BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಸರ್ಕಾರವೇ ನಿಡಗಲ್ಲು ಉತ್ಸವ ಆಚರಿಸಲಿ: ಶಾಂತಲಾ ರಾಜಣ್ಣ ಒತ್ತಾಯ
  • ತುಮಕೂರಿನಲ್ಲಿ ಕನ್ನಾಳೆ ವಜಾಕ್ಕೆ ಆಗ್ರಹಿಸಿ ಎಬಿವಿಪಿ ರಸ್ತೆ ತಡೆದು ಪ್ರತಿಭಟನೆ
  • ಕಾಮಗಾರಿಗಳ ಅಕ್ರಮ ಖಂಡಿಸಿ ಕಾಂಗ್ರೆಸ್ ಮುಖಂಡರ ಸತ್ಯಾಗ್ರಹ
  • ಪಾವಗಡ ತಾಲ್ಲೂಕಿನ ಹಸಿರೀಕರಣಕ್ಕಾಗಿ ಕೆರೆಗಳಿಗೆ ನೀರು
  • ರೈತರ ಜಮೀನಿಗೆ ಕೈಹಾಕಿದರೆ, ಕಂಬಕ್ಕೆ ಕಟ್ಟಿಹಾಕಿ: ಪ್ರತಿಭಟನೆ
  • ಸಾರ್ವಜನಿಕ ಹಬ್ಬಗಳಲ್ಲಿ ಡಿಜೆ ಸಂಪೂರ್ಣ ನಿಷೇಧ: ಸಿಐ ಸುರೇಶ್ ಸೂಚನೆ
  • ಮಳೆಗಾಲದಲ್ಲೇ ಕುಡಿಯುವ ನೀರಿಗೆ ಹಾಹಾಕಾರ
  • ತುಮಕೂರಿನಲ್ಲಿ ಮಣ್ಣಿನ ಗಣೇಶನಿಗೆ ಮಕ್ಕಳ ಕೈಚಳಕ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ತುಮಕೂರು ಮಹಾನಗರ ಪಾಲಿಕೆ : 3.81ಕೋಟಿ ರೂ. ಉಳಿತಾಯ ಬಜೆಟ್ ಮಂಡನೆ
Trending

ತುಮಕೂರು ಮಹಾನಗರ ಪಾಲಿಕೆ : 3.81ಕೋಟಿ ರೂ. ಉಳಿತಾಯ ಬಜೆಟ್ ಮಂಡನೆ

By News Desk BenkiyabaleUpdated:May 07, 2020 7:06 pm

ತುಮಕೂರು :

      ಮಹಾನಗರ ಪಾಲಿಕೆ ಸಭಾಂಗಣದಲ್ಲಿಂದು ನಡೆದ 2020-21ನೇ ಸಾಲಿನ ಆಯ-ವ್ಯಯ ಸಭೆಯಲ್ಲಿ 3.81ಕೋಟಿ ರೂ. ಉಳಿತಾಯ ಬಜೆಟನ್ನು ಮಂಡನೆ ಮಾಡಲಾಯಿತು.

       ಬಜೆಟ್ ಮಂಡಿಸಿದ ಹಣಕಾಸು ಮತ್ತು ತೆರಿಗೆ ನಿರ್ಧರಣೆ ಸ್ಥಾಯಿ ಸಮಿತಿಯ ಅಧ್ಯಕ್ಷ ಟಿ.ಎಂ.ಮಹೇಶ್ ಪಾಲಿಕೆಯು ತನ್ನ ಆರ್ಥಿಕ ಇತಿಮಿತಿಗಳಲ್ಲಿ ಲಭ್ಯವಿರುವ ಸಂಪನ್ಮೂಲಗಳನ್ನು ಬಳಸಿಕೊಂಡು ಆಯ-ವ್ಯಯ ಅಂದಾಜನ್ನು ತಯಾರಿಸಲಾಗಿದೆ. ಈ ಆಯವ್ಯಯದ ಅನ್ವಯ ಒಟ್ಟು ಆರಂಭಿಕ ಶಿಲ್ಕು 2601.45 ಲಕ್ಷ ರೂ. ಸೇರಿ 22804.77ಲಕ್ಷ ರೂ.ಗಳ ಅಂದಾಜು ಸ್ವೀಕೃತಿ ಹಣದಲ್ಲಿ 2020-21 ಸಾಲಿಗಾಗಿ 22423.37 ಲಕ್ಷ ರೂ.ಗಳ ಅಂದಾಜು ವೆಚ್ಚ ಮಾಡಲು ಬಜೆಟ್ ಮಂಡನೆ ಮಾಡಲಾಗಿದ್ದು, 381.40ಲಕ್ಷ ರೂ.ಗಳು ಮಿಗತೆಯಲ್ಲಿದೆ ಎಂದು ತಿಳಿಸಿದ ಅವರು ತುಮಕೂರು ನಗರ ನಿವಾಸಿಗಳಿಗೆ ಮೂಲಭೂತ ಸೌಲಭ್ಯವನ್ನು ಒದಗಿಸುವಲ್ಲಿ ಹೆಚ್ಚು ಪ್ರಾಧಾನ್ಯತೆಯನ್ನು ನೀಡಲಾಗಿದೆ ಎಂದು ಹೇಳಿದರು.

