ಲಾಕ್‍ಡೌನ್ ಮಧ್ಯೆಯೂ ಪೊಲೀಸರ ಭರ್ಜರಿ ಭೇಟೆ

ತುಮಕೂರು: 

      ಜಿಲ್ಲೆಯಾದ್ಯಂತ ಕೋವಿಡ್-19 ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿಯೂ ಅಕ್ರಮವಾಗಿ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ ವ್ಯಕ್ತಿಗಳ ಮೇಲೆ ಮೇ.1 ರಿಂದ 19 ರವರೆಗೆ ಪೊಲೀಸರ ಕಾರ್ಯಾಚರಣೆಯಲ್ಲಿ ಅನೇಕ ಪ್ರಕರಣಗಳು ಬೆಳಕಿಗೆ ಬಂದಿವೆ.

ಜೂಜಾಟದಲ್ಲಿ ಭಾಗಿಯಾಗಿದ್ದ 203 ಜೂಜುಕೋರರನ್ನು ಬಂಧಿಸಿ 37 ಪ್ರಕರಣ ದಾಖಲಿಸಿ ಪಣಕ್ಕೆ ಇಟ್ಟಿದ್ದ 2,51, 190 ರೂ.ಗಳನ್ನು ವಶಪಡಿಸಿಕೊಂಡಿದ್ದಾರೆ.

      ಅದೇ ರೀತಿ ಮಟ್ಕಾ ದಂಧೆಯಲ್ಲಿ ತೊಡಗಿದ್ದ ಇಬ್ಬರು ವ್ಯಕ್ತಿಗಳನ್ನು ಬಂಧಿಸಿ 2 ಪ್ರಕರಣಗಳನ್ನು ದಾಖಲಿಸಿ ಅವರಿಂದ 8,161 ರೂ.ಗಳನ್ನು ವಶಪಡಿಸಿಕೊಂಡಿದ್ದಾರೆ. ಅಕ್ರಮವಾಗಿ ಮಧ್ಯ ಮಾರಾಟ ಮಾಡುತ್ತಿದ್ದ 71 ಜನರನ್ನು ಬಂಧಿಸಿ 286 ಲೀ. ಮಧ್ಯವನ್ನು ವಶಪಡಿಸಿಕೊಂಡು 66 ಪ್ರಕರಣ ದಾಖಲಿಸಲಾಗಿದೆ.

      ಅಕ್ರಮವಾಗಿ ಮರಳು ಸಾಗಾಣೆ ಮಾಡುತ್ತಿದ್ದ 21 ಜನರ ಮೇಲೆ 9 ಪ್ರಕರಣ ದಾಖಲಿಸಲಾಗಿದೆ. ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿ 6 ಕೆ.ಜಿ 451 ಗ್ರಾಂ. ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ.

ಯಾವುದೇ ರೀತಿಯ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಭಾಗವಹಿಸುವುದು ಕಂಡು ಬಂದಲ್ಲಿ ಅಂತಹವರ ಮೇಲೆ ನಿರ್ದಾಕ್ಷಿಣ್ಯವಾಗಿ ಕಠಿಣ ಕ್ರಮ ಜರುಗಿಸುವುದಾಗಿ ಹಾಗೂ ಸಾರ್ವಜನಿಕರು ಕೊರೋನಾ ಸಾಂಕ್ರಾಮಿಕ ರೋಗವನ್ನು ತಡೆಗಟ್ಟಲು ಪೊಲೀಸ್ ಇಲಾಖೆಯ ಜೊತೆಗೆ ಸಹಕರಿಸುವಂತೆ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಡಾ.ವಂಶಿಕೃಷ್ಣ ತಿಳಿಸಿದ್ದಾರೆ.

(Visited 1 times, 1 visits today)

Related posts

Leave a Comment