ತುಮಕೂರು : ಇಂದು 15 ಮಂದಿಗೆ ಕೋವಿಡ್-19 ಸೋಂಕು ದೃಢ!!

 ತುಮಕೂರು :

      ಜಿಲ್ಲೆಯಲ್ಲಿಂದು 15 ಹೊಸ ಕೋವಿಡ್-19 ಪ್ರಕರಣ ದೃಢಪಟ್ಟಿದ್ದು, ಒಟ್ಟು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 612ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ನಾಗೇಂದ್ರಪ್ಪ ತಿಳಿಸಿದ್ದಾರೆ.

      ಜಿಲ್ಲೆಯಲ್ಲಿ ಇಂದು ತುಮಕೂರು ತಾಲ್ಲೂಕಿನಲ್ಲಿ 12 ಮಂದಿ ಹಾಗೂ ತಿಪಟೂರು, ಶಿರಾ, ಗುಬ್ಬಿ ತಲಾ ಒಬ್ಬರು ಸೇರಿದಂತೆ ಒಟ್ಟು 15 ಜನರಲ್ಲಿ ಕೋವಿಡ್-19 ಸೋಂಕಿರುವುದು ದೃಢಪಟ್ಟಿದೆ. ಅಲ್ಲದೆ ಓರ್ವ ವ್ಯಕ್ತಿ ಸೋಂಕಿನಿಂದ ಮೃತಪಟ್ಟಿದ್ದಾರೆ.

      ಇಂದು ಜಿಲ್ಲಾಸ್ಪತ್ರೆಯಿಂದ 5 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ 222 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 372 ಸಕ್ರಿಯ ಪ್ರಕರಣಗಳಿದ್ದು, ಈವರೆಗೆ 18 ಮಂದಿ ಕೋವಿಡ್-19 ಸೋಂಕಿತರು ಸಾವನ್ನಪ್ಪಿದ್ದಾರೆ ಎಂದು ಅವರು ತಿಳಿಸಿದ್ದಾರೆ.

(Visited 9 times, 1 visits today)

Related posts

Leave a Comment