      ಈ ವರ್ಷದ ಆಯವ್ಯಯದಲ್ಲಿ ನಗರದ ಜನತೆಗೆ ಸ್ಮಾರ್ಟ್ ಸಿಟಿ ಯೋಜನೆಯಡಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್‍ನಿಲ್ದಾಣ, ವ್ಯವಸ್ಥಿತವಾದ ಪಾರ್ಕಿಂಗ್, ಸುಸಜ್ಜಿತ ಗ್ರಂಥಾಲಯ ಕಟ್ಟಡ, ಸ್ಮಾರ್ಟ್ ಲಾಂಜ್ ನಿರ್ಮಾಣ, ಪಾರ್ಕ್ ಮತ್ತು ರಸ್ತೆ ನಿರ್ಮಾಣ, ಮಹಾತ್ಮ ಗಾಂಧಿ ಕ್ರೀಡಾಂಗಣ ನವೀಕರಣದೊಂದಿಗೆ ಕುಡಿಯುವ ನೀರು, ಉತ್ತಮ ಆರೋಗ್ಯ, ಸ್ವಚ್ಛ ತುಮಕೂರು, ಬೀದಿ ದೀಪ, ಒಳಚರಂಡಿ ವ್ಯವಸ್ಥೆ, ಉದ್ಯಾನವನಗಳ ಅಭಿವೃದ್ಧಿ, ಮತ್ತಿತರ ಸಾರ್ವಜನಿಕ ಸಹಭಾಗಿತ್ವದ ಅಭಿವೃದ್ಧಿ ಕೆಲಸವನ್ನು ಕೈಗೆತ್ತಿಕೊಳ್ಳಲು ಯೋಜಿಸಲಾಗಿದೆ ಎಂದು ತಿಳಿಸಿದರು.

    ಹಣಕಾಸು ನಿರ್ವಹಣೆ :

      ಪ್ರಸಕ್ತ ಸಾಲಿನಲ್ಲಿ ಪಾಲಿಕೆಯಿಂದ ಒಟ್ಟು 20203.32ಲಕ್ಷಗಳ ಸ್ವೀಕೃತಿಯನ್ನು ನಿರೀಕ್ಷಿಸಲಾಗಿದ್ದು, ಈ ಪೈಕಿ ಸ್ವಂತ ಸಂಪನ್ಮೂಲಗಳಿಂದ 6150.39ಲಕ್ಷ ರೂ. ಹಾಗೂ ಸರ್ಕಾರದ ಅನುದಾನಗಳಿಂದ 14052.93ಲಕ್ಷ ರೂ.ಗಳನ್ನು ನಿರೀಕ್ಷಿಸಲಾಗಿದೆ ಎಂದು ತಿಳಿಸಿದರು.

      ಆಸ್ತಿ ತೆರಿಗೆಯು ಪಾಲಿಕೆಯ ಪ್ರಮುಖ ಆದಾಯ ಮೂಲವಾಗಿದ್ದು, ಕಟ್ಟಡ ಮತ್ತು ಭೂಮಿ ಮೇಲಿನ ಆಸ್ತಿ ತೆರಿಗೆಯಿಂದ 30ಕೋಟಿ ರೂ.(ಸೆಸ್ ಸೇರಿ)ಗಳನ್ನು ನಿರೀಕ್ಷಿಸಲಾಗಿದ್ದು, ಆಸ್ತಿ ತೆರಿಗೆ ಮೇಲಿನ ದಂಡದ ರೂಪದಲ್ಲಿ 3ಕೋಟಿ ರೂ.ಗಳನ್ನು ಸಂಗ್ರಹಿಸಲು ಅಂದಾಜಿಸಲಾಗಿದೆ. ಘನತ್ಯಾಜ್ಯ ವಸ್ತು ನಿರ್ವಹಣೆ ಮತ್ತು ನೈರ್ಮಲ್ಯ ಉಪಕರದಿಂದ 200ಲಕ್ಷ ರೂ.; ನೀರಿನ ಶುಲ್ಕ 1200 ಲಕ್ಷ ರೂ., ಹೊಸ ಕೊಳಾಯಿ ಜೋಡಣಾ ಶುಲ್ಕ 25ಲಕ್ಷ ರೂ., ಅನಧಿಕೃತ ಕೊಳಾಯಿಗಳ ಸಕ್ರಮೀಕರಣದಿಂದ 50ಲಕ್ಷ ರೂ., ಶುದ್ಧ ಕುಡಿಯುವ ನೀರಿನ ಘಟಕಗಳಲ್ಲಿ ನೀರು ಮಾರಾಟದಿಂದ 50ಲಕ್ಷ ರೂ.ಗಳನ್ನು ನಿರೀಕ್ಷಿಸಲಾಗಿದೆ.

