BenkiyabaleBenkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
Facebook Instagram YouTube WhatsApp RSS
Trending
  • ಸಂಪನ್ನಗೊ0ಡ ವಿಶ್ವ ರಂಗಭೂಮಿ ಸಂಭ್ರಮಾಚರಣೆ
  • ಹೆಚ್ಚು ಹಾಲು ಕರಿದ ರೈತರಿಗೆ ೩೦,೦೦೦ ನಗದು ಪ್ರಥಮ ಬಹುಮಾನ
  • ಮಕ್ಕಳು ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಿ
  • ಗುಬ್ಬಚ್ಚಿಗಳ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ವ : ಜಿ.ವಿ. ರಘು
  • ಸಂಸಾರ ಸರಿದೂಗಿಸುವ ಮಹಿಳೆಯು ಸಾಧಕಿಯೇ
  • ಏ.1 ರಂದು ಸಿದ್ದಗಂಗಾ ಮಠಕ್ಕೆ ರಾಷ್ಟ್ರಪತಿ ಭೇಟಿ
  • ಪುನಶ್ಚೇತನಗೊಂಡ ಕೆರೆ ಗ್ರಾಮಸ್ಥರಿಗೆ ಹಸ್ತಾಂತರ
  • ಸರ್ಕಾರವು ಪರವಾಗಿ ಭೂಮಾಪಕರ ಹೆಸರಿನಲ್ಲಿ ರೈತಗೆ ಅನ್ಯಾಯ
Facebook Twitter Instagram YouTube RSS
Benkiyabale Benkiyabale
  • ಮುಖಪುಟ
  • ಸಂಪಾದಕೀಯ
  • ತುಮಕೂರು
  • ಬೆಂಗಳೂರು
  • ರಾಜ್ಯ
  • ರಾಷ್ಟ್ರೀಯ
  • ವಿದೇಶ
  • ಅಂಕಣಗಳು
  • ಕ್ರೀಡೆ
  • ಸಿನಿಮಾ
  • ವಿಜ್ಞಾನ
  • ಇತರೆ
  • ವಿಡಿಯೋ
  • E-Paper
BenkiyabaleBenkiyabale
Home » ತುಮಕೂರು : ಪ್ರತಿ ತಾಲ್ಲೂಕಿನಲ್ಲಿ 20 ಬೆಡ್‍ಗಳ ಕೋವಿಡ್ ಆಸ್ಪತ್ರೆ!
Trending

ತುಮಕೂರು : ಪ್ರತಿ ತಾಲ್ಲೂಕಿನಲ್ಲಿ 20 ಬೆಡ್‍ಗಳ ಕೋವಿಡ್ ಆಸ್ಪತ್ರೆ!

By News Desk BenkiyabaleUpdated:May 30, 2020 6:27 pm

ತುಮಕೂರು :

     ಸರ್ಕಾರದ ಯೋಜನೆಗಳನ್ನು ಕಾಲಬದ್ಧ ಮಿತಿಯಲ್ಲಿ ಪೂರ್ಣಗೊಳಿಸುವುದರ ಜೊತೆಗೆ ಅರ್ಹರಿಗೆ ಸರ್ಕಾರದ ಯೋಜನೆಗಳ ಲಾಭ ತಲುಪಿಸುವ ಕೆಲಸ ಮಾಡಬೇಕೆಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ, ಸಣ್ಣ ನೀರಾವರಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

