ತುಮಕೂರು :
ರೋಗಿಗಳನ್ನು ಆರೈಕೆ ಮಾಡುವಾಗ ಅವರ ಸಮಸ್ಯೆಯನ್ನು ಗುರುತಿಸಿ, ಮಾನವೀಯ ನೆಲೆಗಟ್ಟಿನಲ್ಲಿ ಸೇವೆ ಮಾಡಬೇಕು, ದಾದಿಯರು ಉತ್ತಮ ಕೌಶಲ್ಯಗಳನ್ನು ಬೆಳೆಸಿಕೊಳ್ಳಬೇಕು ಹಾಗೂ ರೋಗಿಗಳ ಸೇವೆ ಮಾಡಲು ಸದಾ ಸಿದ್ದರಿರಬೇಕು. ಕೋವಿಡ್- 19 ಸಂದರ್ಭದಲ್ಲಿ ದಿನದ 24 ಗಂಟೆಯೂ ಕೆಲಸ ನಿರ್ವಹಿಸುತ್ತಿದ್ದ ನಿಜಕ್ಕೂ ಶ್ಲಾಘನೀಯವಾಗಿದೆ. ಅತ್ಯುತ್ತಮ ಕೆಲಸ ನಿರ್ವಹಿಸುತ್ತಿರುವ 5 ಜನ ನರ್ಸ್‍ರವರಿಗೆ 10 ಸಾವಿರ ರೂ ನಗದು ಮತ್ತು ಚಿನ್ನದ ಪದಕ ನೀಡ ಗೌರವಿಸಲಾಗುವುದು ಎಂದು ಶ್ರೀದೇವಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಡಾ.ಎಂ.ಆರ್.ಹುಲಿನಾಯ್ಕರ್‍ರವರು ತಿಳಿಸಿದರು.
ನಗರದ ಶ್ರೀದೇವಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಆಸ್ಪತ್ರೆಯಲ್ಲಿ ವಿಶ್ವ ದಾದಿಯರ ದಿನಾಚರಣೆ ಯನ್ನು ಮೇ 12 ರಂದು ಗುರುವಾರ ಬೆಳಿಗ್ಗೆ 11 ಗಂಟೆಗೆ ಶ್ರೀದೇವಿ ಅಡಿಟೋರಿಯಂ ಸಭಾಂಗಣದಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಈ ಕಾರ್ಯಕ್ರಮದಲ್ಲಿ ಶ್ರೀದೇವಿ ವೈದ್ಯಕೀಯ ನಿದೇಶಕರಾದ ಡಾ.ರಮಣ್ ಆರ್ ಹುಲಿನಾಯ್ಕರ್‍ರವರು ಮಾತನಾಡುತ್ತಾ ವೃತ್ತಿ ಜೀವನದಲ್ಲಿ ಸೇವಾ ಮನೋಭಾವದಿಂದ ಕಾರ್ಯನಿರ್ವಹಿಸುವಂತೆ ಕರೆ ನೀಡುತ್ತಾ. ನರ್ಸಿಂಗ್ ಕ್ಷೇತ್ರದಲ್ಲಿ ಶುಶ್ರೂಷಕ ರಾಗಲು ಅಗತ್ಯವಾದ ಗುಣಗಳನ್ನು ಬೆÀಳೆಸಿಕೊಳ್ಳಬೇಕು ಎಂದರು. ಶ್ರೀದೇವಿ ಸಂಸ್ಥೆಯ ಮಾನವ ಸಂಪನ್ಮೂಲ ವಿಭಾಗದ ನಿರ್ದೇಶಕರಾದ ಎಂ.ಎಸ್. ಪಾಟೀಲ್‍ರವರು ಮಾತನಾಡುತ್ತಾ ಪ್ರಸ್ತುತ ಆರೋಗ್ಯದ ಕ್ಷೇತ್ರದಲ್ಲಿ ಬದಲಾವಣೆಯಾಗುತ್ತಿದ್ದು, ನರ್ಸಿಂಗ್ ಕ್ಷೇತ್ರದಲ್ಲಿ ಹೆಚ್ಚು ಹೆಚ್ಚು ಕಲಿಕಾ ಪ್ರಯೋಗಗಳು ಒಳಗೊಳ್ಳಬೇಕು ಹಾಗೂ ವಿಶ್ವ ನರ್ಸ್ ದಿನಾಚರಣೆಗೆ ಶುಭ ಹಾರೈಸಿದ್ದರು.