      ಒಳಚರಂಡಿ ಶುಲ್ಕ 100ಲಕ್ಷ ರೂ., ಒಳಚರಂಡಿ ಸಂಪರ್ಕದಿಂದ 100ಲಕ್ಷ ರೂ., ಹಾಗೂ ಅನಧಿಕೃತ ಒಳಚರಂಡಿ ಸಂಪರ್ಕ ಸಕ್ರಮದಿಂದ 10ಲಕ್ಷ ರೂ.ಗಳ ಆದಾಯ; ಅಂಗಡಿ ಮಳಿಗೆಗಳ ಬಾಡಿಗೆಯಿಂದ 158ಲಕ್ಷ ರೂ.; ಆಸ್ತಿ ಹಕ್ಕು ಬದಲಾವಣೆ ಶುಲ್ಕದಿಂದ 100ಲಕ್ಷ ರೂ. ಹಾಗೂ ಆಸ್ತಿ ನಕಲು ಶುಲ್ಕದಿಂದ 2ಲಕ್ಷ ರೂ.; ಕಟ್ಟಡ ಪರವಾನಗಿ ಶುಲ್ಕ ವಸೂಲಿಯಿಂದ 100ಲಕ್ಷ ರೂ.; ಕೆರೆಗಳ ಪುನರುಜ್ಜೀವನ ಶುಲ್ಕ ವಸೂಲಾತಿಯಿಂದ 30ಲಕ್ಷ ರೂ.; ಉದ್ದಿಮೆ ಪರವಾನಗಿ ಶುಲ್ಕದಿಂದ 150ಲಕ್ಷ ರೂ.; ಜಾಹೀರಾತು ತೆರಿಗೆ ರೂಪದಲ್ಲಿ 15ಲಕ್ಷ ರೂ.; ಅಧಿಭಾರ ಶುಲ್ಕದಿಂದ (ಸ್ಟಾಂಪ್ ಡ್ಯೂಟಿ) 50ಲಕ್ಷ ರೂ.; ಅಭಿವೃದ್ಧಿ ಮತ್ತು ಸುಧಾರಣಾ ಶುಲ್ಕದಿಂದ 9ಲಕ್ಷ ರೂ.; ರಸ್ತೆ ಕಡಿತ ಶುಲ್ಕದಿಂದ 150 ಲಕ್ಷ ರೂ.; ವಿವಿಧ ಬ್ಯಾಂಕ್‍ಗಳಲ್ಲಿ ಪಾಲಿಕೆ ಹೊಂದಿರುವ ಖಾತೆಗಳಲ್ಲಿ ನಿರ್ವಹಿಸಿದ ಹಣದ ಮೇಲೆ 150ಲಕ್ಷ ರೂ.ಗಳ ಬಡ್ಡಿ; ವಾಹನ ನಿಲುಗಡೆ ಶುಲ್ಕದಿಂದ 10ಲಕ್ಷ ರೂ.; ಮಾರುಕಟ್ಟೆ ಶುಲ್ಕದಿಂದ 40ಲಕ್ಷ ರೂ.; ಜನನ-ಮರಣ ಪ್ರಮಾಣ ಪತ್ರ, ಟೆಂಡರ್ ಫಾರಂ ವಿತರಣೆ, ಘನತ್ಯಾಜ್ಯ ಸಂಸ್ಕರಣಾ ಮಾರಾಟ, ಅನುಪಯುಕ್ತ ವಸ್ತುಗಳ ವಿಲೇವಾರಿ, ಮತ್ತಿತರ ದಂಡಗಳಿಂದ 151.38ಲಕ್ಷ ರೂ.ಗಳನ್ನು ನಿರೀಕ್ಷಿಸಲಾಗಿದೆ ಎಂದು ತಿಳಿಸಿದರು.

ಅನುದಾನಗಳು :-

      ಪಾಲಿಕೆಗೆ 2020-21ನೇ ಸಾಲಿನ ಆರ್ಥಿಕ ವರ್ಷದಲ್ಲಿ ವಿವಿಧ ಅನುದಾನಗಳನ್ನು ನಿರೀಕ್ಷಿಸಲಾಗಿದ್ದು, ಅಧಿಕಾರಿ/ ಸಿಬ್ಬಂದಿ ವರ್ಗದವರಿಗೆ ವೇತನ ಮತ್ತಿತರೆ ಸೌಲಭ್ಯಗಳ ಎಸ್‍ಎಫ್‍ಸಿ ವೇತನದಡಿ 16.45ಕೋಟಿ ರೂ., ನಗರದ ಅಭಿವೃದ್ಧಿಗಾಗಿ ಎಸ್‍ಎಫ್‍ಸಿ ಮುಕ್ತ ನಿಧಿಯಡಿ 4.45ಕೋಟಿ ರೂ.; ಎಸ್.ಎಫ್.ಸಿ. ವಿಶೇಷ ಅನುದಾನವಾಗಿ 10ಕೋಟಿ ರೂ.(ಹೆಚ್ಚುವರಿ)ಗಳನ್ನು ನಿರೀಕ್ಷಿಸಲಾಗಿದ್ದು, ಬಿಡುಗಡೆಯಾಗುವ ಅನುದಾನಗಳನ್ನು ಸರ್ಕಾರದ ಮಾರ್ಗಸೂಚಿಗಳಂತೆ ಒಳಚರಂಡಿ, ರಸ್ತೆ, ತೆರೆದ ಚರಂಡಿ, ನೀರು ಸರಬರಾಜು, ಘನತ್ಯಾಜ್ಯ ವಿಲೇವಾರಿ, ಬೀದಿದೀಪ, ಉದ್ಯಾನವನಗಳ ಅಭಿವೃದ್ಧಿ, ಮತ್ತಿತರ ಅಭಿವೃದ್ಧಿ ಕಾರ್ಯಗಳಿಗೆ ವಿನಿಯೋಗಿಸಲಾಗುವುದು ಎಂದು ತಿಳಿಸಿದರು.

