ನಿಗಧಿಪಡಿಸಿದ ಪ್ರಮಾಣದಂತೆ ಬಿತ್ತನೆ ಬೀಜ, ರಸಗೊಬ್ಬರ ವಿತರಿಸಲು ಸೂಚನೆ

 ತುಮಕೂರು:

      ಜಿಲ್ಲೆಗೆ ನಿಗಧಿಪಡಿಸಿರುವ ಪ್ರಮಾಣದಂತೆ ಬಿತ್ತನೆ ಬೀಜ, ರಸಗೊಬ್ಬರ ವಿತರಣೆ ಮಾಡುವಂತೆ ರಸಗೊಬ್ಬರ ಹಾಗೂ ಬಿತ್ತನೆ ಬೀಜ ಸರಬರಾಜು ಮತ್ತು ವಿತರಕರಿಗೆ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು.

ಕೃಷಿ ಚಟುವಟಿಕೆ ಆರಂಭದ ಹಿನ್ನೆಲೆಯಲ್ಲಿ ಬಿತ್ತನೆ ಬೀಜ ಮತ್ತು ರಸಗೊಬ್ಬರ ಸಿದ್ಧತೆ ಕುರಿತು ಗೂಗಲ್ ಮೀಟ್ ಮೂಲಕ ಇತ್ತೀಚೆಗೆ ಬಿತ್ತನೆ ಬೀಜ ಮತ್ತು ರಸಗೊಬ್ಬರ ಸರಬರಾಜುದಾರರೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ರೈತರಿಗೆ ಬೀಜ ಮತ್ತು ರಸಗೊಬ್ಬರ ವಿತರಣೆ ಸಂದರ್ಭದಲ್ಲಿ ಕೊರೋನಾ ನಿಯಮಾವಳಿಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು. ಕೋವಿಡ್ ತಡೆಗಟ್ಟಲು ಮುಂಜಾಗ್ರತೆಯಾಗಿ ಸ್ಯಾನಿಟೈಜರ್‍ಗಳನ್ನು ಬಳಸಬೇಕು. ಒಬ್ಬ ರೈತರಿಂದ ಮತ್ತೊಬ್ಬ ರೈತರ ನಡುವೆ ಅಂತರ ಕಾಪಾಡುವಂತೆ ಮತ್ತು ಮಾಸ್ಕ್ ಬಳಸುವಂತೆ ಸೂಚಿಸಬೇಕು ಎಂದರಲ್ಲದೆ ಸ್ವಚ್ಛತೆ ಕಾಪಾಡಲು ರೈತರಿಗೆ ಸಾಬೂನು ಮತ್ತು ನೀರಿನ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಗೆ ನಿಗಧಿಪಡಿಸಿರುವ ಕಾಪು ದಾಸ್ತಾನನ್ನು ಶೀಘ್ರವಾಗಿ ದಾಸ್ತಾನು ಮಾಡಬೇಕು ಎಂದು ಕರ್ನಾಟಕ ರಾಜ್ಯ ಬೀಜ ನಿಗಮ ಮತ್ತು ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳಿಗೆ ನಿರ್ದೇಶನ ನೀಡಿದರು.
ಹೊಸ ತಳಿಗಳ ಬಿತ್ತನೆ ಬೀಜಗಳನ್ನು ಸಕಾಲದಲ್ಲಿ ಸರಬರಾಜು ಮಾಡುವಂತೆ ಬಿತ್ತನೆ ಬೀಜ ಸರಬರಾಜುದಾರರಾದ ರಾಜ್ಯ ಬೀಜ ನಿಗಮ, ಕರ್ನಾಟಕ ಎಣ್ಣೆಕಾಳು ಒಕ್ಕೂಟಕ್ಕೆ ಸೂಚಿಸಿದರು.