ಶ್ರೀದೇವಿ ವೈದ್ಯಕೀಯ ಮಹಾವಿದ್ಯಾಲಯ ಪ್ರಾಂಶುಪಾಲರಾದ ಡಾ.ಡಿ.ಕೆ.ಮಹಾಬಲರಾಜುರವರು ಮಾತನಾಡುತ್ತಾ ವೃತ್ತಿ ಜೀವನದಲ್ಲಿ ಸೇವಾ ಮನೋಭಾವದಿಂದ ಕಾರ್ಯನಿರ್ವಹಿಸುವಂತೆ ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಶ್ರೀದೇವಿ ವೈದ್ಯಕೀಯ ಮಹಾವಿದ್ಯಾಲಯ ಉಪಪ್ರಾಂಶುಪಾಲರಾದ ಡಾ.ರೇಖಾಗುರುಮೂರ್ತಿರವರು ಮಾತನಾಡುತ್ತಾ ನರ್ಸ್ ಎಂಬುದು ದೇವತಾ ಸ್ಥಾನವನ್ನು ನೀಡಿದ್ದಾರೆ. ಯುದ್ದ ನಡೆಯುವ ಸಂದರ್ಭದಲ್ಲಿ ಬಹಳಷ್ಟು ಜನರು ಸೈನಿಕರು ಸಾವನ್ನಪ್ಪಿದ್ದರು. ಇನ್ನೂ ಕೆಲವರು ಸಣ್ಣ ಪುಟ್ಟ ಗಾಯಗೊಂಡಿದ್ದರು. ಉತ್ತಮವಾದ ಚಿಕಿತ್ಸೆಯನ್ನು ನೀಡಿ ದೇವತಾ ಮನುಷ್ಯರಾದರು. ದಿನದ 24 ಗಂಟೆಗೆ ಕೆಲಸ ನಿರ್ವಹಿಸುತ್ತಿರುವುದು ನಿಜಕ್ಕೂ ಶ್ಲಾಘನೀಯವಾಗಿದೆ ಎಂದರು. ಸ್ವಚ್ಛತೆ ಮತ್ತು ಕುಡಿಯುವ ನೀರಿನಲ್ಲಿ ಶುಚಿತ್ವವಿದ್ದರೆ ಯಾವುದೇ ಕಾಯಿಲೆ ಬರುವುದಿಲ್ಲ. ಸೈನಿಕರ ಜೀವ ಉಳಿಸಿ ಜೀವ ಕೊಟ್ಟವರಿಗೆ ದಿನವನ್ನು ಅಂತರಾಷ್ಟ್ರೀಯ ನರ್ಸ್ ದಿನಾಚರಣೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಶ್ರೀರಮಣ ಮಹರ್ಷಿ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ದಯಾನಂದ್‍ರವರು ಮಾತನಾಡುತ್ತಾ ನರ್ಸಿಂಗ್ ದಿನಾಚರಣೆ ಮತ್ತು ಅದರ ಮಹತ್ವದ ಬಗ್ಗೆ ವಿವರಿಸಿದರು. ಇದೇ ಸಂದರ್ಭದಲ್ಲಿ ಶ್ರೀದೇವಿ ಆಸ್ಪತ್ರೆಯ ನೇತ್ರ ತಜ್ಞರಾದ ಡಾ.ಲಾವಣ್ಯ, ಶ್ರೀದೇವಿ ವೈದ್ಯಕೀಯ ಅಧೀಕ್ಷಕರಾದ ಡಾ.ಚೆನ್ನಮಲ್ಲಯ್ಯ, ಶ್ರೀದೇವಿ ನರ್ಸಿಂಗ್ ಅಧೀಕ್ಷಕರಾದ ನರಸಪ್ಪ, ಹಾಗೂ ಬೋಧಕ, ಬೋಧಕೇತರ ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿ ವಿದ್ಯಾರ್ಥಿನಿಯರು ಭಾಗವಹಿಸಿದರು.

(Visited 1 times, 1 visits today)