ತುಮಕೂರು :

     ಜಿಲ್ಲೆಯಲ್ಲಿ ಇಂದು 51 ಹೊಸ ಕೋವಿಡ್-19 ಪ್ರಕರಣ ದೃಢಪಟ್ಟಿದ್ದು, ಒಟ್ಟು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 864 ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ನಾಗೇಂದ್ರಪ್ಪ ತಿಳಿಸಿದ್ದಾರೆ.

      ಜಿಲ್ಲೆಯಲ್ಲಿ ತುಮಕೂರು ತಾಲ್ಲೂಕಿನಲ್ಲಿ 23, ಪಾವಗಡ-05, ಗುಬ್ಬಿ-03, ಕುಣಿಗಲ್-07, ಮಧುಗಿರಿ-02, ಶಿರಾ-04, ತಿಪಟೂರು-03, ತುರುವೇಕೆರೆ-01, ಚಿಕ್ಕನಾಯಕನಹಳ್ಳಿ-03 ಮಂದಿ ತಾಲೂಕಿನಲ್ಲಿ ಒಟ್ಟು 51 ಜನರಲ್ಲಿ ಕೋವಿಡ್-19 ಸೋಂಕಿರುವುದು ದೃಢಪಟ್ಟಿದೆ.

     ಜಿಲ್ಲಾಸ್ಪತ್ರೆಯಿಂದ 48 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ 485 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

     ಜಿಲ್ಲೆಯಲ್ಲಿ ಒಟ್ಟು 349 ಸಕ್ರಿಯ ಪ್ರಕರಣಗಳಿದ್ದು, ಈವರೆಗೆ 30 ಸಾವನ್ನಪ್ಪಿದ್ದು, ಬುಧವಾರ-02 ಮಂದಿ ಸಾವನ್ನಪ್ಪಿದ್ದಾರೆ ಎಂದು ಅವರು ತಿಳಿಸಿದ್ದಾರೆ. 

(Visited 14 times, 1 visits today)