ತುಮಕೂರು : 69 ಮಂದಿಗೆ ಕೋವಿಡ್-19 ಸೋಂಕು ದೃಢ!!

ತುಮಕೂರು:

      ಜಿಲ್ಲೆಯಲ್ಲಿಂದು 69 ಹೊಸ ಕೋವಿಡ್-19 ಪ್ರಕರಣ ದೃಢಪಟ್ಟಿದ್ದು, ಒಟ್ಟು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 2278ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ನಾಗೇಂದ್ರಪ್ಪ ತಿಳಿಸಿದ್ದಾರೆ.

      ಜಿಲ್ಲೆಯಲ್ಲಿ ಇಂದು ತುಮಕೂರು-39, ಕುಣಿಗಲ್-8, ಕೊರಟಗೆರೆ-8, ಚಿಕ್ಕನಾಯಕನಹಳ್ಳಿ-5, ಶಿರಾ-4, ಮಧುಗಿರಿ-2, ಗುಬ್ಬಿ-1, ಪಾವಗಡ-1, ತಿಪಟೂರು-1 ಸೇರಿದಂತೆ ಒಟ್ಟು 69 ಮಂದಿಯಲ್ಲಿ ಕೋವಿಡ್-19 ಸೋಂಕಿರುವುದು ದೃಢಪಟ್ಟಿದೆ.

      ಇಂದು ಜಿಲ್ಲಾಸ್ಪತ್ರೆಯಿಂದ 65 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ 1265 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 946 ಸಕ್ರಿಯ ಪ್ರಕರಣಗಳಿದ್ದು, ಇಂದು ಇಬ್ಬರು ಮೃತಪಟ್ಟಿದ್ದಾರೆ. ಈವರೆಗೆ 67 ಮಂದಿ ಕೋವಿಡ್-19 ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

(Visited 8 times, 1 visits today)

Related posts

Leave a Comment