      ಪಾಲಿಕೆ ವ್ಯಾಪ್ತಿಯಲ್ಲಿನ ನೀರು ಸರಬರಾಜು ಸ್ಥಾವರ, ಬೀದಿ ದೀಪ, ಒಳಚರಂಡಿ ಶುದ್ಧೀಕರಣ ಘಟಕಗಳ ವಿದ್ಯುತ್ ಶುಲ್ಕ ಪಾವತಿಗಾಗಿ 27.03ಕೋಟಿ ರೂ.; ಸ್ವಚ್ಛ ಭಾರತ ಮಿಷನ್ ಯೋಜನೆಯಡಿ ಅಜ್ಜಗೊಂಡನಹಳ್ಳಿ ಘನತ್ಯಾಜ್ಯ ಸಂಸ್ಕರಣಾ ಘಟಕ ನಿರ್ಮಾಣಕ್ಕಾಗಿ 300ಲಕ್ಷ ರೂ.; ಜನಗಣತಿ ಕಾರ್ಯಕ್ಕಾಗಿ ಸರ್ಕಾರದಿಂದ 50ಲಕ್ಷ ರೂ.; ಅನಿರೀಕ್ಷಿತ ವೆಚ್ಚಗಳಿಗಾಗಿ 5ಲಕ್ಷ ರೂ.; ಕೇಂದ್ರ ಪುರಸ್ಕøತ ಅಮೃತ್ ಯೋಜನೆಯಡಿ 105.16ಲಕ್ಷ ರೂ.; ಪಾಲಿಕೆ ವ್ಯಾಪ್ತಿಯ ಬಡಜನರ ಸಬಲೀಕರಣಕ್ಕಾಗಿ ಡೇ-ನಲ್ಮ್ ಯೋಜನೆಯಡಿ 87.25ಲಕ್ಷ ರೂ.; 14ನೇ ಹಣಕಾಸು ಆಯೋಗದಡಿ 3ಕೋಟಿ ರೂ.ಗಳ ಕಾರ್ಯಾಧಾರಿತ ಅನುದಾನವನ್ನು ನಿರೀಕ್ಷಿಸಲಾಗಿದೆ. ಅಲ್ಲದೆ 15ನೇ ಹಣಕಾಸು ಆಯೋಗ ಅನುದಾನದಡಿ 15.97ಕೋಟಿ ರೂ.ಗಳ ಸಾಮಾನ್ಯ ಮೂಲ ಅನುದಾನವನ್ನು ನಿರೀಕ್ಷಿಸಲಾಗಿದೆ ಎಂದರು.

      ಸ್ಥಳೀಯ ಶಾಸಕರ ಮತ್ತು ಸಂಸದರ ಪ್ರದೇಶಾಭಿವೃದ್ಧಿ ಯೋಜನೆಯಡಿ 60ಲಕ್ಷ ರೂ.;

      ಪೌರಕಾರ್ಮಿಕರ ಮನೆಗಳ ನಿರ್ಮಾಣಕ್ಕಾಗಿ 155.48ಲಕ್ಷ ರೂ.ಗಳು ಈಗಾಗಲೇ ಬಿಡುಗಡೆಯಾಗಿದ್ದು, ಪ್ರಸಕ್ತ ಸಾಲಿಗೆ 144.52ಲಕ್ಷ ರೂ.ಗಳ ಅನುದಾನವನ್ನು ನಿರೀಕ್ಷಿಸಲಾಗಿದೆ. ಪಾಲಿಕೆ ವ್ಯಾಪ್ತಿಯ ರಸ್ತೆ ನಿರ್ಮಾಣ ಹಾಗೂ ಅಗಲೀಕರಣ, ಸಿಮೆಂಟ್ ಬಿಲ್ಲೆಗಳ ನೆಲಹಾಸು, ಮತ್ತಿತರ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ 40ಕೋಟಿ ರೂ., ಪಾಲಿಕೆ ನಿಧಿಯಿಂದ ಭರಿಸುವುದು ಸಾಧ್ಯವಾಗದ ಕಾರಣ ಆಡಳಿತ ಕಛೇರಿ ಕಟ್ಟಡ ನಿರ್ಮಾಣಕ್ಕಾಗಿ ಅಗತ್ಯವಿರುವ 500ಲಕ್ಷ ರೂ.ಗಳ ಅನುದಾನವನ್ನು ಸರ್ಕಾರದಿಂದ ವಿಶೇಷವಾಗಿ ನಿರೀಕ್ಷಿಸಲಾಗಿದೆ. ಬರ ಪರಿಹಾರ, ತುರ್ತು ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕಾಗಿ 1ಕೋಟಿ ರೂ., ಘನತ್ಯಾಜ್ಯ ನಿರ್ವಹಣೆಗಾಗಿ 20ಲಕ್ಷ ರೂ., ಇಂದಿರಾ ಕ್ಯಾಂಟೀನ್ ನಿರ್ವಹಣೆಗಾಗಿ 1ಕೋಟಿ ರೂ.; ನಗರದಲ್ಲಿ ವಾಸಿಸುವ ಪರಿಶಿಷ್ಟ ಜಾತಿ ಮತ್ತು ಪಂಗಡದವರಿಗೆ ವಸತಿ ಸೌಕರ್ಯ ಕಲ್ಪಿಸಲು 250 ಲಕ್ಷ ರೂ.ಗಳ ವಿಶೇಷ ಅನುದಾನವನ್ನು ಸರ್ಕಾರದಿಂದ ನಿರೀಕ್ಷೆ ಮಾಡಲಾಗಿದೆ ಎಂದು ತಿಳಿಸಿದರು.

