ತುಮಕೂರು:


ಸಿದ್ಧಾರ್ಥ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ 75ನೇ ಅಮೃತ ಮಹೋತ್ಸವದ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಇಂದು ವನಮಹೋತ್ಸವ, ಆರೋಗ್ಯ ತಪಾಸಣೆ, ಸ್ವಾತಂತ್ರ್ಯ ಹೋರಾಟಗಾರರಿಗೆ ಸನ್ಮಾನ ಸೇರಿದಂತೆ ಹತ್ತು ಹಲವು ಸಾಂಸ್ಕøತಿಕ ಕಾರ್ಯಕ್ರಮಗಳ ಮೂಲಕ ರಾಷ್ಟ್ರೀಯ ಹಬ್ಬವನ್ನು ಅರ್ಥ ಪೂರ್ಣವಾಗಿ ಆಚರಿಸಲಾಯಿತು.
ನಗರದ ಅಗಳಕೋಟೆಯಲ್ಲಿರುವ ಶ್ರೀ ಸಿದ್ದಾರ್ಥ ವೈದ್ಯಕೀಯ ಕಾಲೇಜಿನಲ್ಲಿಂದು 75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಸಾಹೇ ವಿಶ್ವ ವಿದ್ಯಾಲಯದ ಕುಲಾಧಿಪತಿಗಳಾದ ಡಾ.ಜಿ.ಪರಮೇಶ್ವರ್ ಧ್ವಜಾರೋಹಣ ನೇರವೆರಿಸಿ ಸ್ವಾತಂತ್ರ್ಯ ಹೋರಾಟಗಾರರನ್ನು ಸನ್ಮಾನಿಸಿ ಮಾತನಾಡಿದರು.
ದೇಶಕ್ಕಾಗಿ ಮಣಿದ ವೀರ ಯೋಧರನ್ನು ಸ್ಮರಿಸುತ್ತಾ ಅವರ ಹೋರಾಟ, ಬಲಿದಾನದ ಫಲವಾಗಿ ಇಂದು ನಾವು ನೆಮ್ಮದಿಯಿಂದ ಜೀವಿಸುತ್ತಿದ್ದೇವೆ. ಅವರ ತ್ಯಾಗ ಬಲಿದಾನವನ್ನು ಸ್ಮರಿಸಿದರು.
ಸಮಾಜದ ಅಭಿವೃದ್ಧಿ ಪೂರಕವಾದ ಶೈಕ್ಷಣಿಕ ಕ್ಷೇತ್ರದ ಸುಧಾರಣೆಗೆ ನಾವೆಲ್ಲರೂ ಬದ್ಧರಾಗಬೇಕು. ಹಿಂದುಳಿದ ಪ್ರದೇಶದ ಮಕ್ಕಳಿಗೆ ಶಿಕ್ಷಣ ಸಿಗಬೇಕು. ಈ ನಿಟ್ಟಿನಲ್ಲಿ ನಮ್ಮ ತಂದೆ ಸ್ಥಾಪಿಸಿದ ಶ್ರೀ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡುಯ್ಯುತ್ತಿರುವುದಾಗಿ ಹೇಳಿದ ಅವರು ಇದಕ್ಕಾಗಿ ಅಡ್ಡಿ ಬರುವ ಹಲವಾರು ಸಮಸ್ಯೆಗಳನ್ನು ಎದುರಿಸಿ ಮುನ್ನಡೆಯಬೇಕಾಗಿದೆ ಎಂದು ಡಾ.ಜಿ.ಪರಮೇಶ್ವರ ನುಡಿದರು.
ಸ್ವಾತಂತ್ರ್ಯ ಚಳವಳಿಯಲ್ಲಿ ಬ್ರಿಟಿಷರ ವಿರುದ್ಧ ಹೋರಾಡಿ, ಜೈಲು ವಾಸ ಅನುಭವಿಸದ್ದ ಹೋರಾಟಗಾರರನ್ನು ಸ್ಮರಿಸಿ, ಈ ಹಿನ್ನಲೆಯಲ್ಲಿ ತುಮಕೂರಿನ ಹಿರಿಯ ಸ್ವತಂತ್ರ್ಯ ಹೋರಾಟಗಾರ ರೇವಣ್ಣ ಹಾಗೂ ರಾಜ್ಯದಲ್ಲಿಯೇ ಮೊಟ್ಟಮೊದಲ ದಂತ ವೈದ್ಯರಾದ ಡಾ. ರಮೇಶ್ ರಾವ್ ಅವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.
ಕೋವಿಡ್ ಸಂದರ್ಭದಲ್ಲಿ ಶ್ರಮಿಸಿದ ವೈದ್ಯಕೀಯ ಸಿಬ್ಬಂಧಿ ಮತ್ತು ವೈದ್ಯಕೀಯ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ವಿತರಿಸಲಾಯಿತು.