       ಅವರು ಇಂದು ತುಮಕೂರು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ 2019-20ನೇ ಸಾಲಿನ 4ನೇ ತ್ರೈಮಾಸಿಕ ಕೆ.ಡಿ.ಪಿ. ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ, ಕೃಷಿ ಇಲಾಖೆ ಪ್ರಗತಿ ಪರಿಶೀಲನೆ ನಡೆಸಿದ ಸಚಿವರು ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯಲ್ಲಿ ಬೆಳೆಯುವ ಬೆಳೆಗಳ ಬಿತ್ತನೆ ಬೀಜ, ಗೊಬ್ಬರ ಮತ್ತು ಕೀಟನಾಶಕ ಔಷಧಿಗಳ ದಾಸ್ತಾನಿನ ಬಗ್ಗೆ ಮಾಹಿತಿ ಪಡೆದರು. ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ಈವರೆಗೆ 120 ಮಿ.ಮಿ. ವಾಡಿಕೆ ಮಳೆಯಾಗಬೇಕಾಗಿದ್ದು, 108 ಮಿ.ಮಿ. ಮಳೆಯಾಗಿರುತ್ತದೆ. ಉದ್ದು, ಹೆಸರು ಮತ್ತು ಅಲಸಂದೆ ಬೆಳೆ ಸುಮಾರು 10472 ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಆಗಿದೆ. ಬಿತ್ತನೆ ಬೀಜದ ಮತ್ತು ರಸಗೊಬ್ಬರದ ಕೊರತೆ ಜಿಲ್ಲೆಯಲ್ಲಿ ಇಲ್ಲವೆಂದು ಜಂಟಿ ಕೃಷಿ ನಿರ್ದೇಶಕರು ಸಭೆಗೆ ಮಾಹಿತಿ ನೀಡಿದರು.

      ಜಿಲ್ಲೆಯಲ್ಲಿ ಮಿಡಿತೆ ಹಾವಳಿ ಬಗ್ಗೆ ವರದಿ ಬಂದಿದ್ದು, ಈಗಾಗಲೇ ವಿಜ್ಞಾನಿಗಳು ಈ ಮಿಡಿತೆಗಳ ಪರಿವೀಕ್ಷಣೆ ನಡೆಸಿದ್ದು, ಇವು ರೈತರ ಬೆಳೆಗಳಿಗೆ ಮಾರಕ ಅಲ್ಲವೆಂದು ವರದಿ ನೀಡಿರುವುದರಿಂದ ರೈತರು ಆತಂಕಪಡುವ ಅವಶ್ಯಕತೆ ಇಲ್ಲ. ಕೊಂಡ್ಲಿ ಹುಳುವಿನ ಅಥವಾ ಸೈನಿಕ ಹುಳು ಬಾಧೆ ನಿಯಂತ್ರಿಸಲು ಅಧಿಕಾರಿಗಳು ಮುಂಜಾಗ್ರತಾ ಕ್ರಮ ವಹಿಸಬೇಕೆಂದು ಸಚಿವರು ತಿಳಿಸಿದರು.

       ತೋಟಗಾರಿಕೆ ಹಾಗೂ ಕೃಷಿ ಇಲಾಖೆ ನೀಡುವ ಜಿಲ್ಲೆಯ ಸಾಗುವಳಿ ಭೂಹಿಡುವಳಿಯಲ್ಲಿ 25ಸಾವಿರ ಹೆಕ್ಟೇರ್ ವ್ಯತ್ಯಾಸ ಕಂಡುಬರುತ್ತಿದ್ದು, ನಿಖರವಾದ ವರದಿಯನ್ನು ನೀಡುವಂತೆ ಸಚಿವರು ಸಲಹೆ ಮಾಡಿದರು. ಜಿಲ್ಲೆಯಲ್ಲಿ ಬೆಳೆದ ಯಾವುದೇ ಹಣ್ಣುಗಳಿಗೆ ಸರಿಯಾದ ಮಾರುಕಟ್ಟೆ ಇಲ್ಲದಿರುವ ಬಗ್ಗೆ ಸಚಿವರು ಪ್ರಸ್ತಾಪಿಸಿ ತೋಟಗಾರಿಕೆ ಇಲಾಖೆ ವತಿಯಿಂದ ಮಾರುಕಟ್ಟೆ ಕಲ್ಪಿಸುವ ವ್ಯವಸ್ಥೆ ಮಾಡಬೇಕೆಂದು ಸಚಿವರು ತಿಳಿಸಿದರು.

       ಪಶುಸಂಗೋಪನೆ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿ ಜಿಲ್ಲೆಯಲ್ಲಿ ಮೇವಿನ ಕೊರತೆ ಬಾರದ ಹಾಗೆ ಮುಂಜಾಗ್ರತಾ ಕ್ರಮ ವಹಿಸಬೇಕು ಹಾಗೂ ಪ್ರಕೃತಿ ವಿಕೋಪದಿಂದ ಕುರಿ, ಜಾನುವಾರು ಸತ್ತರೆ ಅವುಗಳಿಗೆ ವಿಮೆ ಮಾಡಿಸುವ ಮತ್ತು ಪರಿಹಾರ ನೀಡುವ ಕೆಲಸ ಇಲಾಖೆಯಿಂದಾಗಬೇಕೆಂದು ಅವರು ತಿಳಿಸಿದರು.

