ತುಮಕೂರು : 165 ಮಂದಿಗೆ ಕೋವಿಡ್-19 ಸೋಂಕು ದೃಢ!!

      ಜಿಲ್ಲೆಯಲ್ಲಿ 165 ಹೊಸ ಕೋವಿಡ್-19 ಪ್ರಕರಣ ದೃಢಪಟ್ಟಿದ್ದು, ಒಟ್ಟು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 4408 ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ನಾಗೇಂದ್ರಪ್ಪ ತಿಳಿಸಿದ್ದಾರೆ.

      ಜಿಲ್ಲೆಯಲ್ಲಿ ತುಮಕೂರು ತಾಲ್ಲೂಕಿನಲ್ಲಿ 40, ಪಾವಗಡ-15, ಕುಣಿಗಲ್-19, ಮಧುಗಿರಿ-10, ತುರುವೇಕೆರೆ-19, ಶಿರಾ-11, ತಿಪಟೂರು-26, ಗುಬ್ಬಿ-10, ಚಿಕ್ಕನಾಯಕನಹಳ್ಳಿ-11 ಮಂದಿ ಸೇರಿ ತಾಲೂಕಿನಲ್ಲಿ ಒಟ್ಟು 165 ಜನರಲ್ಲಿ ಕೋವಿಡ್-19 ಸೋಂಕಿರುವುದು ದೃಢಪಟ್ಟಿದೆ. 

      ಜಿಲ್ಲಾಸ್ಪತ್ರೆಯಿಂದ 165 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ 3254 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 1015 ಸಕ್ರಿಯ ಪ್ರಕರಣಗಳಿದ್ದು, ಈವರೆಗೆ 139 ಸಾವನ್ನಪ್ಪಿದ್ದಾರೆ ಎಂದು ಅವರು ತಿಳಿಸಿದ್ದಾರೆ.

 

(Visited 6 times, 1 visits today)

Related posts

Leave a Comment