ತುಮಕೂರು:

       ಕೊರೊನಾ ವೈರಸ್ ಕೋವಿನ್-19 ಸೋಂಕು ಕುರಿತು ಶಾಲೆಗಳಲ್ಲಿ ಮುಂಜಾಗ್ರತೆ ವಹಿಸಬೇಕು ಹಾಗೂ ನೆಗಡಿ, ಕೆಮ್ಮು, ಜ್ವರ ಬಂದ ಮಕ್ಕಳಿಗೆ ಕಾಯಿಲೆ ವಾಸಿಯಾಗುವವರೆಗೂ ರಜೆ ನೀಡುವಂತೆ ಎಲ್ಲಾ ಶಾಲೆಗಳ ಮುಖ್ಯ ಶಿಕ್ಷಕರಿಗೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ಎಂ.ಆರ್.ಕಾಮಾಕ್ಷಿ ಸೂಚನೆ ನೀಡಿದ್ದಾರೆ.

      ಸರ್ಕಾರಿ/ ಅನುದಾನಿತ/ ಖಾಸಗಿ ಶಾಲೆಗಳ ಮಕ್ಕಳ ಆರೋಗ್ಯ ಮತ್ತು ಸುರಕ್ಷತೆಯ ದೃಷ್ಟಿಯಿಂದ ಅರಿವು ನೀಡಬೇಕು. ರೋಗದ ಲಕ್ಷಣಗಳು ಕಂಡು ಬಂದರೆ ಕೂಡಲೇ ಅಂತಹ ಮಕ್ಕಳಿಗೆ ರಜೆ ನೀಡಿ ಮನೆಗೆ ಕಳುಹಿಸಿ ಚಿಕಿತ್ಸೆ ಪಡೆಯಲು ಸೂಕ್ತ ಮಾರ್ಗದರ್ಶನ ನೀಡಬೇಕು. ಎಲ್ಲಾ ವಿದ್ಯಾರ್ಥಿಗಳಿಗೂ ಪರೀಕ್ಷಾ ಸಮಯವಾಗಿದ್ದು, ವಿದ್ಯಾರ್ಥಿಗಳ ಆರೋಗ್ಯ ಹಿತದೃಷ್ಟಿಯಿಂದ ಜಾತ್ರೆ/ಸಮಾರಂಭಗಳಲ್ಲಿ ಹೊರಗಿನ ತಿಂಡಿ, ನೀರು ಸೇವಿಸದಂತೆ ಅವರು ಸಲಹೆ ನೀಡಿದ್ದಾರೆ. ಶೌಚಾಲಯಗಳ ಬಳಕೆ ನಂತರ ಕೈತೊಳೆಯುವ ಕ್ರಮದ ಬಗ್ಗೆ ಮಕ್ಕಳಿಗೆ ತಿಳಿಸಿಕೊಡಬೇಕು ಎಂದು ಅವರು ತಿಳಿಸಿದ್ದಾರೆ.

(Visited 26 times, 1 visits today)