      ತಾಯಿ ಮತ್ತು ಶಿಶುವಿನ ಮರಣ ಪ್ರಮಾಣವನ್ನು ಆರೋಗ್ಯ ಇಲಾಖೆ ತಗ್ಗಿಸುವುದರ ಜೊತೆಗೆ ಸಾಂಕ್ರಾಮಿಕ ರೋಗಗಳು ಹರಡದಂತೆ ಮುಂಜಾಗ್ರತಾ ಕ್ರಮವಹಿಸಬೇಕು. ಗರ್ಭಿಣಿ ಮಹಿಳೆಯರಲ್ಲಿ ಕನಿಷ್ಠ ಶೇ.60ರಷ್ಟಾದರೂ ಸರ್ಕಾರಿ ಆಸ್ಪತ್ರೆಗಳಲ್ಲಿ ಹೆರಿಗೆ ಆಗುವಂತೆ ನೋಡಿಕೊಳ್ಳಬೇಕೆಂದು ಸಚಿವರು ತಾಕೀತು ಮಾಡಿದರು.

      ಜಿಲ್ಲಾ ಆಸ್ಪತ್ರೆಯಲ್ಲಿ ನೂತನವಾಗಿ ಮಾಡಿರುವ 200 ಬೆಡ್ ಕೋವಿಡ್ ಆಸ್ಪತ್ರೆಯಲ್ಲಿ ಹಾಗೂ ನೂತನವಾಗಿ ಮಾಡಿರುವ ಲ್ಯಾಬ್‍ನಲ್ಲಿ ವೈರಸ್‍ಗೆ ಸಂಬಂಧಿಸಿದ ರೋಗಗಳ ತಪಾಸಣೆ ಮತ್ತು ಚಿಕಿತ್ಸೆ ನಡೆಯುವಂತೆ ಕ್ರಮ ಜರುಗಿಸಲು ಸಚಿವರು ತಿಳಿಸಿದರು.

       ಪ್ರತಿ ತಾಲ್ಲೂಕಿನಲ್ಲಿ 20 ಬೆಡ್‍ಗಳ ಕೋವಿಡ್ ಆಸ್ಪತ್ರೆಗಳನ್ನು ಸಜ್ಜು ಮಾಡಲಾಗಿದ್ದು, ಮುಂಬರುವ ದಿನಗಳಲ್ಲಿ ಕೋವಿಡ್ ಸೋಂಕು ಪ್ರಕರಣಗಳು ಹೆಚ್ಚಾದರೆ ತಾಲ್ಲೂಕು ಮಟ್ಟದಲ್ಲಿಯೂ ಸಹ ಕ್ವಾರಂಟೈನ್‍ನಲ್ಲಿಡುವ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಇದಕ್ಕಾಗಿ ಜಿಲ್ಲೆಗೆ ಹೆಚ್ಚುವರಿಯಾಗಿ ಸರ್ಕಾರ 5ಕೋಟಿ ರೂ. ಅನುದಾನ ಮಂಜೂರು ಮಾಡಿದ್ದು, ಬೇರೆ ರಾಜ್ಯಗಳಿಂದ ಜಿಲ್ಲೆಗೆ ಬರುವ ಎಲ್ಲರನ್ನೂ ತಪಾಸಣೆಗೊಳಪಡಿಸಿ ಸೋಂಕು ಇರುವವರನ್ನು ಕ್ವಾರಂಟೈನ್‍ನಲ್ಲಿ ಇಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಡಾ: ರಾಕೇಶ್ ಕುಮಾರ್ ಸಭೆಗೆ ಮಾಹಿತಿ ನೀಡಿದರು.