ರಸಗೊಬ್ಬರ ಮಾರಾಟಗಾರರು ಕಡ್ಡಾಯವಾಗಿ PಔS ಯಂತ್ರದ ಮೂಲಕವೇ ಚೀಲದ ಮೇಲೆ ಮುದ್ರಿತವಾದ ದರದಲ್ಲಿ ಮಾರಾಟ ಮಾಡಬೇಕು. ರಸಗೊಬ್ಬರವನ್ನು ರೈತರಿಗೆ ಅವರ ಹಿಡುವಳಿ ಹಾಗೂ ಬೆಳೆಯುವ ಬೆಳೆಗಳ ಅವಶ್ಯಕತೆ ಅನುಗುಣವಾಗಿ ವಿತರಣೆ ಮಾಡಬೇಕು ಎಂದು ನಿರ್ದೇಶಿಸಿದರು.
ಕೇಂದ್ರ ಸರ್ಕಾರವು ಅನವಶ್ಯಕ ಯೂರಿಯಾ ವಿತರಣೆಯನ್ನು ತಡೆಯಲು ಖಿಔP-20 ಃuಥಿeಡಿs ತಂತ್ರಾಂಶ ಅಳವಡಿಸಿರುವುದರಿಂದ ಯಾವುದೇ ಅಧಿಕೃತ ರಸಗೊಬ್ಬರ ಮಾರಾಟಗಾರರಿಂದ ತಪ್ಪುಗಳು ಕಂಡುಬಂದಲ್ಲಿ ರಸಗೊಬ್ಬರ ಪರಿವೀಕ್ಷಕರುಗಳು ಪರಿವೀಕ್ಷಿಸಿ ನೋಟಿಸ್ ನೀಡಲು ಜಂಟಿ ಕೃಷಿ ನಿರ್ದೇಶಕರಿಗೆ ತಾಕೀತು ಮಾಡಿದರು. ನೋಟಿಸ್ ನೀಡಿದ ನಂತರವೂ ತಪ್ಪುಗಳಾದಲ್ಲಿ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು. ಮುಖ್ಯ ಬೆಳೆಗಳಾದ ರಾಗಿ, ಶೇಂಗಾ, ಮತ್ತಿತರ ಬಿತ್ತನೆ ಬೀಜ ಕೊರತೆಯಾಗದಂತೆ ಸರಬರಾಜು ಮಾಡಬೇಕೆಂದು ಬಿತ್ತನೆ ಬೀಜ ಸರಬರಾಜುದಾರರಿಗೆ ಸೂಚಿಸಿದರು.
ಸಭೆಯಲ್ಲಿ ಜಂಟಿ ಕೃಷಿ ನಿರ್ದೇಶಕಿ ರಾಜಸುಲೋಚನಾ ಮಾತನಾಡಿ, ಪ್ರಸಕ್ತ ಸಾಲಿನ ಮುಂಗಾರಿನಲ್ಲಿ ಜಿಲ್ಲೆಯಲ್ಲಿ 370888 ಹೆಕ್ಟೇರ್ ಬಿತ್ತನೆ ಗುರಿ ಹೊಂದಿದ್ದು, ಈಗಾಗಲೇ 7770 ಹೆಕ್ಟೇರ್ ಪ್ರದೇಶದಲ್ಲಿ ಪೂರ್ವ ಮುಂಗಾರು ಬೆಳೆಗಳಾದ ಹೆಸರು, ಉದ್ದು, ಅಲಸಂದೆ ಬಿತ್ತನೆಯಾಗಿದೆ ಎಂದು ಮಾಹಿತಿ ನೀಡಿದರು.
ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದ್ದು, ಪ್ರಸಕ್ತ ಸಾಲಿಗೆ 34420 ಬಿತ್ತನೆ ಬೀಜದ ಅವಶ್ಯಕತೆಯಿದೆ. ಈಗಾಗಲೇ 6121.33 ಕ್ವಿಂಟಾಲ್ ವಿವಿಧ ಬಿತ್ತನೆ ಬೀಜಗಳನ್ನು ದಾಸ್ತಾನು ಮಾಡಲಾಗಿದ್ದು, 147.93 ಕ್ವಿಂಟಾಲ್ ಬೀಜವನ್ನು ವಿತರಣೆ ಮಾಡಲಾಗಿದೆ ಎಂದರು.
