ತುಮಕೂರು :

      ಜಿಲ್ಲೆಯಲ್ಲಿ ಇಂದು 119 ಹೊಸ ಕೋವಿಡ್-19 ಪ್ರಕರಣ ದೃಢಪಟ್ಟಿದ್ದು, ಒಟ್ಟು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 1110 ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ನಾಗೇಂದ್ರಪ್ಪ ತಿಳಿಸಿದ್ದಾರೆ.

      ಜಿಲ್ಲೆಯಲ್ಲಿ ಇಂದು ತುಮಕೂರು-49, ಮಧುಗಿರಿ-9, ಗುಬ್ಬಿ-01, ತಿಪಟೂರಿನಲ್ಲಿ -09 , ಕುಣಿಗಲ್ -08, ತುರುವೇಕೆರೆ-05, ಚಿಕ್ಕನಾಯಕನಹಳ್ಳಿ-13, ಕೊರಟಗೆರೆ-08, ಪಾವಗಡ-13, ಶಿರಾ -03 ಸೇರಿದಂತೆ ಒಟ್ಟು 119 ಜನರಲ್ಲಿ ಕೋವಿಡ್-19 ಸೋಂಕಿರುವುದು ದೃಢಪಟ್ಟಿದೆ.

     ಜಿಲ್ಲಾಸ್ಪತ್ರೆಯಿಂದ 43 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ 595 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

     ಜಿಲ್ಲೆಯಲ್ಲಿ ಒಟ್ಟು 473 ಸಕ್ರಿಯ ಪ್ರಕರಣಗಳಿದ್ದು, ಈವರೆಗೆ 42 ಮಂದಿ ಸಾವನ್ನಪ್ಪಿದ್ದು, ಶುಕ್ರವಾರ-04 ಮಂದಿ ಸಾವನ್ನಪ್ಪಿದ್ದಾರೆ ಎಂದು ಅವರು ತಿಳಿಸಿದ್ದಾರೆ. 

(Visited 7 times, 1 visits today)