       ಇದೇ ಜೂನ್ 25 ರಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆ ನಡೆಯಲಿದ್ದು, ಶಿಕ್ಷಣ ಇಲಾಖೆಯು ಪರೀಕ್ಷೆಯನ್ನು ಸುವ್ಯವಸ್ಥಿತವಾಗಿ ನಡೆಸಬೇಕು. ಮುಂದಿನ ವರ್ಷಕ್ಕಾಗಿ ಮಕ್ಕಳಿಗೆ ಬಂದಿರುವ ಪಠ್ಯಪುಸ್ತಕಗಳನ್ನು ಪೋಷಕರ ಮೂಲಕ ಮನೆಗೆ ತಲುಪಿಸುವ ಕೆಲಸ ಮಾಡಬೇಕೆಂದು ಸಚಿವರು ತಿಳಿಸಿದರು. ಸಮಾಜ ಕಲ್ಯಾಣ ಇಲಾಖೆಗೆ ವಸತಿ ನಿಲಯ ಕಟ್ಟಡಗಳನ್ನು ನಿರ್ಮಿಸಲು ಸರ್ಕಾರ ಈಗಾಗಲೇ ಅನುದಾನ ಮಂಜೂರು ಮಾಡಿದ್ದರೂ ಕಟ್ಟಡದ ಕಾಮಗಾರಿ ಪ್ರಾರಂಭಿಸದಿರುವ ಬಗ್ಗೆ ವಿಷಾಧ ವ್ಯಕ್ತಪಡಿಸಿದ ಸಚಿವರು ಕೂಡಲೇ ಈ ಕಾಮಗಾರಿಗಳಿಗೆ ಚಾಲನೆ ನೀಡಬೇಕೆಂದು ತಾಕೀತು ಮಾಡಿದರು.

      ವಿವಿಧ ಅಭಿವೃದ್ಧಿ ನಿಗಮಗಳ ಮೂಲಕ ಬಡವರ ಏಳ್ಗೆಗಾಗಿ ಗಂಗಾ ಕಲ್ಯಾಣ ಯೋಜನೆ ಸರ್ಕಾರ ಜಾರಿಗೆ ತಂದಿದ್ದು, 2018-19ನೇ ಸಾಲಿನ ಕೊಳವೆ ಬಾವಿಗಳನ್ನು ಕೊರೆಸದೇ ಇರುವ ಬಗ್ಗೆ ಸಚಿವರು ನಿಗಮದ ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡರು.

      ಜಿಲ್ಲಾ ಕೈಗಾರಿಕಾ ಇಲಾಖೆ ವತಿಯಿಂದ ಸಣ್ಣ ಕೈಗಾರಿಕೆಗಳ ಸ್ಥಾಪನೆಗೆ ಕೇಂದ್ರ ಮತ್ತು ರಾಜ್ಯ ಯೋಜನೆಯಡಿಯಲ್ಲಿ ಫಲಾನುಭವಿಗಳನ್ನು ಆಯ್ಕೆ ಮಾಡಿ ಸಾಲ ಸೌಲಭ್ಯಕ್ಕಾಗಿ ಜಿಲ್ಲೆಯ ವಿವಿಧ ಬ್ಯಾಂಕ್‍ಗಳಿಗೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಬ್ಯಾಂಕುಗಳು ಸಾಲ ಸೌಲಭ್ಯ ನೀಡಲು ಮೀನಾಮೇಷ ಎಣಿಸುತ್ತಿರುವ ಬಗ್ಗೆ ಸಚಿವರು ಬೇಸರ ವ್ಯಕ್ತಪಡಿಸಿ, ಕೇವಲ ಸಬ್ಸಿಡಿ ಹಣವನ್ನು ತಮ್ಮ ಬ್ಯಾಂಕ್ ಖಾತೆಗಳಲ್ಲಿ ಡಿಪಾಜಿûಟ್ ಇಟ್ಟುಕೊಳ್ಳಲು ಸರ್ಕಾರ ಈ ಯೋಜನೆಗಳನ್ನು ತಂದಿರುವುದಿಲ್ಲ. ಕೂಡಲೆ ಅರ್ಹ ಫಲಾನುಭವಿಗಳಿಗೆ ಸಾಲ ಸೌಲಭ್ಯ ನೀಡಿ ಜಿಲ್ಲೆಯಲ್ಲಿ ಕೈಗಾರಿಕೆ ಪ್ರಾರಂಭಿಸುವುದರ ಜೊತೆಗೆ ನಿರುದ್ಯೋಗಿಗಳಿಗೆ ಉದ್ಯೋಗ ದೊರಕಿಸುವಂತಾಗಬೇಕೆಂದು ಲೀಡ್ ಡಿಸ್ಟಿಕ್ಟ್ ಮ್ಯಾನೇಜರ್‍ಗೆ ಸೂಚನೆ ನೀಡಿದರು.

