ತುಮಕೂರು: 98 ಮಂದಿಗೆ ಕೋವಿಡ್-19 ಸೋಂಕು ದೃಢ!!

ತುಮಕೂರು:

      ಜಿಲ್ಲೆಯಲ್ಲಿ 98 ಹೊಸ ಕೋವಿಡ್-19 ಪ್ರಕರಣ ದೃಢಪಟ್ಟಿದ್ದು, ಒಟ್ಟು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 2509 ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ನಾಗೇಂದ್ರಪ್ಪ ತಿಳಿಸಿದ್ದಾರೆ.

      ಜಿಲ್ಲೆಯಲ್ಲಿ ತುಮಕೂರು ತಾಲ್ಲೂಕಿನಲ್ಲಿ 28, ಪಾವಗಡ-09 ಕುಣಿಗಲ್-17 ಮಧುಗಿರಿ-06, ಕೊರಗಟಗೆರೆ-03, ತುರುವೇಕೆರೆ-13, ಶಿರಾ-02, ತಿಪಟೂರು-02, ಗುಬ್ಬಿ-14, ಚಿಕ್ಕನಾಯಕನಹಳ್ಳಿ-04 ಮಂದಿ ಸೇರಿ ತಾಲೂಕಿನಲ್ಲಿ ಒಟ್ಟು 98 ಜನರಲ್ಲಿ ಕೋವಿಡ್-19 ಸೋಂಕಿರುವುದು ದೃಢಪಟ್ಟಿದೆ. 

      ಜಿಲ್ಲಾಸ್ಪತ್ರೆಯಿಂದ 90 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ 1459 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 976 ಸಕ್ರಿಯ ಪ್ರಕರಣಗಳಿದ್ದು, ಈವರೆಗೆ 74 ಸಾವನ್ನಪ್ಪಿದ್ದು, ಶನಿವಾರ-04 ಮಂದಿ ಸಾವನ್ನಪ್ಪಿದ್ದಾರೆ ಎಂದು ಅವರು ತಿಳಿಸಿದ್ದಾರೆ.

(Visited 20 times, 1 visits today)

Related posts

Leave a Comment