ತುಮಕೂರು ಜಿಲ್ಲೆಯಲ್ಲಿ 1268 ಮಾದರಿ ನೆಗೆಟಿವ್!!

ತುಮಕೂರು :

      ಕೊವೀಡ್-19 ಸೋಂಕು ತಡೆಗಟ್ಟುವ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲೆಗೆ ಬಂದಿರುವ 480 ಮಂದಿಯನ್ನು ತೀವ್ರ ನಿಗಾವಣೆಯಲ್ಲಿಡಲಾಗಿದ್ದು, ಈ ಪೈಕಿ ಹೋಂ ಕ್ವಾರೆಂಟೈನ್‍ನಲ್ಲಿ ಯಾರೂ ಇರುವುದಿಲ್ಲ. ಒಟ್ಟು 501 ಮಂದಿಯನ್ನು ಐಸೋಲೇಷನ್‍ನಲ್ಲಿ ಇಡಲಾಗಿದ್ದು, ಆಸ್ಪತ್ರೆಯ ಐಸೋಲೇಷನ್‍ನಲ್ಲಿರುವವರು 101 ಮಂದಿ, 370 ಜನರ 28 ದಿನಗಳ ಹೋಂ ಕ್ವಾರೆಂಟೈನ್ ಅವಧಿ ಪೂರ್ಣಗೊಂಡಿದೆ. ಈವರೆವಿಗೂ 1621 ಜನರ ಗಂಟಲುಸ್ರಾವ ಮಾದರಿಯನ್ನು ಸಂಗ್ರಹಿಸಿ ತಪಾಸಣೆಗೊಳಪಡಿಸಿದ್ದು, ಆ ಪೈಕಿ 1268 ಮಾದರಿಗಳು ನೆಗೆಟಿವ್ ಎಂದು ದೃಢಪಟ್ಟಿದೆ.

      3 ಪ್ರಕರಣಗಳು ಪಾಸಿಟಿವ್ ಬಂದಿದ್ದು, ಒಬ್ಬರು ಮೃತಪಟ್ಟಿರುತ್ತಾರೆ. ಒಬ್ಬರು ಗುಣಮುಖ ಹಾಗೂ ಒಬ್ಬರಿಗೆ ಸೋಂಕು ದೃಢಪಟ್ಟಿದೆ. 13 ಮಾದರಿಗಳು ತಿರಸ್ಕøತಗೊಂಡಿವೆ ಹಾಗೂ 337 ತಪಾಸಣೆಯ ವರದಿಯನ್ನು ನಿರೀಕ್ಷಿಸಲಾಗಿದೆ ಎಂದು ಡಿಹೆಚ್‍ಓ ಡಾ: ಚಂದ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

(Visited 12 times, 1 visits today)

Related posts

Leave a Comment