ಮಧುಗಿರಿ


ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚು ಹೊತ್ತು ನೀಡಬೇಕಾಗಿದೆ ಎಂದು ಮಧು ಚಾರಿ ಟಬಲ್ ಟ್ರಸ್ಟ್ ಅಧ್ಯಕ್ಷ ಹಾಗೂ ಸಮಾಜ ಸೇವಕ ಮಧು ಜೀಡಿಪಾಳ್ಯ ತಿಳಿಸಿದ್ದಾರೆ.
ತಾಲೂಕಿನ ಲಕ್ಲಿಹಟ್ಟಿ ಹೊಸಕೆರೆ ತೆರೆಯೂರು ಕಡಗತೂರು ಗ್ರಾಮಗಳಲ್ಲಿ ನಡೆದ ಧಾರ್ಮಿಕ ಕಾರ್ಯ ಕ್ರಮಗಳಲ್ಲಿ ಭಾಗವಹಿಸಿ ಮಾತನಾಡುತ್ತಾ ಪ್ರತಿ ಮನೆ ಪ್ರತಿ ಗ್ರಾಮ ಅಭಿವೃದ್ಧಿಯಾಗಬೇಕಾದರೆ ಶಿಕ್ಷಣ ಕಾರಣ ಪ್ರತಿ ಗ್ರಾಮಗಳಲ್ಲಿ ಹೆಚ್ಚು ಹೆಚ್ಚು ಮಂದಿ ಶಿಕ್ಷಣವಂತರಾದಾಗ ಆ ಗ್ರಾಮ ಅಭಿವೃದ್ಧಿಯಾಗುತ್ತದೆ ಮಧು ಚಾರಿಟಬಲ್ ಟ್ರಸ್ಟ್ ಮೂಲಕ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚು ಹೊತ್ತು ನೀಡಲಾಗಿದೆ ಎಂದರು. ಅಲ್ಲದೆ ಮಧುಗಿರಿ ತಾಲೂಕನ್ನು ಮಾದರಿ ತಾಲೂಕಾಗಿ ಮಾಡಲಾಗುವುದು ಮತ್ತು ಗುಡಿಸಲು ಮುಕ್ತ ತಾಲೂಕಾಗಿ ಮಾಡುವ ಯೋಜನೆ ಇದೆ ನಾನು ಶಾಸಕನಾಗಿ ಆಯ್ಕೆಯಾದರೆ ಮಧುಗಿರಿಯನ್ನು ಜಿಲ್ಲಾ ಕೇಂದ್ರ ಮಾಡುವುದು ಹೋಬಳಿ ಮಟ್ಟಗಳಲ್ಲಿ ಕೈಗಾರಿಕೆಗಳ ಸ್ಥಾಪನೆ ಮಧುಗಿರಿಯಲ್ಲಿ ವಿಶ್ವವಿದ್ಯಾಲಯ ಸ್ಥಾಪನೆ. ಪ್ರವಾಸೋದ್ಯಮ ಕೇಂದ್ರಗಳ ಸ್ಥಾಪನೆ .ನೀರಾವರಿ ಯೋಜನೆಗಳಿಗೆ ಆದ್ಯತೆ. ನನ್ನ ಪಂಚಯೋಜನೆಗಳಾಗಿದ್ದು ಇವುಗಳ ಜಾರಿ ಮಾಡಲು ನನ್ನನ್ನು ಶಾಸಕರಾಗಿ ಆಯ್ಕೆ ಮಾಡಿ ನಿಮ್ಮ ಗ್ರಾಮಗಳ ಅಭಿವೃದ್ಧಿ ಪಡಿಸಲು ನನ್ನ ಜೊತೆ ಕೈಜೋಡಿಸಿ ಎಂದು ಮನವಿ ಮಾಡಿದರು.

(Visited 3 times, 1 visits today)