ವೆಚ್ಚಗಳು:-

      ಪಾಲಿಕೆಯು 2020-21ನೇ ಸಾಲಿನಲ್ಲಿ ಮಾನವ ಸಂಪನ್ಮೂಲದ ವೇತನ ಮತ್ತು ಸೌಲಭ್ಯಗಳ ಪಾವತಿಗಾಗಿ 16.45ಕೋಟಿ ರೂ.; ಹೊರಗುತ್ತಿಗೆ ಮಾನವ ಸಂಪನ್ಮೂಲಕ್ಕಾಗಿ 70ಲಕ್ಷ ರೂ.; ರಾಷ್ಟ್ರೀಯ ಹಬ್ಬ, ನಾಡಹಬ್ಬ, ಕಲೆ, ಕ್ರೀಡೆ, ಮತ್ತಿತರ ಸಾಂಸ್ಕøತಿಕ ಕಾರ್ಯಕ್ರಮಗಳ ಆಚರಣೆಗಾಗಿ 30.82ಲಕ್ಷ ರೂ.; ಕಾಯಿದೆ ವೆಚ್ಚಕ್ಕಾಗಿ 20ಲಕ್ಷ ರೂ.; ಪ್ರಕೃತಿ ವಿಕೋಪದಡಿ ಗಾಳಿ, ಮಳೆ, ಬೆಂಕಿ ಆಕಸ್ಮಿಕಗಳಿಂದ ಆಸ್ತಿಪಾಸ್ತಿ ಹಾಗೂ ಪ್ರಾಣ ಹಾನಿಗಾಗಿ 25ಲಕ್ಷ ರೂ.ಗಳ ಸಹಾಯಧನ; ವಿಪತ್ತು ನಿರ್ವಹಣೆಯಲ್ಲಿ ಕಾರ್ಯ ನಿರ್ವಹಿಸುವವರಿಗಾಗಿ 60ಲಕ್ಷ ರೂ., ಇಂದಿರಾ ಕ್ಯಾಂಟೀನ್ ನಿರ್ವಹಣೆಗಾಗಿ 200ಲಕ್ಷ ರೂ.; ನಗರದ ಅಭಿವೃದ್ಧಿಯಲ್ಲಿ ಜನರ ನೇರ ಪಾಲ್ಗೊಳ್ಳುವಿಕೆಯನ್ನು ಉತ್ತೇಜಿಸಲು ವಾರ್ಡ್ ಕಮಿಟಿ ರಚನೆಗಾಗಿ 10ಲಕ್ಷ ರೂ.; ಕೌನ್ಸಿಲ್ ಶಾಖೆ ವೆಚ್ಚಕ್ಕಾಗಿ 80ಲಕ್ಷ ರೂ.; ವಾಣಿಜ್ಯ ಸಂಕೀರ್ಣಗಳ ನಿರ್ಮಾಣ ಹಾಗೂ ನಿರ್ವಹಣೆಗಾಗಿ 50ಲಕ್ಷ ರೂ.; ಜನಗಣತಿ ವೆಚ್ಚಕ್ಕಾಗಿ 50ಲಕ್ಷ ರೂ.; ರಸ್ತೆ/ಚರಂಡಿ ನಿರ್ಮಾಣ ಮತ್ತು ನಿರ್ವಹಣೆ ಹಾಗೂ ವೃತ್ತಗಳ ಅಭಿವೃಧ್ಧಿಗಾಗಿ 37.79ಕೋಟಿ ರೂ.; ಮಹಾಪೌರರ ಮತ್ತು ಉಪಮಹಾಪೌರರ ವಿವೇಚಾನುದಾನದಡಿ 3.20ಕೋಟಿ ರೂ.; ಸಾರ್ವಜನಿಕ ಬೀದಿ ದೀಪ ವ್ಯವಸ್ಥೆಗಾಗಿ 16.18ಕೋಟಿ ರೂ.ಗಳನ್ನು ಕಾಯ್ದಿರಿಸಲಾಗಿದೆ.

      ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ “ನನ್ನ ಕಸ ನನ್ನ ಜವಾಬ್ದಾರಿ” ಘೋಷಣೆಯಡಿ ನಾಗರೀಕರಲ್ಲಿ ಅರಿವು ಮೂಡಿಸಲು 10 ಲಕ್ಷ ರೂ., ಬೀಡಾಡಿ ಪ್ರಾಣಿಗಳ ಸ್ಥಳಾಂತರಕ್ಕಾಗಿ 92ಲಕ್ಷ ರೂ., ಅನಾಥ ಶವ ಸಂಸ್ಕಾರಕ್ಕಾಗಿ 5ಲಕ್ಷ ರೂ. ಮತ್ತಿತರ ವೆಚ್ಚ ಸೇರಿದಂತೆ ಒಟ್ಟು 108ಲಕ್ಷ ರೂ., ಸಮುದಾಯ ಶೌಚಾಲಯಗಳ ನಿರ್ಮಾಣ ಮತ್ತು ನಿರ್ವಹಣೆಗಾಗಿ 55ಲಕ್ಷ ರೂ.; ಸಾರ್ವಜನಿಕ ಸ್ಮಶಾನ ಅಭಿವೃದ್ಧಿಗಾಗಿ 89ಲಕ್ಷ ರೂ.; ವೈಜ್ಞಾನಿಕ ಕಸ ವಿಲೇವಾರಿಗಾಗಿ 39.37ಕೋಟಿ ರೂ.; ಕುಡಿಯುವ ನೀರು ಪೂರೈಕೆಗಾಗಿ 44.50ಕೋಟಿ ರೂ.; ಮಾದರಿ ಉದ್ಯಾನವನ ನಿರ್ಮಾಣ ಹಾಗೂ ಅಭಿವೃದ್ಧಿಪಡಿಸಲು 12ಕೋಟಿ ರೂ.ಗಳನ್ನು ಕಾಯ್ದಿರಿಸಲಾಗಿದೆ.

