ತುಮಕೂರು :

     ಜಿಲ್ಲೆಯಲ್ಲಿ 194 ಹೊಸ ಕೋವಿಡ್-19 ಪ್ರಕರಣ ದೃಢಪಟ್ಟಿದ್ದು, ಒಟ್ಟು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 4751 ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ನಾಗೇಂದ್ರಪ್ಪ ತಿಳಿಸಿದ್ದಾರೆ.

      ಜಿಲ್ಲೆಯಲ್ಲಿ ತುಮಕೂರು ತಾಲ್ಲೂಕಿನಲ್ಲಿ 91, ಪಾವಗಡ-07, ಕುಣಿಗಲ್-15, ಮಧುಗಿರಿ-06, ತುರುವೇಕೆರೆ-22, ಶಿರಾ-07, ತಿಪಟೂರು-13, ಗುಬ್ಬಿ-06, ಚಿಕ್ಕನಾಯಕನಹಳ್ಳಿ-20 ಮಂದಿ ಸೇರಿ ತಾಲೂಕಿನಲ್ಲಿ ಒಟ್ಟು 194 ಜನರಲ್ಲಿ ಕೋವಿಡ್-19 ಸೋಂಕಿರುವುದು ದೃಢಪಟ್ಟಿದೆ. 

      ಜಿಲ್ಲಾಸ್ಪತ್ರೆಯಿಂದ 99 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ 3452 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 1151 ಸಕ್ರಿಯ ಪ್ರಕರಣಗಳಿದ್ದು, ಈವರೆಗೆ 147 ಸಾವನ್ನಪ್ಪಿದ್ದಾರೆ ಎಂದು ಅವರು ತಿಳಿಸಿದ್ದಾರೆ.

 

(Visited 21 times, 1 visits today)