           ಅರಣ್ಯ ಇಲಾಖೆ ಜಿಲ್ಲೆಯಲ್ಲಿ ಡೀಮ್ಡ್ ಫಾರೆಸ್ಟ್ ಎಂದು ಬಗರ್ ಹುಕುಂ ಸಾಗುವಳಿ ಮಾಡುತ್ತಿರುವ ರೈತರುಗಳಿಗೆ ತೊಂದರೆ ಕೊಡದಂತೆ ಹಾಗೂ ಸರ್ಕಾರಿ ಸೌಲಭ್ಯಗಳಿಗಾಗಿ ನಿರ್ಮಿಸುವ ಕಟ್ಟಡಗಳಿಗೆ ಸರಿಯಾದ ಪರಿಶೀಲನೆ ನಡೆಸಿ ನಿವೇಶನಗಳಿಗೆ ಕೂಡಲೇ ಮಂಜೂರಾತಿ ನೀಡುವಂತೆ ಕ್ರಮ ಕೈಗೊಳ್ಳಬೇಕೆಂದು ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

       ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಹೇಮಾವತಿ ನಾಲಾ, ಸಣ್ಣ ನೀರಾವರಿ, ನಗರಾಭಿವೃದ್ಧಿ ಮತ್ತು ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದ ಸಚಿವರು ಅಧಿಕಾರಿಗಳು ಕೋವಿಡ್-19 ಹಾಗೂ ಬೇರೆ ಕಾರಣಗಳನ್ನು ನೀಡದೆ ಆಯಾ ಇಲಾಖೆಗಳಿಗೆ ಸರ್ಕಾರದ ಯೋಜನೆಗಳ ಅನುಷ್ಠಾನಕ್ಕೆ ನೀಡಿರುವ ಅನುದಾನವನ್ನು ಬಳಸಿಕೊಳ್ಳುವುದರ ಜೊತೆಗೆ ಕಾಮಗಾರಿಗಳನ್ನು ಸಮರೋಪಾದಿಯಲ್ಲಿ ಪೂರ್ಣಗೊಳಿಸಬೇಕೆಂದು ಸಚಿವರು ತಾಕೀತು ಮಾಡಿದರು.

       ಸಭೆಯಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಲತಾ ರವಿಕುಮಾರ್, ಸಂಸದರಾದ ಜಿ.ಎಸ್. ಬಸವರಾಜು, ಶಾಸಕರುಗಳಾದ ಜಿ.ಬಿ. ಜ್ಯೋತಿ ಗಣೇಶ್, ಬಿ. ಸತ್ಯನಾರಾಯಣ್, ಎಂ.ವಿ.ವೀರಭದ್ರಯ್ಯ, ಜಯರಾಂ, ಡಾ: ಹೆಚ್.ಡಿ.ರಂಗನಾಥ್, ಬಿ.ಎಂ. ಕಾಂತರಾಜು, ತಿಪ್ಪೇಸ್ವಾಮಿ ಹಾಗೂ ಜಿ.ಪಂ. ಉಪಾಧ್ಯಕ್ಷೆ ಶಾರದಾ ನರಸಿಂಹಮೂರ್ತಿ, ಜಿ.ಪಂ. ಸಿಇಓ ಶುಭಾಕಲ್ಯಾಣ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉದೇಶ್, ಸ್ಥಾಯಿ ಸಮಿತಿ ಅಧ್ಯಕ್ಷರುಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

       ಇದೇ ವೇಳೆಯಲ್ಲಿ ಜಿಲ್ಲಾ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಇಲಾಖೆಗಳ ಮೂವರು ವಯೋ ನಿವೃತ್ತಿ ಹೊಂದಿದ ಅಧಿಕಾರಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.

