ತುಮಕೂರು : 292 ಮಂದಿಗೆ ಕೋವಿಡ್-19 ಸೋಂಕು ದೃಢ!!

ತುಮಕೂರು :

    ಜಿಲ್ಲೆಯಲ್ಲಿ 292 ಹೊಸ ಕೋವಿಡ್-19 ಪ್ರಕರಣ ದೃಢಪಟ್ಟಿದ್ದು, ಒಟ್ಟು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 6440 ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ನಾಗೇಂದ್ರಪ್ಪ ತಿಳಿಸಿದ್ದಾರೆ.

      ಜಿಲ್ಲೆಯಲ್ಲಿ ತುಮಕೂರು ತಾಲ್ಲೂಕಿನಲ್ಲಿ 124, ಪಾವಗಡ-37, ಕುಣಿಗಲ್-07, ಮಧುಗಿರಿ-10, ಕೊರಗಟಗೆರೆ-07, ತುರುವೇಕೆರೆ-12, ಶಿರಾ-32, ತಿಪಟೂರು-33, ಗುಬ್ಬಿ-10, ಚಿಕ್ಕನಾಯಕನಹಳ್ಳಿ-10 ಮಂದಿ ಸೇರಿ ತಾಲೂಕಿನಲ್ಲಿ ಒಟ್ಟು 292 ಜನರಲ್ಲಿ ಕೋವಿಡ್-19 ಸೋಂಕಿರುವುದು ದೃಢಪಟ್ಟಿದೆ. 

      ಜಿಲ್ಲಾಸ್ಪತ್ರೆಯಿಂದ 140 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ 4515 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 1752 ಸಕ್ರಿಯ ಪ್ರಕರಣಗಳಿದ್ದು, ಈವರೆಗೆ 165 ಮಂದಿ ಸಾವನ್ನಪ್ಪಿದ್ದಾರೆ ಎಂದು ಅವರು ತಿಳಿಸಿದ್ದಾರೆ.

(Visited 7 times, 1 visits today)

Related posts

Leave a Comment