ವೈದ್ಯಕೀಯ ವಿದ್ಯಾರ್ಥಿಗಳಿಂದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ದೇಶ ಭಕ್ತಿ ಗೀತೆ, ನೃತ್ಯ ಸೇರಿದಂತೆ ಹಲವಾರು ಸಾಂಸ್ಕøತಿಕ ಚಟುವಟಿಕೆ ಕಾರ್ಯಕ್ರಮಗಳು ನಡೆದವು. ಇದೇ ವೇಳೆ ಸಿದ್ದಾರ್ಥ ಹೃದಯ ಶಸ್ತ್ರ ಚಿಕಿತ್ಸಾ ಕೇಂದ್ರದಲ್ಲಿ ರಿಯಾಯಿತಿ ದರದಲ್ಲಿ ಹೃದಯ ರೋಗ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ಮೆಡಿಕಲ್ ಕಾಲೇಜಿನ ಪ್ರಾಂಶುಪಾಲರಾದ ಡಾ|| ಸುಶೀಲ್‍ಚಂದ್ರ ಮಹಾಪಾತ್ರ, ಉಪ ಪ್ರಾಂಶುಪಾಲರಾದ ಡಾ|| ಪ್ರಭಾಕರ, ಡೆಂಟಲ್ ಕಾಲೇಜಿನ ಪ್ರಾಂಶುಪಾಲರಾದ ಡಾ|| ಪ್ರವೀಣ್ ಕುಡುವ, ವೈದ್ಯಕೀಯ ಅಧೀಕ್ಷಕರಾದ ಡಾ|| ಕೆ ವೆಂಕಟೇಶ್, ಕುಲಾಧಿಪತಿಗಳ ಸಲಹೆಗಾರರಾದ ವಿವೇಕ ವೀರಯ್ಯ, ಪ್ರಾಧ್ಯಾಪಕರಾದ ಡಾ|| ಮಂಜುನಾಥ, ಡಾ|| ರಮೇಶ್ ರಾವ್ ಮೊದಲಾದವರು ಭಾಗಿಯಾಗಿದ್ದರು.
ನಗರದ ಶ್ರೀ ಸಿದ್ದಾರ್ಥ ಇಂಜಿನಿಯರಿಂಗ್ ಕಾಲೇಜಿನ ಡಾ. ಎಚ್. ಎಂ ಗಂಗಾಧರಯ್ಯ ವೃತ್ತದಲ್ಲಿ ಏರ್ಪಡಿಸಲಾದ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಎಂ ಎಸ್ ರವಿಪ್ರಕಾಶರವರು ಧ್ವಜಾರೋಹಣ ನೇರವೇರಿಸಿದರು. ನಂತರ ಕ್ಯಾಂಪಸ್‍ನ ಹಸಿರು ಉದ್ಯಾನವನದಲ್ಲಿ ಗಿಡ ನೆಡುವುದರ ಮೂಲಕ ವನಮಹೋತ್ಸವಕ್ಕೆ ಚಾಲನೆ ನೀಡಿದರು. ಸಿವಿಲ್ ವಿಭಾಗದ ವತಿಯಿಂದ 75 ವರ್ಷದ ಸವಿನೆನಪಿಗಾಗಿ ಕ್ಯಾಂಪಸ್ ಆವರಣದಲ್ಲಿ 75 ಸಸಿಗಳನ್ನು ನೆಡಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಡಾ.ಎಂ.ಎಸ್.ರವಿಪ್ರಕಾಶ ಅವರು, 75 ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವ ಸಂದರ್ಭದಲ್ಲಿ ದೇಶದಲ್ಲಿ ಹರ್ ಘರ್ ಕಾ ತಿರಂಗಾ ಎಂಬ ಧೇಯೋದ್ದೇಶದಿಂದ ಪ್ರತಿ ಮನೆಯಲ್ಲೂ ರಾಷ್ಟ್ರ ಧ್ವಜ ಹಾರಿಸಲಾಗಿದೆ. ದೇಶ ನಮಗಾಗಿ ಏನು ಮಾಡಿದೆ ಎನುವುದಕ್ಕಿಂತ ನಾವು ದೇಶಕ್ಕೆ ಏನು ಮಾಡಿದ್ದೇವೆ ಎನ್ನುವುದು ಮುಖ್ಯವಾಗಿದೆ ಎಂದರು.