(Visited 15 times, 1 visits today)
Previous Articleಸಾಮಾಜಿಕ ಅಂತರ ಕಾಯ್ದುಕೊಂಡು ಎಸ್‍ಎಸ್‍ಎಲ್‍ಸಿ ಪರೀಕ್ಷೆ
Next Article ಊರಿನ ಜೀವ ನಾಡಿಯಾಗಿದ್ದ ಕೆರೆಗೆ ಕಾಯಕಲ್ಪ : ಜನರ ಮೊಗದಲ್ಲಿ ಮಂದಹಾಸ
News Desk Benkiyabale

Related Posts

ಹೆಚ್ಚು ಹಾಲು ಕರಿದ ರೈತರಿಗೆ ೩೦,೦೦೦ ನಗದು ಪ್ರಥಮ ಬಹುಮಾನ

March 28, 2026 3:43 pm ತುಮಕೂರು ಜಿಲ್ಲಾ ಸುದ್ಧಿಗಳು

ಸಂಸಾರ ಸರಿದೂಗಿಸುವ ಮಹಿಳೆಯು ಸಾಧಕಿಯೇ

March 28, 2026 3:33 pm ತುಮಕೂರು ಜಿಲ್ಲಾ ಸುದ್ಧಿಗಳು

ಬದುಕಿನ ಜಟಕಬಂಡಿಗೆ ಡಿವಿಜಿ ಕಗ್ಗವೇ ದಾರಿದೀಪ

March 25, 2026 4:58 pm ತುಮಕೂರು ಜಿಲ್ಲಾ ಸುದ್ಧಿಗಳು
ತಾಜಾ ಸುದ್ಧಿಗಳು
ಇತರೆ ಸುದ್ಧಿಗಳು

ಸಂಪನ್ನಗೊ0ಡ ವಿಶ್ವ ರಂಗಭೂಮಿ ಸಂಭ್ರಮಾಚರಣೆ

March 28, 2026 4:00 pm
ತುಮಕೂರು ಜಿಲ್ಲಾ ಸುದ್ಧಿಗಳು

ಹೆಚ್ಚು ಹಾಲು ಕರಿದ ರೈತರಿಗೆ ೩೦,೦೦೦ ನಗದು ಪ್ರಥಮ ಬಹುಮಾನ

March 28, 2026 3:43 pm
ಇತರೆ ಸುದ್ಧಿಗಳು

ಮಕ್ಕಳು ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಿ

March 28, 2026 3:41 pm
ಇತರೆ ಸುದ್ಧಿಗಳು

ಗುಬ್ಬಚ್ಚಿಗಳ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ವ : ಜಿ.ವಿ. ರಘು

March 28, 2026 3:35 pm
ತುಮಕೂರು ಜಿಲ್ಲಾ ಸುದ್ಧಿಗಳು

ಸಂಸಾರ ಸರಿದೂಗಿಸುವ ಮಹಿಳೆಯು ಸಾಧಕಿಯೇ

March 28, 2026 3:33 pm
ಇತರೆ ಸುದ್ಧಿಗಳು

ಏ.1 ರಂದು ಸಿದ್ದಗಂಗಾ ಮಠಕ್ಕೆ ರಾಷ್ಟ್ರಪತಿ ಭೇಟಿ

March 27, 2026 5:01 pm
Our Youtube Channel
Our Picks

ಸಂಪನ್ನಗೊ0ಡ ವಿಶ್ವ ರಂಗಭೂಮಿ ಸಂಭ್ರಮಾಚರಣೆ

March 28, 2026 4:00 pm

ಮಕ್ಕಳು ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಿ

March 28, 2026 3:41 pm

ಗುಬ್ಬಚ್ಚಿಗಳ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ವ : ಜಿ.ವಿ. ರಘು

March 28, 2026 3:35 pm

ಏ.1 ರಂದು ಸಿದ್ದಗಂಗಾ ಮಠಕ್ಕೆ ರಾಷ್ಟ್ರಪತಿ ಭೇಟಿ

March 27, 2026 5:01 pm

ಪುನಶ್ಚೇತನಗೊಂಡ ಕೆರೆ ಗ್ರಾಮಸ್ಥರಿಗೆ ಹಸ್ತಾಂತರ

March 27, 2026 4:19 pm
News Tags
Accident Ambedkar Araga jnanendra BJP Chikkanayakanahalli Congress crime DC gs basavaraju Gubbi jc madhuswamy Jds Kn rajanna kodigenahalli Koratagere kunigal madhugiri Mla Mla jyothiganesh mlc r.rajendra pavagada Police Protest R. Rajendra tumakur tumkur Tumkur dc yspatil Tumkur mahanagara