ತುಮಕೂರು: ಜಿಲ್ಲೆಯಲ್ಲಿ ಆಮ್ಲಜನಕ ನಿರ್ವಹಣೆ ಕುರಿತು ಮಾಹಿತಿ

ತುಮಕೂರು:

     ಜಿಲ್ಲೆಯಲ್ಲಿ ಆಮ್ಲಜನಕ ಹಾಸಿಗೆ ನಿರ್ವಹಣೆ ಮತ್ತು ಆಮ್ಲಜನಕ ಆಮದು ಮಾಡಿಕೊಳ್ಳುವ ಬಗ್ಗೆ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು ವಿಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತ ನವೀನ್ ದಾಸ್ ಸಿಂಗ್ ಅವರಿಗೆ ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ ಸರ್ಕಾರದ ಅದೇಶದನ್ವಯ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಆಮ್ಲಕನಕ ಹಾಸಿಗೆಗಳ ನಿರ್ವಹಣೆ ಮಾಡಲಾಗುತ್ತಿದೆ.

      ಜಿಲ್ಲೆಯಲ್ಲಿ ಆಮ್ಲಜನಕ ಸರಬರಾಜು ಮತ್ತು ರೀಫಿಲ್ ಮಾಡುವಾಗ ಏರ್ ವಾಟರ್ ನಂತಹ ತಾಂತ್ರಿಕ ಸಮಸ್ಯೆಗಳು ಕಾಣಬರುತ್ತಿವೆ. ಬಳ್ಳಾರಿಯಿಂದ ಆಮ್ಲಜನಕವನ್ನು ತುಂಬಿಸಿಕೊಳ್ಳಲಾಗುತ್ತಿದೆ. ಜಿಲ್ಲೆಗೆ ನೀಡಲಾಗಿರುವ ಆಮ್ಲಜನಕ ಸರಬರಾಜು ವಾಹನ ಸಾಲುತ್ತಿಲ್ಲ ಎಂದು ಅವರು ತಿಳಿಸಿದಾಗ ಇದಕ್ಕೆ ಪ್ರತಿಕ್ರಿಯಿಸಿದ ಪ್ರಾದೇಶಿಕ ಆಯುಕ್ತರು ಸಮಸ್ಯೆಗಳನ್ನು ಅವಲೋಕಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಸದ್ಯಕ್ಕೆ ಇರುವ ವ್ಯವಸ್ಥೆಯಲ್ಲಿ ಕಾರ್ಯ ನಿರ್ವಹಿಸಿ ಎಂದು ಅವರು ಜಿಲ್ಲಾಧಿಕಾರಿಗಳಿಗೆ ನಿರ್ದೇಶಿಸಿದರು.

     ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಕೆ. ಚೆನ್ನಬಸಪ್ಪ, ತುಮಕೂರು ಉಪ ವಿಭಾಗಧಿಕಾರಿ ಅಜಯ್, ಸೇರಿದಂತೆ ಜಿಲ್ಲಾ ಮಟ್ಟದ ಇತರೆ ಅಧಿಕಾರಿಗಳು ಹಾಜರಿದ್ದರು.

(Visited 1 times, 1 visits today)

Related posts

Leave a Comment