      ಸಾರ್ವಜನಿಕ ಮೂಲಭೂತ ಆಸ್ತಿಗಳ ನಿರ್ಮಾಣ ಹಾಗೂ ನಿರ್ವಹಣೆಯಡಿ ಪಾಲಿಕೆಯ ಕಟ್ಟಡ ನಿರ್ವಹಣೆ ಹಾಗೂ ಮತ್ತಿತರ ನಿರ್ವಹಣೆಗಾಗಿ 323.50ಲಕ್ಷ ರೂ., ನೂತನ ಆಡಳಿತ ಕಛೇರಿ ಕಟ್ಟಡ ನಿರ್ಮಾಣ ಹಾಗೂ ಮತ್ತಿತರ ಕಾಮಗಾರಿಗಳಿಗಾಗಿ 24 ಕೋಟಿ ರೂ.ಗಳನ್ನು ಕಾಯ್ದಿರಿಸಲಾಗಿರುವುದರಿಂದ ಸಾರ್ವಜನಿಕ ಮೂಲಭೂತ ಆಸ್ತಿ ನಿರ್ಮಾಣ ಮತ್ತು ನಿರ್ವಹಣೆಗಾಗಿ 27.23 ಕೋಟಿ ರೂ.ಗಳ ವೆಚ್ಚ ಭರಿಸಲು ಅವಕಾಶ ಕಲ್ಪಿಸಲಾಗಿದೆ. ವಿಶೇಷ ಪ್ಯಾಕೇಜ್ ಅಡಿ ಸ್ಮಾರ್ಟ್ ಸಿಟಿ ವತಿಯಿಂದ ಪಾಲಿಕೆ ವಿವಿಧ ವಾರ್ಡ್‍ಗಳಲ್ಲಿ ಹಂತಹಂತವಾಗಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು 90ಲಕ್ಷ ರೂ.; ಮಾರುಕಟ್ಟೆಗಳ ಅಭಿವೃದ್ಧಿಗಾಗಿ 75ಲಕ್ಷ ರೂ.ಗಳನ್ನು ಕಾಯ್ದಿರಿಸಲಾಗಿದೆ.

      ನಗರ ಬಡತನ ನಿರ್ಮೂಲನೆ ಮತ್ತು ಸಮಾಜ ಕಲ್ಯಾಣ ಕಾರ್ಯಕ್ರಮಗಳಡಿ ವಿದ್ಯಾರ್ಥಿ ವೇತನ, ಲ್ಯಾಪ್‍ಟಾಪ್ ಖರೀದಿಗೆ ಸಹಾಯಧನ, ವೈದ್ಯಕೀಯ ಚಿಕಿತ್ಸೆಗೆ ಸಹಾಯಧನ ಸೇರಿದಂತೆ ಪ.ಜಾತಿ ಮತ್ತು ಪಂಗಡದ ಅಭಿವೃದ್ಧಿಗಾಗಿ 235.53ಲಕ್ಷ ರೂ.; ಸ್ವಯಂ ಉದ್ಯೋಗ, ತರಬೇತಿ ಸೇರಿದಂತೆ ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ವೆಚ್ಚಗಳಿಗಾಗಿ 70ಲಕ್ಷ ರೂ.; ದಿವ್ಯಾಂಗ ಚೇತನರ ಕಲ್ಯಾಣಕ್ಕಾಗಿ 48.87ಲಕ್ಷ ರೂ.; ಪೌರಕಾರ್ಮಿಕರಿಗೆ ಗೃಹಭಾಗ್ಯ ಯೋಜನೆಯಡಿ ದಿಬ್ಬೂರು ಬಳಿಯ 2 ಎಕರೆ ಪ್ರದೇಶದಲ್ಲಿ ಜಿ+2 ಮಾದರಿಯ ಮನೆಗಳ ನಿರ್ಮಾಣಕ್ಕಾಗಿ 150ಲಕ್ಷ ರೂ.; ದೀನ್‍ದಯಾಳ್ ಅಂತ್ಯೋದಯ ಡೇ-ನಲ್ಮ್ ಯೋಜನೆಯಡಿ 87ಲಕ್ಷ ರೂ.; ಗಣಕೀಕೃತ ಮತ್ತು ಕಾಗದ ರಹಿತ ಕಛೇರಿಗಾಗಿ 30ಲಕ್ಷ ರೂ.; ಅಮೃತ್ ಯೋಜನೆಯಡಿ ಮಳೆ ನೀರು ಚರಂಡಿ ಹಾಗೂ ನಗರ ಸಂಚಾರ ಸುಧಾರಣೆ ಕಾಮಗಾರಿಗಳಿಗಾಗಿ 105ಲಕ್ಷ ರೂ.; ವೈಯಕ್ತಿಕ ಶೌಚಾಲಯ ನಿರ್ಮಾಣಕ್ಕಾಗಿ ಸ್ವಚ್ಛ ಭಾರತ ಅಭಿಯಾನದಡಿ 10ಲಕ್ಷ ರೂ.ಗಳ ವೆಚ್ಚ ಭರಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಅವರು ತಿಳಿಸಿದರು.

