ತುಮಕೂರು :
ತುಮಕೂರು ಗ್ರಾಮಾಂತರ ವಿಧಾನ ಸಭಾ ಕ್ಷೇತ್ರದ ಹೆಬ್ಬೂರು ಹೋಬಳಿಯ ಬಳ್ಳಗೆರೆ ಗ್ರಾಮ ಪಂಚಾಯತಿ ಮಾಯಣ್ಣನ ಪಾಳ್ಯದಲ್ಲಿ ಕರೋನ ಸೋಂಕು ದೃಢ ಪಟ್ಟಿರುವ ಹಿನ್ನೆಲೆಯಲ್ಲಿ ವಿಷಯ ತಿಳಿದ ತಕ್ಷಣ ಆ ಗ್ರಾಮಕ್ಕೆ ಮಾಜಿ ಶಾಸಕರಾದ ಬಿ.ಸುರೇಶ್ ಗೌಡ ರವರು ಭೇಟಿ ನೀಡಿಸರ್ಕಾರ ಯಾವ ಯಾವ ಮುಂಜಾಗ್ರತ ಕ್ರಮಗಳನ್ನು ಕೈಗೊಂಡಿದೆ ಎಂದು ಪರಿಶೀಲಿಸಿದರು.
ಎಂಬುದರ ಬಗ್ಗೆ ತಾಲ್ಲೂಕು ದಂಡಾಧಿಕಾರಿ, ತಾಲ್ಲೂಕು ಪಂಚಾಯತಿ EO, ತಾಲ್ಲೂಕು ಆರೋಗ್ಯಅಧಿಕಾರಿ, ಪೊಲೀಸ್ ವೃತ್ತ ನಿರೀಕ್ಷಕರು, ಪಂಚಾಯತಿ ಅಭಿವೃದ್ಧಿ ಅಧಿಕಾರಿ, ನರ್ಸ್ ಹಾಗೂ ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರೊಂದಿಗೆ ಪರಿಶೀಲನೆ ನೆಡಸಿ, ಗ್ರಾಮಸ್ಥರಿಗೆ ಕೋವಿಡ್ 19 ಬಗ್ಗೆ ತುಂಬಾ ಎಚ್ಚರಿಕೆಯಿಂದ ಇರುವುದರೊಂದಿಗೆ ಜೀವ ಹಾಗೂ ಜೀವನವನ್ನು ಕಾಪಾಡಿಕೊಳ್ಳುವಂತೆ ಹಾಗೂ ಏನೇ ಆದರೂ ದೃತಿಗೆಡಬೇಡಿ, ನಿಮ್ಮೊಂದಿಗೆ ನಾನು ಹಾಗೂ ನಮ್ಮ ಸರ್ಕಾರ ಸದಾ ನಿಮ್ಮ ಜೊತೆ ಇದೆ ಎಂದು ಜಾಗೃತಿ ಮೂಡಿಸಲಾಯಿತು.
(Visited 757 times, 1 visits today)