ತುಮಕೂರು:


ವರದಕ್ಷಿಣೆ ಕಿರುಕುಳ, ಕೌಟುಂಬಿಕ ದೌರ್ಜನ್ಯ, ಅತ್ಯಾಚಾರ ಹಾಗೂ ಲೈಂಗಿಕ ಕಿರುಕುಳ ಸೇರಿದಂತೆ ವಿವಿಧ ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ಸಮಲೋಚನೆ ಮತ್ತು ಅಗತ್ಯ ಕಾನೂನು ನೆರವನ್ನು ಒದಗಿಸಲು ಸಾಂತ್ವನ ಕೇಂದ್ರಗಳನ್ನು ಸ್ವಯಂ ಸೇವಾ ಸಂಸ್ಥೆಗಳ ಮೂಲಕ ಅನುμÁ್ಠನಗೊಳಿಸಲಾಗುತ್ತಿದ್ದು, ದಿನದ 24 ಗಂಟೆಗಳ ಕಾಲ ಸಂಕಷ್ಟಕ್ಕೊಳಗಾದ ಮಹಿಳೆಯರಿಗೆ ನೆರವನ್ನು ಒದಗಿಸಲಾಗುತ್ತಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ತಿಳಿಸಿದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣಾಭಿವೃದ್ಧಿ ಇಲಾಖೆಯ ಜಿಲ್ಲಾ ಮಟ್ಟದ ಸಮನ್ವಯ ಸಮಿತಿಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು, ಗ್ರಾಮೀಣ ಪ್ರದೇಶಗಳಲ್ಲಿ ಗ್ರಾಮ ಪಂಚಾಯತಿಗಳು ಮಕ್ಕಳ ಗ್ರಾಮ ಸಭೆಯನ್ನು ನಡೆಸಬೇಕು. ಗಮನಾರ್ಹ ಸಮಸ್ಯೆಗಳಿದ್ದಲ್ಲಿ ಅವುಗಳನ್ನು ಬಗೆಹರಿಸಲು ಪಿಡಿಓ ಮತ್ತು ಇತರೆ ಅಧಿಕಾರಿಗಳು ಕ್ರಮವಹಿಸಬೇಕು ಎಂದರು.
ಮಹಿಳೆಯರು ಆರ್ಥಿಕವಾಗಿ ಮುಂದುವರೆಯಲು ಬೇಕಾದ ಉದ್ಯಮ ಶೀಲತೆಯ ಬಗ್ಗೆ ಅರ್ಹರನ್ನು ಗುರುತಿಸಿ ಅವರಿಗೆ ತರಬೇತಿಯನ್ನು ನೀಡಿ, ಆರ್ಥಿಕ ಸದೃಢರನ್ನಾಗಿ ಮಾಡಬೇಕು ಎಂದು ತಿಳಿಸಿದರು. ರೈತ ಮಹಿಳೆಯರು, ಹೈನುಗಾರಿಕೆ, ಕುರಿ- ಕೋಳಿ ಸಾಕಾಣಿಕೆ ಮುಂತಾದ ಉಪಕ್ರಮಗಳನ್ನು ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ತಿಳಿಸಿದರು.
ಸಾಂತ್ವನ ಯೋಜನೆಯಡಿ 2021-22ರ ಸಾಲಿನಲ್ಲಿ ಬಿಡುಗಡೆಯಾದ ಅನುದಾನದ ಮಾಹಿತಿ, ಯೋಜನೆಯ ಕೌಟುಂಬಿಕ ಕಲಹದಡಿ, ಏಪ್ರಿಲ್2022 ರಿಂದ ಜೂನ್ 2022ರ ಅಂತ್ಯಕ್ಕೆ ದಾಖಲಾದ, ಇತ್ಯರ್ಥಗೊಂಡ ಮತ್ತು ಬಾಕಿ ಇರುವ ಪ್ರಕರಣಗಳ ವಿವರಗಳನ್ನು ನೀಡಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಶ್ರೀಧರ್ ಅವರು, ಜಿಲ್ಲೆಯಲ್ಲಿ 10 ಸಾಂತ್ವನ ಕೇಂದ್ರಗಳು ಕಾರ್ಯನಿರ್ವಹಿಸುತ್ತಿವೆ. ಒಟ್ಟು 454 ಪ್ರಕರಣಗಳು ದಾಖಲಾಗಿದ್ದು, ಆ ಪೈಕಿ 436 ಪ್ರಕರಣಗಳು ಇತ್ಯರ್ಥಗೊಂಡು 30 ಪ್ರಕರಣಗಳು ಬಾಕಿ ಇರುತ್ತವೆ ಎಂದು ಮಾಹಿತಿ ನೀಡಿದರು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ನ್ಯಾ// ನೂರುನ್ನಿಸಾ ಅವರು ಮಾತನಾಡಿ, ಸಾಂತ್ವನ ಯೋಜನೆಯಡಿ ದಾಖಲಾದ ಪ್ರಕರಣಗಳನ್ನು ಆಪ್ತ ಸಮಾಲೋಚನೆ ಮಾಡುವ ಮೂಲಕ ಸಂತ್ರಸ್ತರಿಗೆ ಅಗತ್ಯ ತಿಳುವಳಿಕೆಯನ್ನು ನೀಡಬೇಕು.
