ತುಮಕೂರು:

      ಜಿಲ್ಲೆಯಲ್ಲಿಂದು 127 ಹೊಸ ಕೋವಿಡ್-19 ಪ್ರಕರಣ ದೃಢಪಟ್ಟಿದ್ದು, ಒಟ್ಟು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 1473ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ನಾಗೇಂದ್ರಪ್ಪ ತಿಳಿಸಿದ್ದಾರೆ.

      ಜಿಲ್ಲೆಯಲ್ಲಿ ಇಂದು ತುಮಕೂರು-60, ಶಿರಾ-6, ಪಾವಗಡ-10, ಮಧುಗಿರಿ ಹಾಗೂ ಗುಬ್ಬಿ ತಾಲೂಕಿನಲ್ಲಿ ತಲಾ 7, ಕುಣಿಗಲ್-13, ತಿಪಟೂರು-8, ಚಿಕ್ಕನಾಯಕನಹಳ್ಳಿ-1, ತುರುವೇಕೆರೆ-9, ಕೊರಟಗೆರೆ-6 ಸೇರಿದಂತೆ ಒಟ್ಟು 127 ಮಂದಿಯಲ್ಲಿ ಕೋವಿಡ್-19 ಸೋಂಕಿರುವುದು ದೃಢಪಟ್ಟಿದೆ.

      ಇಂದು ಜಿಲ್ಲಾಸ್ಪತ್ರೆಯಿಂದ 29 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ 665 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 761 ಸಕ್ರಿಯ ಪ್ರಕರಣಗಳಿದ್ದು, ಇಂದು ನಾಲ್ಕು ಮಂದಿ ಮೃತಪಟ್ಟಿದ್ದಾರೆ. ಈವರೆಗೆ 47 ಮಂದಿ ಕೋವಿಡ್-19 ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

(Visited 19 times, 1 visits today)