ತುಮಕೂರು :

      ಜಿಲ್ಲೆಯಲ್ಲಿ 266 ಹೊಸ ಕೋವಿಡ್-19 ಪ್ರಕರಣ ದೃಢಪಟ್ಟಿದ್ದು, ಒಟ್ಟು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 5017 ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ನಾಗೇಂದ್ರಪ್ಪ ತಿಳಿಸಿದ್ದಾರೆ.

      ಜಿಲ್ಲೆಯಲ್ಲಿ ತುಮಕೂರು ತಾಲ್ಲೂಕಿನಲ್ಲಿ 110, ಪಾವಗಡ-16, ಕುಣಿಗಲ್-5, ಮಧುಗಿರಿ-09, ತುರುವೇಕೆರೆ-11, ಶಿರಾ-16, ತಿಪಟೂರು-29, ಗುಬ್ಬಿ-24, ಚಿಕ್ಕನಾಯಕನಹಳ್ಳಿ-32 ಮಂದಿ ಸೇರಿ ತಾಲೂಕಿನಲ್ಲಿ ಒಟ್ಟು 266 ಜನರಲ್ಲಿ ಕೋವಿಡ್-19 ಸೋಂಕಿರುವುದು ದೃಢಪಟ್ಟಿದೆ. 

      ಜಿಲ್ಲಾಸ್ಪತ್ರೆಯಿಂದ 174 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ 3626 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 1240 ಸಕ್ರಿಯ ಪ್ರಕರಣಗಳಿದ್ದು, ಈವರೆಗೆ 151 ಸಾವನ್ನಪ್ಪಿದ್ದಾರೆ ಎಂದು ಅವರು ತಿಳಿಸಿದ್ದಾರೆ.

 

(Visited 32 times, 1 visits today)