      ಪಾಲಿಕೆ ಮಂಡನೆಯಾದ ಬಳಿಕ ಮಾತನಾಡಿದ 31ನೇ ವಾರ್ಡಿನ ಪಾಲಿಕೆ ಸದಸ್ಯ ರಮೇಶ್ ಅವರು, ಕೊರೋನಾ ವೈರಸ್ ಲಾಕ್‍ಡೌನ್ ಹಿನ್ನೆಲೆಯಲ್ಲಿ ನಾಗರಿಕರು ಸಂಕಷ್ಟದಲ್ಲಿರುವುದರಿಂದ ಶೇ.15ರಷ್ಟು ಏರಿಕೆ ಮಾಡಿರುವ ಆಸ್ತಿ ತೆರಿಗೆಯನ್ನು ಪ್ರಸಕ್ತ ವರ್ಷ ಕೈಬಿಡಬೇಕೆಂದು ಮನವಿ ಮಾಡಿದಾಗ ಸಂಸದ ಜಿ.ಎಸ್. ಬಸವರಾಜು ಅವರು ಸರ್ಕಾರದ ನಿರ್ದೇಶನದಂತೆ ಆಸ್ತಿ ತೆರಿಗೆಯನ್ನು ವಿಧಿಸಲಾಗುತ್ತಿದೆ. ಲಾಕ್‍ಡೌನ್ ಸಂದರ್ಭದಲ್ಲಿ ಆಸ್ತಿ ತೆರಿಗೆ ಪಾವತಿಗೆ ತೊಂದರೆಯಾಗದಂತೆ ನಾಗರಿಕರ ಹಿತದೃಷ್ಟಿಯಿಂದ ಪ್ರಸಕ್ತ ವರ್ಷ ಶೇ.15ರಷ್ಟು ವಿಧಿಸಲಾಗುವ ಆಸ್ತಿ ತೆರಿಗೆಯನ್ನು ಕ್ರಮ ಕೈಗೊಳ್ಳಬೇಕೆಂದು ಪಾಲಿಕೆ ಆಯುಕ್ತ ಭೂಬಾಲನ್ ಅವರಿಗೆ ಸೂಚನೆ ನೀಡಿದರಲ್ಲದೆ, ಪಾಲಿಕೆ ವ್ಯಾಪ್ತಿಯ ವಸತಿ ರಹಿತರಿಗೆ ವಸತಿ ಸೌಲಭ್ಯ ಕಲ್ಪಿಸಲು ಸ್ಥಳವನ್ನು ಗುರುತಿಸಿದಲ್ಲಿ ವಸತಿ ನಿರ್ಮಾಣಕ್ಕಾಗಿ ಅಗತ್ಯವಿರುವ ಅನುದಾನವನ್ನು ಕೇಂದ್ರದಿಂದ ತರುವ ಪ್ರಯತ್ನ ಮಾಡುತ್ತೇವೆಂದು ಭರವಸೆ ನೀಡಿದರು.

      ಪಾಲಿಕೆಯ ಮೇಯರ್ ಫರಿದಾ ಬೇಗಂ ಅವರ ಅಧ್ಯಕ್ಷತೆಯಲ್ಲಿ ಜರುಗಿದ ಈ ಆಯುವ್ಯಯ ಸಭೆಯಲ್ಲಿ ಉಪಮಹಾಪೌರರಾದ ಶಶಿಕಲಾ ಗಂಗಹನುಮಯ್ಯ, ವಿವಿಧ ಸ್ಥಾಯಿ ಸಮಿತಿಗಳ ಅಧ್ಯಕ್ಷರು, ಸದಸ್ಯರು, ಪಾಲಿಕೆ ಎಲ್ಲಾ ವಾರ್ಡ್‍ಗಳ ಸದಸ್ಯರು ಮತ್ತು ಅಧಿಕಾರಿಗಳು ಹಾಜರಿದ್ದರು.

(Visited 33 times, 1 visits today)
Previous Articleಲಕ್ಷ ಜನರಿಗೆ ತಲುಪಿದ ಯುವ ಕಾಂಗ್ರೆಸ್ ದಾಸೋಹ
Next Article ಕೊರೋನಾ ವಾರಿಯರ್ಸ್‍ನ್ನು ನಾವೆಲ್ಲರೂ ಪೂಜಿಸಬೇಕು : ಡಿಸಿಎಂ
News Desk Benkiyabale

