ದಲಿತ ಯುವಕರ ಕೊಲೆಗೆ ಸಿಪಿಐಎಂ ಖಂಡನೆ

ತುಮಕೂರು
ಜಿಲ್ಲೆಯ ಗುಬ್ಬಿ ತಾಲೂಕಿನ ಪೆದ್ದನ ಹಳ್ಳಿಯಲ್ಲಿ ಇಬ್ಬರು ದಲಿತ ಯುವಕರ ಬರ್ಬರ ಹತ್ಯೆಯನ್ನು ಭಾರತ ಕಮ್ಯುನಿಸ್ಟ್ ಪಕ್ಷ ( ಮಾಕ್ರ್ಸವಾದಿ) ತುಮಕೂರು ಜಿಲ್ಲಾ ಸಮಿತಿ ಬಲವಾಗಿ ಖಂಡಿಸುತ್ತದೆ. ಕೂಡಲೇ ಪ್ರಮುಖ ಅಪರಾಧಿಗಳನ್ನು ಬಂಧಿಸಿ ನಿಕ್ಷಪಾತವಾಗಿ ತನಿಕೆ ನಡೆಸಿ ಸೂಕ್ತ ಕಾನೂನಿನ ಕ್ರಮ ಕೈಗೊಳ್ಳುವಂತೆ ರಾಜ್ಯ ಸರಕಾರವನ್ನು ಬಲವಾಗಿ ಒತ್ತಾಯಿಸುತ್ತದೆ.
ಯುವಕರು ತಪ್ಪು ಮಾಡಿದ್ದಾರೆಂಬ ಕಾರಣ ನೀಡಿ, ಕೊಲೆಗಳ ಸಮರ್ಥನೆಗೆ ಮುಂದಾಗುವುದನ್ನು ಒಪ್ಪಲಾಗದು. ಭೀಕರ ಕೊಲೆಯ ಪರಿಸ್ಥಿತಿಯನ್ನು ಗಮನಿಸಿದರೆ ಅದರ ಹಿಂದೆ ವ್ಯವಸ್ಥಿತ ಸಂಚು ಮತ್ತು ತಂಡ ಇರುವುದು ಕಂಡು ಬರುತ್ತದೆ. ಸಂಚನ್ನು ಭೇಧಿಸಿ ರಾಜ್ಯದ ಜನತೆಗೆ ನಿಜವೇನೆಂದು ತಿಳಿಸಲು ರಾಜ್ಯ ಸರಕಾರ ಅಗತ್ಯ ಕ್ರಮ ಕೈಗೊಳ್ಳಬೇಕು ಮತ್ತು ಕೊಲೆಯಾದ ಕುಟುಂಬಗಳಿಗೆ ತಕ್ಷಣವೇ ಅಗತ್ಯ ಪರಿಹಾರವನ್ನು ಘೋಷಿಸುವಂತೆ ಸಿಪಿಐ(ಎಂ) ಜಿಲ್ಲಾ ಸಮಿತಿ ರಾಜ್ಯ ಸರಕಾರವನ್ನು ಒತ್ತಾಯಿಸುತ್ತದೆ.

(Visited 11 times, 1 visits today)

Related posts