ತುಮಕೂರು :

     ಕ್ರೆಡಿಟ್ ಆಕ್ಸಿಸ್ ಗ್ರಾಮೀಣ್ ಲಿಮಿಟೆಡ್ ಹಾಗೂ ನವ್ಯದಿಶಾ ಸ್ವಯಂ ಸೇವಾ ಸಂಸ್ಥೆ ವತಿಯಿಂದ ಜಿಲ್ಲೆಯ 4000 ಅಂಗನವಾಡಿ ಕಾರ್ಯಕರ್ತೆಯರಿಗೆ ಮಾಸ್ಕ್ ಮತ್ತು ಸ್ಯಾನಿಟೈಸರ್‍ಗಳನ್ನು ಇಂದು ವಿತರಿಸಲಾಯಿತು.
ಮಾಸ್ಕ್ ವಿತರಿಸಿದ ನಂತರ ಕ್ರೆಡಿಟ್ ಆಕ್ಸಿಸ್ ಗ್ರಾಮೀಣ್ ಲಿಮಿಟೆಡ್ ಸಂಚಾಲಕ ಶಿವಲಿಂಗಯ್ಯ ಮಾತನಾಡಿ ಕೋವಿಡ್-19ರ ಫ್ರೆಂಟ್‍ಲೈನ್ ಕಾರ್ಯಕರ್ತೆಯರಾದ ಅಂಗನವಾಡಿ ಸಿಬ್ಬಂದಿಗಳು ತಮ್ಮ ವ್ಯಾಪ್ತಿಯ ಮನೆ ಮನೆಗೆ ಭೇಟಿ ನೀಡಿ ಕೋವಿಡ್ ಸೋಂಕು ಹರಡದಂತೆ ಹಾಗೂ ಸೋಂಕು ದೃಢಪಟ್ಟಲ್ಲಿ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸುತ್ತಿರುವುದರಿಂದ ಮಾಸ್ಕ್ ಮತ್ತು ಸ್ಯಾನಿಟೈಸರ್‍ಗಳನ್ನು ವಿತರಿಸಲಾಗಿದೆ ಎಂದು ತಿಳಿಸಿದರು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಎಸ್.ನಟರಾಜ್ ಮಾತನಾಡಿ ಕೋವಿಡ್-19ರ ಈ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಈ ಸೇವೆಯನ್ನು ಗಮನಿಸಿ ಗ್ರಾಮೀಣ ಕೂಟದಿಂದ ಮಾಸ್ಕ್ ಮತ್ತು ಸ್ಯಾನಿಟೈಸರ್‍ಗಳನ್ನು ನೀಡಿರುವುದಕ್ಕೆ ಕೃತಜ್ಞತೆ ಸಲ್ಲಿಸಿ ಅಂಗನವಾಡಿ ಕಾರ್ಯಕರ್ತೆಯರು ತಮ್ಮ ವ್ಯಾಪ್ತಿಯಲ್ಲಿ ಇನ್ನೂ ಹೆಚ್ಚು ಸಕ್ರಿಯವಾಗಿ ಸೇವೆ ಸಲ್ಲಿಸುವಂತೆ ಕರೆ ನೀಡಿದರು.

      ಈ ಸಂದರ್ಭದಲ್ಲಿ ನವ್ಯದಿಶಾ ಸಂಸ್ಥೆಯ ಯೆಂಜಾರಪ್ಪ, ಜಿಲ್ಲಾ ನಿರೂಪಣಾಧಿಕಾರಿ ಕೆ.ಆರ್.ಹೊನ್ನೇಶಪ್ಪ, ಮೇಲ್ವಿಚಾರಕಿ ಇಂದ್ರವ್ವ ಮುಂತಾದವರು ಹಾಜರಿದ್ದರು.

(Visited 6 times, 1 visits today)