ತುಮಕೂರು


ಬಡವರಿಗೆ ಮತ್ತು ಕಕ್ಷಿದಾರರಿಗೆ ತ್ವರಿತವಾಗಿ ನ್ಯಾಯ ಸಿಗಬೇಕಾದರೆ ಸಂಧಾನದ ಮೂಲಕ ದಾವೆಗಳು ಆದಷ್ಟು ಬೇಗ ಇತ್ಯರ್ಥವಾಗಬೇಕು,ನ್ಯಾಯಾಧೀಶರುಗಳಿಗೆ ಇಂತಹ ಮಧ್ಯಸ್ಥಿಕೆ ಪುನರ್ಮನನ ತರಬೇತಿ ಕಾರ್ಯಾಗಾರದ ಅಗತ್ಯತೆ ಇದೆ,ಇಂದು ಪ್ರಸ್ತುತ ದಿನಗಳಲ್ಲಿ ನ್ಯಾಯಾಲಯಗಳಲ್ಲಿ ಹೆಚ್ಚಾಗಿ ದಾವೆಗಳು ಹೆಚ್ಚುತ್ತಿವೆ, ರಾಜಿ ಸಂಧಾನದ ಮೂಲಕ ದಾವೆಗಳು ಇತ್ಯರ್ಥವಾದರೆ ಎರಡೂ ಕಡೆಯ ಪಕ್ಷಗಾರರಿಗೆ ಅನುಕೂಲವಾಗಲಿದೆ ಎಂದು ರಾಜ್ಯ ಉಚ್ಛನ್ಯಾಯಾಲಯದ ನ್ಯಾಯಾಧೀಶರಾದ ಜಸ್ಟೀಸ್ ಎನ್.ಎಸ್.ಸಂಜಯಗೌಡರವರು ತಿಳಿಸಿದರು.
ಅವರು ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ,ಜಿಲ್ಲಾ ನ್ಯಾಯಾಂಗ ತುಮಕೂರು,ಬೆಂಗಳೂರು ಮಧ್ಯಸ್ಥಿಕೆ ಕೇಂದ್ರ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಹಯೋಗದಲ್ಲಿ ತುಮಕೂರು ಜಿಲ್ಲಾ ಗೌರವಾನ್ವಿತ ನ್ಯಾಯಾಧೀಶರುಗಳಿಗೆ ಮಧ್ಯಸ್ಥಿಕೆ ಪುನರ್ಮನನ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ||ವಿದ್ಯಾಕುಮಾರಿರವರು ತರಬೇತಿ ಕಾರ್ಯಾಗಾರದ ಮುಖ್ಯ ಉದ್ದೇಶ ಪಕ್ಷಗಾರರಿಗೆ ಬೇಗ ನ್ಯಾಯದಾನ ಸಿಗಬೇಕು ಆಗ ಮಾತ್ರ ಇಂತಹ ಕಾರ್ಯಾಗಾರ ಯಶಸ್ವಿಯಾಗುತ್ತದೆ,ಈ ಹಿಂದೆ ತುಮಕೂರು ಜಿಲ್ಲೆಯಲ್ಲಿ ನಡೆದ ಬೃಹತ್ ಲೋಕ್ ಅದಾಲತ್ ನಲ್ಲಿ ಸಾವಿರಾರು ಪ್ರಕರಣಗಳು ರಾಜಿ ಸಂಧಾನದ ಮೂಲಕ ಇತ್ಯರ್ಥವಾಗಿರುವುದು ನಮ್ಮೆಲ್ಲರಿಗೂ ಸಂತೋಷ ತಂದಿದೆ,ಕೆಲವರು ಚಿಕ್ಕ ಚಿಕ್ಕ ವಿಚಾರಕ್ಕೂ ನ್ಯಾಯಾಲಯಕ್ಕೆ ಬರುತ್ತಾರೆ ಇದರಿಂದ ಸಮಯ,ಹಣ ಎಲ್ಲವೂ ವ್ಯರ್ಥ ಎರಡೂ ಕಡೆಯವರು ರಾಜಿ ಆದರೆ ಇಬ್ಬರಿಗೂ ಸಂತೋಷವಾಗುತ್ತದೆ ಈ ನಿಟ್ಟಿನಲ್ಲಿ ನ್ಯಾಯಾಧೀಶರು ಕಾರ್ಯೋನ್ಮುಖರಾಗಿರುವುದು ನಮ್ಮೆಲ್ಲರಿಗೂ ಹೆಮ್ಮೆ ಎಂದು ಹೇಳಿದರು.
ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ಕೆ.ಬಿ.ಗೀತಾರವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದರು.
ವೇದಿಕೆಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶ್ರೀಮತಿ ನೂರುನ್ನೀಸ, ಸಂಪನ್ಮೂಲ ವ್ಯಕ್ತಿಗಳಾಗಿ ತರಬೇತಿದಾರರಾದ ನಂದಗೋಪಾಲ್,ವೈಶಾಲಿಹೆಗಡೆ ರವರು ಆಗಮಿಸಿದ್ದರು.ಈ ಸಂದರ್ಭದಲ್ಲಿ ಜಸ್ಟೀಸ್ ಎನ್.ಎಸ್.ಸಂಜಯಗೌಡರವರನ್ನು ಜಿಲ್ಲೆಯ ಎಲ್ಲಾ ನ್ಯಾಯಾಧೀಶರು ಅಭಿನಂದಿಸಿದರು.

(Visited 1 times, 1 visits today)