ತುಮಕೂರು :
ಕೋವಿಡ್-19 ಸೋಂಕಿನಿಂದ ಮೃತಪಟ್ಟ ವ್ಯಕ್ತಿಗಳ ಕಾನೂನುಬದ್ದ ವಾರಸುದಾರರಿಗೆ ಪರಿಹಾರ ನೀಡಲು ಅರ್ಜಿ ಸ್ವೀಕಾರ ಹಾಗೂ ಅರ್ಹ ವ್ಯಕ್ತಿಗಳಿಗೆ ಪರಿಹಾರ ಪಾವತಿಸುವ ಕುರಿತು ಸುಪ್ರೀಂಕೋರ್ಟ್ ನೀಡಲಾಗಿರುವ ನಿರ್ದೇಶನಗಳನ್ನು ಪಾಲಿಸಬೇಕೆಂದು ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ತಿಳಿಸಿದರು.
ತಮ್ಮ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿಂದು ಅಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸಿ ಮಾತನಾಡಿದ ಅವರು ಕೋವಿಡ್-19 ವೈರಾಣುವಿನಿಂದ ಮೃತಪಟ್ಟ ಕುಟುಂಬದವರಿಗೆ ಕೇಂದ್ರ ಸರ್ಕಾರ Sಆಖಈ ಮಾರ್ಗಸೂಚಿಯನ್ವಯ ತಲಾ 50,000 ರೂ.ಗಳ ಪರಿಹಾರ ಧನ ವಿತರಿಸಲಾಗುತ್ತಿದೆ ಎಂದ ಅವರು ಸರ್ವೋಚ್ಚ ನ್ಯಾಯಾಲಯದ ಆದೇಶದನ್ವಯ ಮಾರ್ಚ್ 20, 2022ಕ್ಕೂ ಮೊದಲು ಕೋವಿಡ್ -19 ಸೋಂಕಿನಿಂದ ಮೃತಪಟ್ಟ ವ್ಯಕ್ತಿಗಳ ಪ್ರಕರಣಗಳಲ್ಲಿ ಪರಿಹಾರ ಕೋರಿ ಅರ್ಜಿ ಸಲ್ಲಿಸಲು ಮಾರ್ಚ್ 20 2022 ರಿಂದ 60 ದಿನಗಳ ಕಾಲಮಿತಿಯನ್ನು ನಿಗದಿಗೊಳಿಸಿದೆ ಎಂದರು.
ದಿನಾಂಕ 2022 ಮಾರ್ಚ್ 20ರ ನಂತರ ಕೋವಿಡ್ ನಿಂದ ಮೃತಪಟ್ಟ ವಾರಸುದಾರರು ಅರ್ಜಿ ಸಲ್ಲಿಸಲು ಮರಣ ಸಂಭವಿಸಿದ ದಿನಾಂಕದಿಂದ 90 ದಿನಗಳ ಕಾಲಮಿತಿಯನ್ನು ನಿಗದಿಪಡಿಸಲಾಗಿದೆ ಎಂದು ತಿಳಿಸಿದರು. ಸ್ವೀಕೃತವಾದ ಅರ್ಜಿಗಳ ಸಂಸ್ಕರಣೆ ಮತ್ತು ಪರಿಹಾರ ಪಾವತಿಗೆ 30 ದಿನಗಳ ಕಾಲಮಿತಿ ಅನ್ವಯವಾಗುತ್ತದೆ. ಪ್ರಕರಣಗಳಲ್ಲಿ ಯಾವುದೇ ವ್ಯಕ್ತಿಯು ಸುಳ್ಳು ಮಾಹಿತಿ, ಅಥವಾ ನಕಲಿ ಅರ್ಜಿ ಸಲ್ಲಿಸಿ ಪರಿಹಾರ ಪಡೆದಿದ್ದು ಸಾಬೀತಾದಲ್ಲಿ ಅಂತಹ ವ್ಯಕ್ತಿಗಳು ಪಡೆದ ಪರಿಹಾರ ಮೊತ್ತವನ್ನು