ತುಮಕೂರು : 149 ಮಂದಿಗೆ ಕೋವಿಡ್-19 ಸೋಂಕು ದೃಢ!!

ತುಮಕೂರು :

     ಜಿಲ್ಲೆಯಲ್ಲಿ 149 ಹೊಸ ಕೋವಿಡ್-19 ಪ್ರಕರಣ ದೃಢಪಟ್ಟಿದ್ದು, ಒಟ್ಟು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 4557 ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ನಾಗೇಂದ್ರಪ್ಪ ತಿಳಿಸಿದ್ದಾರೆ.

      ಜಿಲ್ಲೆಯಲ್ಲಿ ತುಮಕೂರು ತಾಲ್ಲೂಕಿನಲ್ಲಿ 37, ಪಾವಗಡ-31, ಕುಣಿಗಲ್-06, ಮಧುಗಿರಿ-08, ತುರುವೇಕೆರೆ-10, ಶಿರಾ-06, ತಿಪಟೂರು-18, ಗುಬ್ಬಿ-05, ಚಿಕ್ಕನಾಯಕನಹಳ್ಳಿ-24 ಮಂದಿ ಸೇರಿ ತಾಲೂಕಿನಲ್ಲಿ ಒಟ್ಟು 149 ಜನರಲ್ಲಿ ಕೋವಿಡ್-19 ಸೋಂಕಿರುವುದು ದೃಢಪಟ್ಟಿದೆ. 

      ಜಿಲ್ಲಾಸ್ಪತ್ರೆಯಿಂದ 149 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ 3353 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 1061 ಸಕ್ರಿಯ ಪ್ರಕರಣಗಳಿದ್ದು, ಈವರೆಗೆ 143 ಸಾವನ್ನಪ್ಪಿದ್ದಾರೆ ಎಂದು ಅವರು ತಿಳಿಸಿದ್ದಾರೆ.

 

(Visited 9 times, 1 visits today)

Related posts

Leave a Comment