ಎನ್‍ಸಿಸಿ ವಿದ್ಯಾರ್ಥಿಗಳಾದ ಅಮೀರ್ ಸಲಾಮ್ ಮತ್ತು ಹರ್ಷಿತಾ ಅವರು ಸ್ವಾತಂತ್ರ್ಯೋತ್ಸವ ಕುರಿತು ಮಾತನಾಡಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ವಿವಿಧ ವಿಭಾಗದ ಡೀನ್‍ಗಳಾದ ಡಾ.ಕೆ.ಕರುಣಾಕರ್, ಡೀನ್ ಡಾ. ಸಿದ್ದಪ್ಪ, ಡೀನ್ ಡಾ. ರಾಜಾನಾಯಕ್, ನಿವೃತ್ತ ಪ್ರಾಂಶುಪಾಲರಾದ ಡಾ. ವೀರಯ್ಯ, ಮಾಧ್ಯಮ ಅಧ್ಯಯನ ಕೇಂದ್ರದ ನಿರ್ದೇಶಕರಾದ ಡಾ.ಬಿ.ಟಿ ಮುದ್ದೇಶ್, ವಿಭಾಗಗಳ ಪ್ರಾಂಶುಪಾಲರು, ಮುಖ್ಯಸ್ಥರು ಹಾಗೂ ಪ್ರಾಧ್ಯಾಪಕರು ಪಾಲ್ಗೊಂಡಿದ್ದರು. ಸಹಾಯಕ ಪ್ರಾದ್ಯಾಪಕರಾದ ಶಾರದ ಗುಪ್ತ ಪ್ರಾರ್ಥಿಸಿದರು. ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕರಾದ ಟಿ.ಪಿ ಮೋಹನ್ ಕುಮಾರ್ ಸ್ವಾಗತಿಸಿದರೆ, ಎನ್‍ಎಸ್‍ಎಸ್ ಅಧಿಕಾರಿ ರವಿಕಿರಣ್ ವಂದಿಸಿದರು. ಸಹಾಯಕ ಪ್ರಾದ್ಯಾಪಕರಾದ ಎನ್ ಪ್ರದೀಪ್ ಕಾರ್ಯಕ್ರಮ ನಿರೂಪಿಸಿದರು. ಎನ್.ಸಿ.ಸಿ ವಿದ್ಯಾರ್ಥಿಗಳು ಪಥಸಂಚಲನ ನಡೆಸಿದರು.
ಶ್ರೀ ಸಿದ್ಧಾರ್ಥ ಪ್ರಥಮ ದರ್ಜೆ ಕಾಲೇಜು:
ನಗರದ ಸರಸ್ವತಿಪುರಂನಲ್ಲಿರುವ ಶ್ರೀ ಸಿದ್ಧಾರ್ಥ ಪ್ರಥಮ ದರ್ಜೆ ಕಾಲೇಜಿನಲ್ಲಿ 75ನೇ ಸ್ವಾತಂತ್ರ ದಿನಾಚರಣೆಯ ಧ್ವಜಾರೋಹಣ ಮಾಡಿದ ಆಡಳಿತಾಧಿಕಾರಿ ಖಲಂದರ್ ಪಾμÁ ಮಾತನಾಡಿ, ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಮತ್ತು ಸಮರ್ಪಣೆಯನ್ನು ಸ್ಮರಿಸುವುದರ ಜೊತೆಗೆ ದೇಶದ ಅಭಿವೃದ್ಧಿಗಾಗಿ ನಾವೆಲ್ಲರೂ ಶ್ರಮಿಸಬೇಕು ಎಂದರು.
ಬಿಬಿಎಂ ಪ್ರಾಂಶುಪಾಲರಾದ ಡಾ. ರವಿಕುಮಾರ್ ಮಾತನಾಡಿ, ಸ್ವಾತಂತ್ರ್ಯಕ್ಕಾಗಿ ಅನೇಕ ದೇಶಭಕ್ತರು ಬಲಿದಾನ ಮಾಡಿದ್ದಾರೆ. ಸ್ವಾತಂತ್ರಕ್ಕಾಗಿ ಹೋರಾಡಿದ ದೇಶ ಭಕ್ತರನ್ನು ಇಂದು ನಾವೆಲ್ಲರೂ ಸ್ಮರಿಸಬೇಕೆಂದರು.
ಸ್ವಾತಂತ್ರ್ಯದ ಅಮೃತ ಮಹೋತ್ಸವ ಅಂಗವಾಗಿ ಕಾಲೇಜಿನಲ್ಲಿ ಚರ್ಚಾ ಸ್ಪರ್ಧೆ, ನಿಬಂಧ ಸ್ಪರ್ಧೆ, ಭಾಷಣ, ದೇಶ ಭಕ್ತಿ ಗೀತೆ ಸೇರಿದಂತೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ಅದರಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಲಾಯಿತು.
ಕಾಲೇಜಿನ ಪ್ರಾಂಶುಪಾಲರಾದ ಡಾ. ವಿಜಯ ಭಾಸ್ಕರ್, ನಿವೃತ್ತ ಪ್ರಾಂಶುಪಾಲರಾದ ಡಾ. ಕೆ ಎಸ್ ಕುಮಾರ್, ಶ್ರೀ ಸಿದ್ದಾರ್ಥ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಲತಾ ಬಿ. ಎಸ್ ಸೇರಿದಂತೆ ಎನ್‍ಸಿಸಿ ಮತ್ತು ಎನ್‍ಎಸ್‍ಎಸ್ ಘಟಕದ ವಿದ್ಯಾರ್ಥಿಗಳು ಮತ್ತು ಪ್ರಾದ್ಯಾಪಕ ವರ್ಗ ಉಪಸ್ಥಿತರಿದ್ದರು.

(Visited 17 times, 1 visits today)