ಸರಿಯಾದ ಮಾರ್ಗದರ್ಶನದೊಂದಿಗೆ ಪ್ರಕರಣಗಳನ್ನು ತಳಮಟ್ಟದಲ್ಲಿಯೇ ಇತ್ಯರ್ಥಗೊಳಿಸಬೇಕು. ಸಂತ್ರಸ್ತರ ಸಾಮಾಜಿಕ ಪರಿಸ್ಥಿತಿಯನ್ನು ಅವಲೋಕಿಸಿ ಅವರ ಬದುಕು ಹಸನಾಗುವಂತೆ ಸಾಂತ್ವನ ಕೇಂದ್ರಗಳು ಕೆಲಸ ನಿರ್ವಹಿಸಬೇಕು ಎಂದು ತಿಳಿಸಿದರು.
ಚಿಕ್ಕ ಮಕ್ಕಳು ಭಿಕ್ಷಾಟನೆಯಲ್ಲಿ ತೊಡಗಿರುವುದು ಕಂಡು ಬರುತ್ತಿದ್ದು ಅಧಿಕಾರಿಗಳು ಅತ್ತ ಗಮನಹರಿಸಿ ಸೂಕ್ತ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕೆಂದು ತಿಳಿಸಿದರು.
ಮಹಿಳೆಯರ ಮತ್ತು ಅನೈತಿಕ ಸಾಗಾಣಿಕೆಯನ್ನು ತಡೆಗಟ್ಟಲು ಮತ್ತು ಸಾಗಾಣಿಕೆಗೆ ಒಳಗಾದ ಮಹಿಳೆಯರ ಮತ್ತು ಮಕ್ಕಳ ರಕ್ಷಣೆ ಹಾಗೂ ಪುನರ್ವಸತಿ ಕಲ್ಪಿಸುವ ಸಲುವಾಗಿ ಕಾವಲು ಸಮಿತಿಗಳು ಮತ್ತು ಅವುಗಳು ನಡೆಸಿದ ಜಾಗೃತಿ ಸಭೆಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.
ಸ್ತ್ರೀಶಕ್ತಿ ಯೋಜನೆಯಡಿ ಜಿಲ್ಲೆಯಲ್ಲಿ ರಚಿತವಾಗಿರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಅಲ್ಪಸಂಖ್ಯಾತರ ಸ್ವ-ಸಹಾಯ ಗುಂಪುಗಳು ಮತ್ತು ಅವುಗಳಿಗೆ ಒದಗಿಸಿರುವ ಅನುದಾನ, ಪ್ರೋತ್ಸಾಹಧನ ಸೇರಿದಂತೆ ಅನೇಕ ವಿಷಯಗಳ ಕುರಿತು ವಿವರ ಪಡೆದು, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಅಧಿಕಾರಿಗಳೊಂದಿಗೆ ಚರ್ಚಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಅಥಿಕ್ ಪಾμÁ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕಿ ಪ್ರೇಮಾ, ಡಿವೈಎಸ್ಪಿ ಅಧಿಕಾರಿ ಶ್ರೀನಿವಾಸ್, ಪಶುಸಂಗೋಪನೆ ಇಲಾಖೆ ಉಪನಿರ್ದೇಶಕ ಜಯಣ್ಣ, ಜಿಲ್ಲೆಯ ಎಲ್ಲಾ ಸಿಡಿಪಿಓ ಅಧಿಕಾರಿಗಳು, ಸಾಂತ್ವನ ಕೇಂದ್ರದ ಅಧಿಕಾರಿಗಳು ಸೇರಿದಂತೆ ಇನ್ನಿತರರು ಹಾಜರಿದ್ದರು.

(Visited 2 times, 1 visits today)