ತುಮಕೂರು : ಜಿಲ್ಲೆಯ ಕೊರೊನಾ ಸೋಂಕಿತ ಗುಣಮುಖ!!

ತುಮಕೂರು :

      ಕೋವಿಡ್-19ಕ್ಕೆ ಸಂಬಂಧಪಟ್ಟಂತೆ ಇಂದಿರಾ ಗಾಂಧಿ ಆಸ್ಪತ್ರೆಗೆ ದಾಖಲಾಗಿದ್ದ ಪಿ-84 ವ್ಯಕ್ತಿಯು ಸಂಪೂರ್ಣ ಗುಣಮುಖರಾಗಿ ಇಂದು ಜಿಲ್ಲೆಗೆ ವಾಪಸ್ ಬಂದಿದ್ದು, ಅವರನ್ನು ಮನೆಯಲ್ಲಿಯೇ ಪ್ರತ್ಯೇಕವಾಗಿ ಇರಿಸಲು ತಿಳಿಸಲಾಗಿದೆ.

     ಶಿರಾಗೆ ಭೇಟಿ ನೀಡಿ ಅವರ ಸಂಬಂಧಿಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಮುಂದಿನ 14 ದಿನಗಳವರೆಗೂ ಹೋಂ ಕ್ವಾರೆಂಟೈನ್ ಮಾಡಲಾಗಿದ್ದು, 2 ಬಾರಿಯೂ ಸಹ ಅವರ ಸಂಬಂಧಿಕರದ್ದು ನೆಗೆಟಿವ್ ಬಂದಿದ್ದು, ಅವರನ್ನು ಮನೆಗೆ ಕಳುಹಿಸಲಾಗುತ್ತಿದೆ. ಈ ಹಿಂದೆ ತಬ್ಲಿಘಿ ಜಮಾತ್‍ಗೆ ತೆರಳಿರುವವರ ಮಾದರಿಗಳನ್ನು ಕಳುಹಿಸಲಾಗಿದೆ.

      ಅಲ್ಲದೇ ಮೇ 3ರವರೆಗೆ ಲಾಕ್‍ಡೌನ್ ವಿಸ್ತರಿಸಿದ್ದು, ಸಾರ್ವಜನಿಕರು ಇದನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಅವರು ಮನವಿ ಮಾಡಿದ್ದಾರೆ.

(Visited 7 times, 1 visits today)

Related posts