ವಸೂಲು ಮಾಡುವ ಅಧಿಕಾರವನ್ನು ಸರ್ಕಾರವು ಹೊಂದಿರುತ್ತದೆಯಲ್ಲದೇ ಅಂತಹವರಿಗೆ ವಿಪತ್ತು ನಿರ್ವಹಣಾ ಅಧಿನಿಯಮ 2005ರಡಿ ಸೂಕ್ತ ದಂಡದೊಂದಿಗೆ ಎರಡು ವರ್ಷಗಳವರೆಗೆ ಜೈಲು ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ತಿಳಿಸಿದರು
ಕೋವಿಡ್-19 ಪರಿಹಾರ ಪಾವತಿಯ ಮಾರ್ಗಸೂಚಿಗಳಲ್ಲಿ ಸೂಚಿಸಿರುವಂತೆ ಸೂಕ್ತ ವಿಚಾರಣೆ ನಡೆಸದೆ, ಮನವಿಗಳನ್ನು ಪರಿಶೀಲಿಸದೆ ಕೋವಿಡ್ ಪರಿಹಾರ ವಿತರಣೆಗೆ ಶಿಪಾರಸ್ಸು ಮಾಡುವಂತಹ ಅಧಿಕಾರಿ/ ಸಿಬ್ಬಂದಿಗಳ ವಿರುದ್ದವೂ ಸಹ ಇಲಾಖೆಗಳ ಮುಖ್ಯಸ್ಥರು ಶಿಸ್ತಿನ ಕ್ರಮ ಕೈಗೊಳ್ಳಬಹುದು ಎಂದು ಸುಪ್ರೀಂಕೋರ್ಟ್ ನಿರ್ದೇಶನ ನೀಡಿದೆ ಎಂದು ತಿಳಿಸಿದರು. ಕೋವಿಡ್ ತಡೆಗಟ್ಟಲು 12-14 ವರ್ಷದೊಳಗಿನ ಮಕ್ಕಳಿಗೆ ಲಸಿಕಾಕರಣ ಪೂರ್ಣಗೊಳಿಸದಿರುವ ಕುರಿತು ಅಸಮಾಧಾನ ವ್ಯಕ್ತಪಡಿಸಿದ ಅವರು ಆಯಾ ತಾಲ್ಲೂಕು ವೈದ್ಯಾಧಿಕಾರಿಗಳು ಶಿಕ್ಷಣಾಧಿಕಾರಿಗಳಿಗೆ ತಿಳಿಸಿ 3 ದಿನಗಳೊಳಗೆ ಲಸಿಕೆಯನ್ನು ಹಾಕಿಸಲು ಕ್ರಮಕೈಗೊಳ್ಳಬೇಕೆಂದು ಸೂಚಿಸಿದರು.
ತಮ್ಮ ಕಚೇರಿಯ ಮುಂಭಾಗದಲ್ಲಿ ಧರಣಿ ನಡೆಸುತ್ತಿರುವವರು ಅಲ್ಲಲ್ಲಿ ಗುಡಿಸಲುಗಳನ್ನು ಹಾಕಿಕೊಂಡಿದ್ದು, ಪೊಲೀಸ್ ವರಿμÁ್ಠಧಿಕಾರಿಗಳೊಂದಿಗೆ ಚರ್ಚಿಸಿ ಶೀಘ್ರ ತೆರವುಗೊಳಿಸುವಂತೆ ಪಾಲಿಕೆ ಆಯುಕ್ತೆ ರೇಣುಕಾ ಅವರಿಗೆ ನಿರ್ದೇಶಿಸಿದರು. ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಏಪ್ರಿಲ್ 18 ರಿಂದ 24 ರವರೆಗೆ ಆರೋಗ್ಯ ಮೇಳ ನಡೆಯಲಿದ್ದು ಅಗತ್ಯ ಸಿದ್ದತೆಗಳನ್ನು ಕೈಗೊಳ್ಳುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಎಂ.ಬಿ. ನಾಗೇಂದ್ರಪ್ಪ ಅವರಿಗೆ ಸೂಚಿಸಿದರು.