palike tumur turuvekere University ಕಾಂಗ್ರೆಸ್ ಕುಲಪತಿ ಪ್ರೊ. ಎಂ. ವೆಂಕಟೇಶ್ವರಲು ಕೊರಟಗೆರೆ: ಚಿಕ್ಕನಾಯಕನಹಳ್ಳಿ ಜಿಲ್ಲಾಡಳಿತ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಪಟೂರು ತುಮಕೂರು: ತುಮಕೂರು ವಿವಿ ತುಮಕೂರು ವಿಶ್ವವಿದ್ಯಾನಿಲಯ ತುರುವೇಕೆರೆ ಬಿಜೆಪಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹುಳಿಯಾರು
About us
About us

BBNews 24×7 is Kannada Online News Portal from Benkiyabale Kannada News Paper Team. Benkiyabale is very popular Daily Newspaper publishing from Tumkur City.

Email us: benkiyabale@gmail.com
Contact: +1-320-0123-451


• Terms of Service
• Privacy Policy

Facebook Instagram YouTube WhatsApp RSS
ಅಂಕಣಗಳು

ಬಡವರ ಕಣ್ಣೀರು ತರಿಸುತ್ತಿರುವ ಪಡಿತರ

November 21, 2024 6:06 pm

ಶಕ್ತಿ ಯೋಜನೆ : ರಸ್ತೆ ಸಾರಿಗೆ ನಿಗಮಕ್ಕೆ ೨೪.೪೨ ಕೋಟಿ ಆದಾಯ

August 03, 2023 4:59 pm

ಜಿಲ್ಲೆಯಲ್ಲಿ ಕಸಾಪ ಸಾಹಿತ್ಯ ಸಮ್ಮೇಳನಗಳು ಯಶಸ್ವಿ

December 13, 2022 5:26 pm

ಭಾಷೆ ಮನುಷ್ಯನಿಗೆ ಉಸಿರಿನಷ್ಟೇ ಅನಿವಾರ್ಯ

November 04, 2022 4:36 pm
Don't Miss
ಇತರೆ ಸುದ್ಧಿಗಳು

ಸಂಪನ್ನಗೊ0ಡ ವಿಶ್ವ ರಂಗಭೂಮಿ ಸಂಭ್ರಮಾಚರಣೆ

By News Desk BenkiyabaleMarch 28, 2026 4:00 pm

ತುಮಕೂರು: ನಗರದಲ್ಲಿ ಶುಕ್ರವಾರ ಬೆಳಗ್ಗೆ ೧೧ ಕ್ಕೆ ನಾಟಕಮನೆ ತುಮಕೂರುರವರು ಆಯೋಜಿ ಸಿದ್ದ ವಿಶ್ವ ರಂಗಭೂಮಿ ದಿನಾಚರಣೆ-೨೦೨೬ ನಗರದ ಡಾ.…

ಹೆಚ್ಚು ಹಾಲು ಕರಿದ ರೈತರಿಗೆ ೩೦,೦೦೦ ನಗದು ಪ್ರಥಮ ಬಹುಮಾನ

March 28, 2026 3:43 pm

ಮಕ್ಕಳು ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಿ

March 28, 2026 3:41 pm

ಗುಬ್ಬಚ್ಚಿಗಳ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ವ : ಜಿ.ವಿ. ರಘು

March 28, 2026 3:35 pm
News by Date
March 2026
M T W T F S S
 1
2345678
9101112131415
16171819202122
23242526272829
3031  
« Feb    
Facebook Twitter Instagram YouTube LinkedIn WhatsApp RSS
  • Home
  • ಅಂಕಣಗಳು
  • ಅಡುಗೆ
  • ನಿತ್ಯ ಭವಿಷ್ಯ
  • ಪ್ರವಾಸ
  • ಸುಭಾಷಿತ
© 2016-2026 Benkiyabale - Kannada Online News Portal. Designed by Digicube Solutions.

Type above and press Enter to search. Press Esc to cancel.