ಜಿಲ್ಲೆಯ ಮುಖ್ಯ ಬೆಳೆಗಳಾದ ರಾಗಿ ಮತ್ತು ಶೇಂಗಾ ಬಿತ್ತನೆ ಬೀಜಗಳಿಗೆ ಯಾವುದೇ ಕೊರತೆಯಿಲ್ಲ. ಶೇಂಗಾ ಬಿತ್ತನೆ ಬೀಜವನ್ನು ಈಗಾಗಲೇ ರೈತ ಸಂಪರ್ಕ ಕೇಂದ್ರಗಳನ್ನು ಹೊರತುಪಡಿಸಿ 14 ಹೆಚ್ಚುವರಿ ವಿತರಣಾ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ತಿಳಿಸಿದರು.
ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ಜಿಲ್ಲೆಗೆ ಒಟ್ಟು 72671 ಮೆಟ್ರಿಕ್ ಟನ್ ರಸಗೊಬ್ಬರದ ಬೇಡಿಕೆಯಿದೆ. ಏಪ್ರಿಲ್ ಮತ್ತು ಮೇ ಮಾಹೆಗಳಿಗೆ 21606 ಮೆಟ್ರಿಕ್ ಟನ್ ರಸಗೊಬ್ಬರ ಬೇಡಿಕೆಯಿದ್ದು, ಈಗಾಗಲೇ 25116 ಮೆ.ಟನ್ ದಾಸ್ತಾನು ಮಾಡಲಾಗಿದೆ. ಈ ಪೈಕಿ 10153 ಮೆ.ಟನ್ ಗೊಬ್ಬರ ವಿತರಣೆ ಮಾಡಲಾಗಿದ್ದು, ಸದ್ಯದ ಮಟ್ಟಿಗೆ ರಸಗೊಬ್ಬರ ಕೊರತೆಯಿರುವುದಿಲ್ಲ. ಆದರೆ, ಜುಲೈ ನಂತರ ರಾಗಿ, ಭತ್ತ ಮತ್ತು ಮುಸುಕಿನ ಜೋಳ ಬೆಳೆಗಳಿಗೆ ಮೇಲು ಗೊಬ್ಬರವಾಗಿ ಯೂರಿಯಾ ಗೊಬ್ಬರವನ್ನು ಬಳಸುವ ಹಿನ್ನೆಲೆಯಲ್ಲಿ ಜಿಲ್ಲೆಗೆ ನಿಗದಧಿಪಡಿಸಿರುವ ಗುರಿಯನ್ವಯ ಉSಈಅ-ಒಈಐ, ಖಅಈ ಮತ್ತು ಖಈಅಐ ತಯಾರಕ ಸಂಸ್ಥೆಯು ಸರಬರಾಜು ಮಾಡುವಂತೆ ನಿರ್ದೇಶನ ನೀಡಬೇಕೆಂದು ಜಿಲ್ಲಾಧಿಕಾರಿಗಳಿಗೆ ಮನವಿ ಮಾಡಿದರು.
ಸಭೆಯಲ್ಲಿ ರಸಗೊಬ್ಬರ ಮಾರಾಟಗಾರರ , ಕೆಎಸ್ ಎಸ್ ಸಿ ಕೆಒಎಸ್, ಎನ್ ಎಸ್ ಸಿ, ರಸಗೊಬ್ಬರ ಸರಬರಾಜುದಾರರ, ರಾಜ್ಯ ಸಹಕಾರ ಮಹಾ ಮಂಡಳಿ ಪ್ರತಿನಿಧಿಗಳು ಸಭೆಯಲ್ಲಿದ್ದರು.

 

(Visited 3 times, 1 visits today)

Related posts

Leave a Comment