ತುಮಕೂರು : 67 ಮಂದಿಗೆ ಕೋವಿಡ್-19 ಸೋಂಕು!!

    ತುಮಕೂರು :

      ಜಿಲ್ಲೆಯಲ್ಲಿ ಇಂದು 67 ಹೊಸ ಕೋವಿಡ್-19 ಪ್ರಕರಣ ದೃಢಪಟ್ಟಿದ್ದು, ಒಟ್ಟು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 931 ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ನಾಗೇಂದ್ರಪ್ಪ ತಿಳಿಸಿದ್ದಾರೆ.

      ಜಿಲ್ಲೆಯಲ್ಲಿ ತುಮಕೂರು ತಾಲ್ಲೂಕಿನಲ್ಲಿ 26, ಪಾವಗಡ-06, ಗುಬ್ಬಿ-09, ಕುಣಿಗಲ್-05, ಮಧುಗಿರಿ-07, ಶಿರಾ-04, ತಿಪಟೂರು-02, ತುರುವೇಕೆರೆ-05, ಚಿಕ್ಕನಾಯಕನಹಳ್ಳಿ-02, ಕೊರಟಗೆರೆ-01 ಮಂದಿ ತಾಲೂಕಿನಲ್ಲಿ ಒಟ್ಟು 67 ಜನರಲ್ಲಿ ಕೋವಿಡ್-19 ಸೋಂಕಿರುವುದು ದೃಢಪಟ್ಟಿದೆ.

     ಜಿಲ್ಲಾಸ್ಪತ್ರೆಯಿಂದ 03 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ 488 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

     ಜಿಲ್ಲೆಯಲ್ಲಿ ಒಟ್ಟು 408 ಸಕ್ರಿಯ ಪ್ರಕರಣಗಳಿದ್ದು, ಈವರೆಗೆ 35 ಸಾವನ್ನಪ್ಪಿದ್ದು, ಗುರುವಾರ-05 ಮಂದಿ ಸಾವನ್ನಪ್ಪಿದ್ದಾರೆ ಎಂದು ಅವರು ತಿಳಿಸಿದ್ದಾರೆ. 

(Visited 5 times, 1 visits today)

Related posts

Leave a Comment