ನಗರ ಸ್ಥಳೀಯ ಸಂಸ್ಥೆಗಳಲ್ಲಿ ಆಶ್ರಯ, ಅಂಬೇಡ್ಕರ್, ವಾಜಪೇಯಿ ವಸತಿ ಯೋಜನೆಗಳಡಿ ವಸತಿ ಮಂಜೂರಾತಿಗಾಗಿ ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದ್ದರೂ ಸಹ ಈವರೆಗೂ ಸಲ್ಲಿಸಿರುವುದಿಲ್ಲವಾದ್ದರಿಂದ ಶೀಘ್ರ ಪ್ರಸ್ತಾವನೆ ಸಲ್ಲಿಸುವಂತೆ ಯೋಜನಾ ನಿರ್ದೇಶಕ ನಗರ ಸ್ಥಳೀಯ ಅಧಿಕಾರಿಗಳಿಗೆ ತಿಳಿಸಿದರು. ಜಿಲ್ಲೆಯ ಎಲ್ಲಾ ಗ್ರಾಮಗಳಿಗೂ ಸ್ಮಶಾನ ಭೂಮಿಯನ್ನು ಕಾಯ್ದಿರಿಸುವುದು ಸರ್ಕಾರದ ಉದ್ದೇಶವಾಗಿದೆ.ಪಾವಗಡ ತಾಲ್ಲೂಕಿನ 7 ಹಾಗೂ ತುಮಕೂರು ತಾಲ್ಲೂಕಿನಲ್ಲಿ 1 ಸೇರಿ 8 ಪ್ರಕರಣಗಳು ಬಾಕಿಯಿದ್ದು ಶೀಘ್ರ ಇತ್ಯರ್ಥಗೊಳಿಸುವಂತೆ ತಹಶಿಲ್ದಾರ್ ಗಳಿಗೆ ಸೂಚಿಸಿದರು.ಅಟಲ್ ಜೀ ಜನಸ್ನೇಹಿ ಕೇಂದ್ರ, ನಾಡಕಚೇರಿಗಳಲ್ಲಿ ಸಾಮಾಜಿಕ ಭದ್ರತಾ ಯೋಜನೆಗಳಡಿ ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥಗೊಳಿಸುವತ್ತ ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು ಎಂದು ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ ಮಾತನಾಡಿ, ಭೂಮಿಪೆಂಡೆನ್ಸಿ ಪೈಕಿಪಹಣಿ, 3/9 ಮಿಸ್ ಮ್ಯಾಚ್ ಪ್ರಕರಣಗಳನ್ನು ನಿಗಧಿತ ಕಾಲವಧಿಯಲ್ಲಿ ಇತ್ಯರ್ಥಗೊಳಿಸಬೇಕು ಎಂದರಲ್ಲದೆ ಐಪಿಜಿಆರ್ ಎಸ್ ಯಡಿ 73 ಪ್ರಕರಣಗಳು ಬಾಕಿ ಇದ್ದು ಶೀಘ್ರ ವಿಲೇವಾರಿ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಜಿ.ಪಂ. ಸಿಇಓ ಡಾ|| ಕೆ. ವಿದ್ಯಾಕುಮಾರಿ, ಉಪವಿಭಾಗಾಧಿಕಾರಿ ವಿ.ಅಜಯ್, ತಹಶಿಲ್ದಾರ್ ಮೋಹನ್ ಕುಮಾರ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ|| ಟಿ.ಎ. ವೀರಭದ್ರಯ್ಯ, ಆರ್.ಸಿ.ಎಚ್ ಅಧಿಕಾರಿ ಡಾ|| ಕೇಶವ್ ರಾಜ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಜರಿದ್ದರು.

(Visited 10 times, 1 visits today)