ತುಮಕೂರು :

     ಜಿಲ್ಲೆಯಲ್ಲಿ 211 ಹೊಸ ಕೋವಿಡ್-19 ಪ್ರಕರಣ ದೃಢಪಟ್ಟಿದ್ದು, ಒಟ್ಟು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 3211 ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ನಾಗೇಂದ್ರಪ್ಪ ತಿಳಿಸಿದ್ದಾರೆ.

      ಜಿಲ್ಲೆಯಲ್ಲಿ ತುಮಕೂರು ತಾಲ್ಲೂಕಿನಲ್ಲಿ 32, ಪಾವಗಡ-08, ಕುಣಿಗಲ್-10, ಮಧುಗಿರಿ-24, ಕೊರಗಟಗೆರೆ-25, ತುರುವೇಕೆರೆ-08, ಶಿರಾ-30, ತಿಪಟೂರು-11, ಗುಬ್ಬಿ-42, ಚಿಕ್ಕನಾಯಕನಹಳ್ಳಿ-18 ಮಂದಿ ಸೇರಿ ತಾಲೂಕಿನಲ್ಲಿ ಒಟ್ಟು 211 ಜನರಲ್ಲಿ ಕೋವಿಡ್-19 ಸೋಂಕಿರುವುದು ದೃಢಪಟ್ಟಿದೆ. 

      ಜಿಲ್ಲಾಸ್ಪತ್ರೆಯಿಂದ 169 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ 3906 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಒಟ್ಟು 1442 ಸಕ್ರಿಯ ಪ್ರಕರಣಗಳಿದ್ದು, ಈವರೆಗೆ 160 ಸಾವನ್ನಪ್ಪಿದ್ದಾರೆ ಎಂದು ಅವರು ತಿಳಿಸಿದ್ದಾರೆ.

(Visited 22 times, 1 visits today)