರೆ.

(Visited 1 times, 1 visits today)

Related posts

Leave a Comment