Related Posts

ಸರ್ಕಾರವೇ ನಿಡಗಲ್ಲು ಉತ್ಸವ ಆಚರಿಸಲಿ: ಶಾಂತಲಾ ರಾಜಣ್ಣ ಒತ್ತಾಯ

September 09, 2026 5:41 pm news

ತುಮಕೂರಿನಲ್ಲಿ ಕನ್ನಾಳೆ ವಜಾಕ್ಕೆ ಆಗ್ರಹಿಸಿ ಎಬಿವಿಪಿ ರಸ್ತೆ ತಡೆದು ಪ್ರತಿಭಟನೆ

September 09, 2026 5:39 pm news

ಕಾಮಗಾರಿಗಳ ಅಕ್ರಮ ಖಂಡಿಸಿ ಕಾಂಗ್ರೆಸ್ ಮುಖಂಡರ ಸತ್ಯಾಗ್ರಹ

September 09, 2026 5:37 pm news
ತಾಜಾ ಸುದ್ಧಿಗಳು
news

ಸರ್ಕಾರವೇ ನಿಡಗಲ್ಲು ಉತ್ಸವ ಆಚರಿಸಲಿ: ಶಾಂತಲಾ ರಾಜಣ್ಣ ಒತ್ತಾಯ

September 09, 2026 5:41 pm
news

ತುಮಕೂರಿನಲ್ಲಿ ಕನ್ನಾಳೆ ವಜಾಕ್ಕೆ ಆಗ್ರಹಿಸಿ ಎಬಿವಿಪಿ ರಸ್ತೆ ತಡೆದು ಪ್ರತಿಭಟನೆ

September 09, 2026 5:39 pm
news

ಕಾಮಗಾರಿಗಳ ಅಕ್ರಮ ಖಂಡಿಸಿ ಕಾಂಗ್ರೆಸ್ ಮುಖಂಡರ ಸತ್ಯಾಗ್ರಹ

September 09, 2026 5:37 pm
news

ಪಾವಗಡ ತಾಲ್ಲೂಕಿನ ಹಸಿರೀಕರಣಕ್ಕಾಗಿ ಕೆರೆಗಳಿಗೆ ನೀರು

September 09, 2026 5:36 pm
news

ರೈತರ ಜಮೀನಿಗೆ ಕೈಹಾಕಿದರೆ, ಕಂಬಕ್ಕೆ ಕಟ್ಟಿಹಾಕಿ: ಪ್ರತಿಭಟನೆ

September 09, 2026 5:34 pm
news

ಸಾರ್ವಜನಿಕ ಹಬ್ಬಗಳಲ್ಲಿ ಡಿಜೆ ಸಂಪೂರ್ಣ ನಿಷೇಧ: ಸಿಐ ಸುರೇಶ್ ಸೂಚನೆ

September 08, 2026 5:26 pm
Our Youtube Channel
Our Picks

ಸರ್ಕಾರವೇ ನಿಡಗಲ್ಲು ಉತ್ಸವ ಆಚರಿಸಲಿ: ಶಾಂತಲಾ ರಾಜಣ್ಣ ಒತ್ತಾಯ

September 09, 2026 5:41 pm

ತುಮಕೂರಿನಲ್ಲಿ ಕನ್ನಾಳೆ ವಜಾಕ್ಕೆ ಆಗ್ರಹಿಸಿ ಎಬಿವಿಪಿ ರಸ್ತೆ ತಡೆದು ಪ್ರತಿಭಟನೆ

September 09, 2026 5:39 pm

ಕಾಮಗಾರಿಗಳ ಅಕ್ರಮ ಖಂಡಿಸಿ ಕಾಂಗ್ರೆಸ್ ಮುಖಂಡರ ಸತ್ಯಾಗ್ರಹ

September 09, 2026 5:37 pm

ಪಾವಗಡ ತಾಲ್ಲೂಕಿನ ಹಸಿರೀಕರಣಕ್ಕಾಗಿ ಕೆರೆಗಳಿಗೆ ನೀರು

September 09, 2026 5:36 pm

ರೈತರ ಜಮೀನಿಗೆ ಕೈಹಾಕಿದರೆ, ಕಂಬಕ್ಕೆ ಕಟ್ಟಿಹಾಕಿ: ಪ್ರತಿಭಟನೆ

September 09, 2026 5:34 pm
News Tags
Accident Ambedkar Araga jnanendra BJP Chikkanayakanahalli Congress crime DC dcm dr.g.parameshwar gs basavaraju Gubbi Jds kannada news karnataka kodigenahalli Koratagere kunigal local news madhugiri Mla Mla jyothiganesh mlc r.rajendra pavagada Police Protest SIR tumakur tumkur Tumkur dc yspatil Tumkur mahanagara palike tumkur news turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಗೋಳು ಕೇಳುವರ‍್ಯಾರು

June 15, 2026 5:20 pm

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm
Don't Miss
news

ಸರ್ಕಾರವೇ ನಿಡಗಲ್ಲು ಉತ್ಸವ ಆಚರಿಸಲಿ: ಶಾಂತಲಾ ರಾಜಣ್ಣ ಒತ್ತಾಯ

By News Desk BenkiyabaleSeptember 09, 2026 5:41 pm

ಪಾವಗಡ: ಮಹರ್ಷಿ ವಾಲ್ಮೀಕಿ ಆಶ್ರಮ, ವಾಲ್ಮೀಕಿ ಜಾಗೃತಿ ವೇದಿಕೆ, ನಿಡಗಲ್ಲು ಗ್ರಾಮಸ್ಥರು ಮತ್ತು ದುರ್ಗದ ಅಭಿಮಾನಿಗಳ ವತಿಯಿಂದ ೧೦ನೇ ವರ್ಷದ…

ತುಮಕೂರಿನಲ್ಲಿ ಕನ್ನಾಳೆ ವಜಾಕ್ಕೆ ಆಗ್ರಹಿಸಿ ಎಬಿವಿಪಿ ರಸ್ತೆ ತಡೆದು ಪ್ರತಿಭಟನೆ

September 09, 2026 5:39 pm

ಕಾಮಗಾರಿಗಳ ಅಕ್ರಮ ಖಂಡಿಸಿ ಕಾಂಗ್ರೆಸ್ ಮುಖಂಡರ ಸತ್ಯಾಗ್ರಹ

September 09, 2026 5:37 pm

ಪಾವಗಡ ತಾಲ್ಲೂಕಿನ ಹಸಿರೀಕರಣಕ್ಕಾಗಿ ಕೆರೆಗಳಿಗೆ ನೀರು

September 09, 2026 5:36 pm
News by Date
September 2026
M T W T F S S
 123456
78910111213
14151617181920
21222324252627
282930  
« Aug    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.