ತುಮಕೂರು:


ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸೂಚನೆಯಂತೆ, 75ನೇ ಭಾರತ ಸ್ವಾತಂತ್ರ್ಯ ಅಮೃತ ಮಹೋತ್ಸವದ ಹಿನ್ನಲೆಯಲ್ಲಿ ಆಗಸ್ಟ್ 13 ರಿಂದ 15, 2022ರವರೆಗೆ “ಹರ್ ಘರ್ ತಿರಂಗಾ” ಅಭಿಯಾನ ಕಾರ್ಯಕ್ರಮವನ್ನು ದೇಶದಾದ್ಯಂತ ಹಮ್ಮಿಕೊಳ್ಳಲಾಗಿದೆ.
ಈ ಅಭಿಯಾನದಲ್ಲಿ ರಾಜ್ಯದಲ್ಲಿರುವ ಎಲ್ಲಾ ಮನೆಗಳು, ಸರ್ಕಾರಿ ಕಟ್ಟಡಗಳು, ಅರೆ ಸರ್ಕಾರಿ ಕಟ್ಟಡಗಳು, ಸಂಘ-ಸಂಸ್ಥೆಗಳ ಕಟ್ಟಡಗಳು ಹಾಗೂ ಇತರೆ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರ ಧ್ವಜವನ್ನು ಹಾರಿಸಿ ದೇಶಪ್ರೇಮವನ್ನು ಅಭಿವ್ಯಕ್ತಗೊಳಿಸಬೇಕಿದೆ. ಈ ಹಿನ್ನಲೆಯಲ್ಲಿ ದಿನಾಂಕ:12-08-2022ರಂದು ಜಿಲ್ಲಾಡಳಿತ, ತುಮಕೂರು ವತಿಯಿಂದ ತುಮಕೂರು ನಗರದ ಕನ್ನಡ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ “ಶ್ರೀ ನುಲಿಯ ಚಂದಯ್ಯ” ಜಯಂತಿಯಲ್ಲಿ “ಹರ್ ಘರ್ ತಿರಂಗಾ ಅಭಿಯಾನ” ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮಾನ್ಯ ಉಪಕಾರ್ಯದರ್ಶಿಗಳಾದ ಶ್ರೀ ಗೋಪಾಲ್, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಶ್ರೀ ಡಿ.ಎಂ.ರವಿಕುಮಾರ್, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಶ್ರೀ ಕೆ.ಎಸ್.ಸಿದ್ಧಲಿಂಗಪ್ಪ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಿಬ್ಬಂದಿಗಳಾದ ಶ್ರೀ ಡಿ.ವಿ.ಸುರೇಶ್ ಕುಮಾರ್ ಮತ್ತಿತರರು ಭಾವಗಹಿಸಿದ್ದರು.

(Visited 1 times, 1 visits today)